Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನದಿಪಾತ್ರಗಳಿಗೆ ಡಿಸಿ ಭೇಟಿ: ಪ್ರವಾಹ ನಿರ್ವಹಣೆ ಸಿದ್ಧತೆ ಪರಿಶೀಲನೆ

ಬೆಳಗಾವಿ: ಮಹಾರಾಷ್ಟ್ರ ಹಾಗೂ ಜಿಲ್ಲೆಯಾದ್ಯಂತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಿವಿಧೆಡೆ ಭೇಟಿ ನೀಡಿದರು. ಘಟಪ್ರಭಾ, ಕೃಷ್ಣಾ, ಹಿರಣ್ಯಕೇಶಿ ನದಿಪಾತ್ರದ ವಿವಿಧ ಪ್ರದೇಶಗಳನ್ನು ಪರಿಶೀಲಿಸಿದರು.

ಸುತಗಟ್ಟಿ ಬಳಿ ಘಟಪ್ರಭಾ ನದಿಯ ಸೇತುವೆ ಬಳಿ ನದಿಯ‌ ಒಳಹರಿವು ಪ್ರಮಾಣ, ಪ್ರಸ್ತುತ ನೀರಿನ ಪ್ರಮಾಣದ ಬಗ್ಗೆ ಅಧಿಕಾರಿಗಳಿಂದ‌ ಮಾಹಿತಿ ಪಡೆದುಕೊಂಡರು.

ಸಂಕೇಶ್ವರಕ್ಕೆ‌ ತೆರಳಿದ ಅವರು, ಸಂಭವನೀಯ ಪ್ರವಾಹದಿಂದ ಬಾಧಿತಗೊಳ್ಳಬಹುದಾದ ಪ್ರದೇಶಗಳನ್ನು ವೀಕ್ಷಿಸಿದರು.
ಕಳೆದ ಸಲ ಪ್ರವಾಹ ಬಂದಾಗ‌ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ಸಂಭವನೀಯ ಪ್ರವಾಹ ನಿರ್ವಹಣೆಗೆ ಎಲ್ಲ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ತಹಶೀಲ್ದಾರರು, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕೆಳಹಂತದಲ್ಲಿರುವ ಸೇತುವೆಗಳು ಮುಳುಗಡೆಯಾದಾಗ ಎಚ್ಚರಿಕೆ ಫಲಕಗಳನ್ನು ಅಳವಡಿಸಿ ಜನರು ದಾಟದಂತೆ ಬ್ಯಾರಿಕೇಡ್ ಹಾಕಬೇಕು ಎಂದು ತಿಳಿಸಿದರು.

2019 ರ ಪ್ರವಾಹ ಸಂದರ್ಭದಲ್ಲಿ ಸ್ಥಾಪಿಸಲಾಗಿದ್ದ‌ ಕಾಳಜಿ ಕೇಂದ್ರಗಳಂತೆ ಈ ಬಾರಿಯೂ ಈಗಾಗಲೇ ಕಾಳಜಿ ಕೇಂದ್ರಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿರುತ್ತದೆ ಎಂದು ಹುಕ್ಕೇರಿ ತಹಶೀಲ್ದಾರ ಮಂಜುಳಾ ನಾಯಕ ವಿವರಿಸಿದರು.

ಚಿಕ್ಕೋಡಿ ತಾಲ್ಲೂಕಿನ ಮಾಂಜರಿ‌ಯ ಸೇತುವೆ ಬಳಿ ಕೃಷ್ಣಾ‌ ನದಿಯ ಒಳಹರಿವು ವೀಕ್ಷಿಸಿದರು. ಯಡೂರ ಗ್ರಾಮದ ಬಳಿ ಬೋಟ್ ಮೂಲಕ ಕೃಷ್ಣಾ ನದಿಯಲ್ಲಿ ಸಂಚರಿಸಿದ ಡಿಸಿ, ತುರ್ತು ಸಂದರ್ಭದಲ್ಲಿ ಜನರು, ಜಾನುವಾರುಗಳ ರಕ್ಷಣೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದರು.

ಮಹಾರಾಷ್ಟ್ರದಲ್ಲಿ ವ್ಯಾಪಕ‌ ಮಳೆಯಾಗುತ್ತಿದ್ದು, ಅದೇ ರೀತಿ ಜಿಲ್ಲೆಯಲ್ಲಿಯೂ ಹಲವು ದಿನಗಳಿಂದ ಮಳೆಯಾಗುತ್ತಿರುವುದರಿಂದ ಸದಾ ಎಚ್ಚರಿಕೆ ವಹಿಸಬೇಕು.
ನದಿಯ ಒಳ ಹರಿವಿನ ಮೇಲೆ ನಿರಂತರ ನಿಗಾ ವಹಿಸವುದರ ಜತೆಗೆ ತುರ್ತು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಬೋಟ್ ಗಳು ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದರು.

ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ‌ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಸದ್ಯಕ್ಕೆ ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ‌ ಉದ್ಭವಿಸಿಲ್ಲ; ಆದಾಗ್ಯೂ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.
ಈಗಾಗಲೇ 26 ಬೋಟ್ ಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗಿದೆ. ಅಗತ್ಯಬಿದ್ದರೆ ಹೆಚ್ಚುವರಿ ಬೋಟ್ ಗಳನ್ನು ಕಾರವಾರದಿಂದ ತರಿಸಲಾಗುವುದು ಎಂದು ಹೇಳಿದರು.

ಚಿಕ್ಕೋಡಿ ಉಪ ವಿಭಾಗಾಧಿಕಾರಿ ಬಸವರಾಜ ಸಂಪಗಾವಿ, ತಹಶೀಲ್ದಾರ ಕುಲಕರ್ಣಿ ಸೇರಿದಂತೆ ಕಂದಾಯ‌ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ