Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅನಂತಕುಮಾರ್ ಇದ್ದಿದ್ದರೆ ಕಾವೇರಿ ಇಷ್ಟರ ಮಟ್ಟಿಗೆ ವಿವಾದ ಆಗುತ್ತಿರಲಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

 

ಬೆಂಗಳೂರು:

"ಅನಂತಕುಮಾರ್ ಅವರು ಇದ್ದಿದ್ದರೇ ಯಾವುದೇ ಕಾರಣಕ್ಕೂ ಕಾವೇರಿ ವಿವಾದ ಇಷ್ಟರಮಟ್ಟಿಗೆ ಹೋಗಲು ಬಿಡುತ್ತಿರಲಿಲ್ಲ. ಅವರು ಅಜಾತಶತ್ರು" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಬೆಂಗಳೂರಿನಲ್ಲಿ ಶನಿವಾರ ನಡೆದ ಅನಂತ ನಮನ -64 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು;

"ಅನಂತಕುಮಾರ್ ಕೇಂದ್ರ ಸಚಿವರಾಗಿದ್ದಾಗ ಕಾವೇರಿ ನೀರಿನ ಬಗ್ಗೆ ರಾತ್ರೋರಾತ್ರಿ ಅಫೀಡವಿಟ್ ಬದಲಾಯಿಸಿ ಕರ್ನಾಟಕದ ಪರವಾಗಿ ನಿಂತಿದ್ದರು. ರಾಜ್ಯದ ಹಿತಾಸಕ್ತಿಗೆ ಯಾವುದೇ ತೊಂದರೆ ತೆಗೆದುಕೊಳ್ಳಲು ಅವರು ಸದಾ ತಯಾರಿರುತ್ತಿದ್ದರು.

1985 ರಲ್ಲಿ ನನಗೆ ಮೊದಲ ಬಾರಿಗೆ ವಿಧಾನಸಭೆ ಟಿಕೆಟ್ ಸಿಕ್ಕಿದಾಗ, ಅನಂತ್‌ಕುಮಾರ್ ರಹಸ್ಯವಾಗಿ 5 ಸಾವಿರ ಹಣ ನೀಡಿದ್ದರು. ರಾಜ್ಯದ ಪರವಾಗಿ ನಿಲ್ಲುತ್ತಿದ್ದ ಅವರನ್ನು ಸರ್ವಪಕ್ಷ ಸಭೆಯಲ್ಲಿ ಎಲ್ಲರೂ ನೆನಪಿಸಿಕೊಂಡರು.

*ಸಹೋದರಿ ತೇಜಸ್ವಿನಿ ರಾಜಕೀಯದಲ್ಲಿ ಮುನ್ನುಗ್ಗಬೇಕು*

ನನ್ನ ಸಹೋದರಿ ತೇಜಸ್ವಿನಿ ಧೈರ್ಯ ಮಾಡಿ ರಾಜಕೀಯದಲ್ಲಿ ಮುನ್ನುಗ್ಗಬೇಕು. ಅನಂತಕುಮಾರ್ ಅವರ ಜೊತೆ ಸಂಸಾರ ಮಾಡಿ ನಿಮ್ಮದೇ ಆದ ರಾಜಕೀಯ ಜ್ಞಾನವಿದೆ, ನೀವು ರಾಜಕೀಯಕ್ಕೆ ಬರಬೇಕು.

ಎಷ್ಟೋ ಹಸುಗಳು ಹುಟ್ಟುತ್ತವೆ, ಆದರೆ ಎಲ್ಲವೂ ಬಸವ ಆಗಲು ಸಾಧ್ಯವಿಲ್ಲ. ನೀವು ಇಲ್ಲೇ ಅಡುಗೆ ಮನೆಯಲ್ಲಿ ಅದಮ್ಯ ಚೇತನದ ಜೊತೆಯಲ್ಲೇ ಇರಬೇಕಾಗುತ್ತದೆ. ನಿಮ್ಮ ಹಿಂದೆ ದೊಡ್ಡ ಪಡೆ ಇದೆ, ಸಮಾಜವಿದೆ. ಮುನ್ನುಗ್ಗಿ, ನಿಮ್ಮನ್ನು ನಂಬಿಕೊಂಡಿರುವ ಹಿಂಬಾಲಕರನ್ನು ರಕ್ಷಣೆ ಮಾಡಿ.

ತೇಜಸ್ವಿನಿ ಅವರೇ ನೀವು ಮುನ್ನುಗ್ಗಬೇಕು‌. ಹೊಲವನ್ನ ಉಳುವೆ ಮಾಡದಿದ್ದರೆ ಮಟ್ಟ ಆಗುವುದಿಲ್ಲ, ಶಿಲೆ ಶಿಲ್ಪಿ ಕೈಗೆ ಸಿಗದಿದ್ದರೆ ಕಲೆ ಅರಳುವುದಿಲ್ಲ, ಕಲ್ಲು ಪ್ರಕೃತಿ, ಕಡೆದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ಈ ಕಾರಣಕ್ಕೆ ನೀವು ರಾಜಕಾರಣದಲ್ಲಿ ಇರಬೇಕು ಎಂದು ಸಲಹೆ ‌ನೀಡುತ್ತೇನೆ.

ನಿಮ್ಮ ಇತಿಹಾಸವನ್ನು ಯಾರೂ ಬದಲಾವಣೆ ಮಾಡಲು, ಮುಚ್ಚಿಹಾಕಲು ಆಗುವುದಿಲ್ಲ. ಒಳ್ಳೆ ಕೆಲಸ ಮಾಡಿ ನಿಮ್ಮದೇ ಆದ ಛಾಪನ್ನು ಮೂಡಿಸಿಕೊಂಡಿದ್ದೀರಿ. ನಿಮ್ಮ ಜೊತೆ ರಾಜಕೀಯ ಭಿನ್ನಾಭಿಪ್ರಾಯ ಇರಬಹುದು. ಆದರೆ ನಿಮ್ಮ ಬಳಿ ಮೃದು ಹೃದಯವಿದೆ. ಅನಂತಕುಮಾರ್ ಅವರು ಹೆಜ್ಜೆ ಗುರುತುಗಳನ್ನು ಬಿಟ್ಟು ಹೋಗಿದ್ದಾರೆ,‌ ನೀವು ಹೆಜ್ಜೆ ಗುರುತು ಮೂಡಿಸಿ.

*ರಾಜ್ಯದಲ್ಲಿ ಮೆಟ್ರೋ ಬರಲು ಎಸ್.ಎಂ. ಕೃಷ್ಣ ಅವರು ಮತ್ತು ಅನಂತಕುಮಾರ್ ಅವರೇ ಕಾರಣ*

ನಾನು ಎಸ್‌.ಎಂ.ಕೃಷ್ಣ ಅವರ ಸರ್ಕಾರದಲ್ಲಿ ನಗರಾಭಿವೃದ್ಧಿ ಸಚಿವನಾಗಿದ್ದೆ. ಕೇಂದ್ರದಲ್ಲಿ ಅನಂತಕುಮಾರ್ ನಗರಾಭಿವೃದ್ಧಿ ಸಚಿವರಾಗಿದ್ದರು. ಹಿಂದಿನ ಜೆ.ಎಚ್.ಪಟೇಲ್ ಸರ್ಕಾರ ಮೋನೊ ರೈಲಿಗೆ ಒಪ್ಪಿಗೆ ನೀಡಿತ್ತು. ಹುಡ್ಕೋ ಸಂಸ್ಥೆಯಿಂದ ನನ್ನನ್ನು ಹಾಗೂ ಇತರೇ ಸ್ನೇಹಿತರನ್ನು ವಿದೇಶಕ್ಕೆ ಮೆಟ್ರೊ ಕಾರ್ಯಾಚರಣೆ ಬಗ್ಗೆ ಅಧ್ಯಯನ ಮಾಡಲು ಪ್ರವಾಸ ಕಳುಹಿಸಿದ್ದರು. ಶ್ರೀಧರನ್ ಅವರು ಜೊತೆಯಲ್ಲಿ ಇದ್ದರು. ನಾವು ಮೆಟ್ರೋ ಇದ್ದರೆ ಅನುಕೂಲ ಎಂದು ಎಸ್‌.ಎಂ.ಕೃಷ್ಣ ಅವರಿಗೆ ವರದಿ ನೀಡಿದೆವು. ಅವರು ಅನಂತಕುಮಾರ್ ಅವರನ್ನು ಭೇಟಿಯಾಗಲು ಹೇಳಿದರು.

ಕೇವಲ ಒಂದೇ ದಿನದಲ್ಲಿ ಪ್ರಧಾನಿಗಳಾದ ವಾಜಪೇಯಿ ಅವರನ್ನು ಭೇಟಿ ಮಾಡಿಸಿ, ನಿಮ್ಮ ಸಮಿತಿಯ ವರದಿ ಸರಿಯಾಗಿದೆ ಎಂದು ಹೇಳಿ, ಕೇಂದ್ರದಿಂದ ಒಪ್ಪಿಗೆ ಕೊಡಿಸಿದರು. ಯಾರು ಏನೇ ಹೇಳಿದರೂ ಬೆಂಗಳೂರು ಮೆಟ್ರೋ ಅನಂತ ಕುಮಾರ್ ಅವರ ಹಾಗೂ ಕೃಷ್ಣ ಅವರ ಕೊಡುಗೆ.

ನಾನು ದೇವರು ಹಾಗೂ ಧರ್ಮದ ಬಗ್ಗೆ ನಂಬಿಕೆ ಇರುವವನು. ಬಿಟ್ಟು ಹೋಗುವುದಕ್ಕಿಂತ ಕೊಟ್ಟು ಹೋಗುವುದು ಲೇಸಯ್ಯ ಎನ್ನುವ ಪುರಂದರದಾಸರ ಮಾತಿನಂತೆ ಬದುಕಿದವರು ಅನಂತ್‌ಕುಮಾರ್. ಆದರೆ ಅವರ ವಿಚಾರದಲ್ಲಿ ದೇವರು ಕ್ರೂರಿಯಾಗಿಬಿಟ್ಟ.

ಯಾವಾಗಲೂ ಎಲ್ಲರನ್ನೂ ನಗಿಸುತ್ತಾ ಇದ್ದವರು. ಡಿವಿಜಿ ಅವರ ನಗುವು ಸಹಜದ ಧರ್ಮ, ನಗಿಸುವುದು ಪರಧರ್ಮ, ನಗುವ ಕೇಳುತ ನಗುವುದತಿಶಯದ ಧರ್ಮ, ನಗುವ ನಗಿಸುವ ನಗಿಸಿ ನಗುತ ಬಾಳುವ ಎಂಬ ಕಗ್ಗದಂತೆ ಬಾಳಿದವವರು ಅನಂತಕುಮಾರ್.

ಪರೋಪಕಾರಾಯ ವಹಂತಿ ನದ್ಯಃ ಪರೋಪಕಾರಾಯ ದುಹಂತಿ ಗಾವಃ ಪರೋಪಕಾರಾರ್ಥಮ್ ಇದಂ ಶರೀರಮ್
ಮರ- ಗಿಡಗಳು, ಹಸುಗಳು, ನದಿಗಳು ಸ್ವಂತಕ್ಕೆ ಏನನ್ನೂ ಕೇಳುವುದಿಲ್ಲ,‌ಇವುಗಳು ಇರುವುದೇ ಪ್ರಕೃತಿಯ ಸೇವೆಗೆ, ಅದೇ ರೀತಿ ಅನಂತಕುಮಾರ್ ಅವರು ಸ್ವಂತಕ್ಕೆ ಏನೂ ಮಾಡಿಕೊಂಡಿಲ್ಲ, ಅವರು ಸೇವೆ ಮಾಡಿರುವುದೇ ಸಮಾಜಕ್ಕೆ.

40 ವರ್ಷಗಳಲ್ಲಿ ನೂರಾರು ನಾಯಕರನ್ನು ತಯಾರು ಮಾಡಿ, ಅವರನ್ನು ಅನಾಥರನ್ನಾಗಿ ಮಾಡಿ ಹೋಗಿದ್ದಾರೆ‌. ಅವರು ಕೇವಲ ತೇಜಸ್ವಿನಿ ಅವರನ್ನು ಮಾತ್ರ ಬಿಟ್ಟು ಹೋಗಿಲ್ಲ.

ನನಗೆ ವಿದ್ಯಾರ್ಥಿ ದೆಸೆಯಿಂದಲೂ ಅನಂತ್‌ಕುಮಾರ್ ಅವರು ತುಂಬಾ ಆತ್ಮೀಯರು. ಅವರು ಎಬಿವಿಪಿ ನಾಯಕರಾಗಿದ್ದರು, ಆಗಾಗ್ಗೆ ಜನರಲ್ ಹಾಸ್ಟೆಲ್‌ಗೆ ಬಂದು ಕಾಲ ಕಳೆಯುತ್ತಿದ್ದರು.

ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ, ಪದುಮನಾಭನ ಪಾದ ಭಜನೆ ಪರಮ ಸುಖವಯ್ಯ, ಎಂಬ ಮಾತಿನಂತೆ ಇಂದು ನಾವೆಲ್ಲ ಅನಂತಪದುಮನಾಭ ಅವರನ್ನು ನೆನಪಿಸಿ ಕೊಂಡಿದ್ದೇವೆ. ಅವರ ಕನಸುಗಳನ್ನು ನನಸಾಗಿಸೋಣ.

ಅದಮ್ಯ ಚೇತನಕ್ಕೆ ಭೇಟಿ :
ಅನಂತ ನಮನ 64 ಕಾರ್ಯಕ್ರಮಕ್ಕೂ ಮೊದಲು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಗವಿಪುರಂ ಗುಟ್ಟಹಳ್ಳಿಯ ಅದಮ್ಯ ಚೇತನ ಫೌಂಡೇಶನ್ ನ ಅಡುಗೆ ಮನೆಗೆ ಭೇಟಿ ನೀಡಿ ವೀಕ್ಷಿಸಿದರು. ಮಾಜಿ ಸಿಎಂ ಯಡಿಯೂರಪ್ಪ, ತೇಜಸ್ವಿನಿ ಅನಂತಕುಮಾರ್ ಮತ್ತಿತರರು ಇದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ