Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಸಂಸತ್ತಿನಲ್ಲಿ ಡಿ.ಕೆ. ಸುರೇಶ್ ಅವರಿಗೆ ಮಾತನಾಡಲು ಅವಕಾಶ ಕೊಡದೆ ಧ್ವನಿ ಅಡಗಿಸುವ ಯತ್ನ ನಡೆದಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪ

ದೆಹಲಿ :

“ಸಂಸತ್ತಿನಲ್ಲಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಮಾತನಾಡಲೂ ಅವಕಾಶ ಕೊಡದೆ, ನಮ್ಮ ಧ್ವನಿ ಅಡಗಿಸುವ ಯತ್ನ ನಡೆದಿದೆ. ಜತೆಗೆ ಕೇಂದ್ರ ಸರ್ಕಾರ ರಾಜ್ಯದ ಪ್ರತಿ ಬಡವನ ಹೊಟ್ಟೆ ಮೇಲೆ ಹೊಡೆಯುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿಯಲ್ಲಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು “ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ಮಾತಿನ ನಂತರ ಕಲಾಪ ಅಂತ್ಯಗೊಳಿಸಿ, ರಾಜ್ಯದ ಪರ ಸುರೇಶ್ ಅವರ ಧ್ವನಿ ಎತ್ತಲು ಅವಕಾಶ ಕೊಡದೆ ಅನ್ಯಾಯ ಮಾಡಲಾಗಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ರಾಜ್ಯದ ಪರವಾಗಿ ಮಾತನಾಡದೆ ಪಕ್ಷಪಾತಿಯಾಗಿ ಮಾತನಾಡುತ್ತಿದ್ದರು. ನಮ್ಮ ಪಕ್ಷದ ಎಲ್ಲಾ ಮಂತ್ರಿಗಳು, ಶಾಸಕರು, ಸಂಸದರು ದೆಹಲಿಗೆ ಬಂದು ರಾಜ್ಯದ ಪರ ದನಿ ಎತ್ತಿದರು. ಈ ಬಗ್ಗೆ ಬಿಜೆಪಿ ಎಂಪಿಗಳಿಗೆ ನಾಚಿಕೆಯಾಗಬೇಕು.

ನಾವು ರಾಜ್ಯದ ಕೂಲಿ ಕಾರ್ಮಿಕರ ಪರವಾಗಿ ಹೋರಾಡುತ್ತೇವೆ. ಉದ್ಯೋಗ ಖಾತ್ರಿ ಯೋಜನೆ ಹಾಗೂ ರಾಜ್ಯದ ಅಭಿವೃದ್ದಿಗೆ ಬೇಕಾದ ಅನುದಾನಕ್ಕಾಗಿ ಹೋರಾಡುತ್ತೇವೆ.

ಕರ್ನಾಟಕ ಸರ್ಕಾರ ನೀಡಿರುವ ಅಂಕಿ-ಅಂಶಗಳು ಸುಳ್ಳು ಎಂದು ಬಿಜೆಪಿ ಹೇಳುತ್ತಿದೆ ಎಂದು ಕೇಳಿದಾಗ “ಬಿಜೆಪಿಯವರು ಸುಳ್ಳು ಎನ್ನುತ್ತಿದ್ದಾರೆ. ನಾವು ಸತ್ಯ ಎನ್ನುತ್ತಿದ್ದೇವೆ. ಬಿಜೆಪಿಯವರು ಅಧಿವೇಶನದಲ್ಲಿ ಶ್ವೇತಪತ್ರ ಹೊರಡಿಸಬೇಕು ಎಂದು ಹೇಳುತ್ತಿದ್ದಾರೆ. ನಾವು ಶ್ವೇತ ಪತ್ರವನ್ನೇ ಅವರ ಮುಂದೆ ಇಡುತ್ತೇವೆ. ನಾವು ಯಾವುದೇ ಸುಳ್ಳು ಹೇಳುತ್ತಿಲ್ಲ.

ಕೇಂದ್ರ ಬಜೆಟ್ ಅನ್ನು ನಾನು ತಯಾರು ಮಾಡಿಲ್ಲ, ಕೇಂದ್ರ ಸರ್ಕಾರವೇ ತಯಾರು ಮಾಡಿದೆ. ಅದರಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಕೊಡುತ್ತೇವೆ ಎಂದು ಹೇಳಿದ್ದರು. ಹಣಕಾಸು ಆಯೋಗ ಬೆಂಗಳೂರಿಗೆ 5-6 ಸಾವಿರ ಕೋಟಿ ಕೊಡಬೇಕು ಎಂದು ಶಿಫಾರಸ್ಸು ಮಾಡಿತ್ತು, ಇವನ್ನು ಕೊಟ್ಟಿದ್ದಾರೆಯೇ?

ಮುಖ್ಯಮಂತ್ರಿಗಳು ಮತ್ತು ಸಚಿವರಾದ ಕೃಷ್ಣಬೈರೇಗೌಡರು ಬರಪರಿಹಾರ ಬಿಡುಗಡೆ ಮಾಡಲು ಮನವಿ ಕೊಟ್ಟರೂ ಏಕೆ ಒಂದೂ ರೂಪಾಯಿಯನ್ನೂ ಕೊಟ್ಟಿಲ್ಲ” ಎಂದು ಪ್ರಶ್ನಿಸಿದರು.

ಬರಪರಿಹಾರವಾಗಿ ರಾಜ್ಯಕ್ಕೆ 6 ಸಾವಿರ ಕೋಟಿಯನ್ನು ಮುಂಗಡವಾಗಿ ನೀಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಸ್ಪಷ್ಟನೆ ಕೊಟ್ಟಿದ್ದಾರೆ ಎಂದಾಗ “ಒಂದೇ ಒಂದು ರೂಪಾಯಿಯನ್ನು ಕೊಟ್ಟಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳು ವಿಧಾನಸಭೆ ಅಧಿವೇಶನದಲ್ಲಿ ಉತ್ತರ ನೀಡಲಿದ್ದಾರೆ” ಎಂದರು.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರು