Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೋದಿ ಅವರ ನೂರು ದಿನಗಳ ಕಾರ್ಯಕ್ರಮ ರಾಜಕೀಯ ತಂತ್ರದ ಭಾಗ: ಡಿಸಿಎಂ ಡಿ. ಕೆ. ಶಿವಕುಮಾರ್

 

ಬೆಂಗಳೂರು :
"ಪ್ರಧಾನಿ ನರೇಂದ್ರ ಮೋದಿ ಅವರ ನೂರು ದಿನಗಳ ಕಾರ್ಯಕ್ರಮ ರಾಜಕೀಯ ತಂತ್ರದ ಭಾಗವಷ್ಟೇ. ಜನರ ಮನಸ್ಥಿತಿಯನ್ನು ಸಜ್ಜು ಮಾಡುವ ವ್ಯಾಖ್ಯಾನ ಬಿಟ್ಟರೆ ಇದರಲ್ಲಿ ಬೇರೇನೂ ಇಲ್ಲ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.

ವಿಧಾನಸೌಧದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯಿಸಿದರು.

"ನಾವು ಸಹ ರಾಜಕೀಯ ತಂತ್ರ ಹೊಂದಿದ್ದೇವೆ. ಪ್ರತಿಯೊಂದು ಪಕ್ಷವು ಒಂದೊಂದು ತಂತ್ರ ಅನುಸರಿಸುತ್ತವೆ. ಎಕ್ಸಿಟ್ ಪೋಲ್ ಸುಳ್ಳಾಗಲಿದೆ. ಇಂಡಿಯಾ ಒಕ್ಕೂಟ ಬಹುಮತ ಪಡೆಯುತ್ತದೆ ಮತ್ತು ಸರ್ಕಾರ ರಚಿಸುತ್ತದೆ" ಎಂದು ಹೇಳಿದರು.

*ಮಳೆ ಹಾನಿ ಪ್ರದೇಶಗಳಿಗೆ ಭೇಟಿ:*

ಬೆಂಗಳೂರಿನ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುವಿರಾ ಎಂದು ಕೇಳಿದಾಗ "ಖಂಡಿತವಾಗಿ ಭೇಟಿ ನೀಡುತ್ತೇನೆ. ಹೆಚ್ಚು ಮಳೆ ಸುರಿದು ತೊಂದರೆ ಉಂಟಾಗಿರುವ ಭಾಗಗಳನ್ನು ಪರಿಶೀಲನೆ ನಡೆಸಲಾಗುವುದು" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ತಿಳಿಸಿದರು.

"ಪರಿಷತ್ ಚುನಾವಣೆ ಮತದಾನ ಮುಗಿದ ನಂತರ ಅಧಿಕಾರಿಗಳ ಸಭೆ ನಡೆಸಲಾಗುವುದು. ತೊಂದರೆಗಳನ್ನು ನಿವಾರಿಸಲಾಗುವುದು" ಎಂದರು.

ಬಿ ಫಾರಂ ವಿತರಣೆ : ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯುತ್ತಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾದ ಡಾ. ಯತೀಂದ್ರ, ಬೋಸರಾಜು, ಗೋವಿಂದರಾಜು, ಬಿಲ್ಕಿಸ್ ಬಾನು, ಐವಾನ್ ಡಿಸೋಜಾ, ವಸಂತ ಕುಮಾರ್, ಜಗದೇವ್ ಗುತ್ತೇದಾರ್ ಅವರಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸೋಮವಾರ ಬಿ ಫಾರಂ ವಿತರಿಸಿದರು. ಶಾಸಕ ಅಶೋಕ್ ಪಟ್ಟಣ, ಹಿರಿಯ ಮುಖಂಡರಾದ ಹಂಪನಗೌಡ ಬಾದರ್ಲಿ ಮತ್ತಿತರರು ಜತೆಗಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ