Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೆಟ್ರೋ ಸುರಂಗ ಮಾರ್ಗ ಕೊರೆಯುವ ಸ್ಥಳಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ

 

ಬೆಂಗಳೂರು : ಬೆಂಗಳೂರು ಮೆಟ್ರೋ ಸುರಂಗ ಮಾರ್ಗದ ಕಾಮಗಾರಿ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರದ ಲಕ್ಕಸಂದ್ರ ಸುರಂಗ ಮಾರ್ಗ ಹಾಗೂ ಮಹಾತ್ಮ ಗಾಂಧಿ ರಸ್ತೆಯ ಸುರಂಗ ಸ್ಟೇಷನ್ ಬಳಿ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಶುಕ್ರವಾರ ತೆರಳಿ ಪರಿಶೀಲನೆ ನಡೆಸಿದರು. ಅಧಿಕಾರಿಗಳಿಂದ ಮಾಹಿತಿ ಪಡೆದರು.

ಲಕ್ಕಸಂದ್ರ ಮೆಟ್ರೋ ಸುರಂಗ ಮಾರ್ಗ ಕಾಮಗಾರಿ ಪರಿಶೀಲನೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಹೇಳಿದ್ದಿಷ್ಟು;

"ಮೆಟ್ರೋ ಸುರಂಗ ಕಾಮಗಾರಿ ಬಹಳ ಉತ್ತಮವಾಗಿ ಸಾಗುತ್ತಿದೆ. ಅಧಿಕಾರಿಗಳು ಎಷ್ಟೇ ಹೇಳಿದರೂ ಕಾಮಗಾರಿಯ ಪ್ರಗತಿಯನ್ನು ನಾನು ಕಣ್ಣಾರೆ ನೋಡಬೇಕು ಎಂದು ಇಲ್ಲಿಗೆ ಭೇಟಿ ನೀಡಿದ್ದೇನೆ.

ಅಧಿಕಾರಿಗಳ ಮಾಹಿತಿ ಪ್ರಕಾರ 20.9 ಕಿಮೀ ಸುರಂಗ ಮಾರ್ಗ ಆಗಿದೆ. ಒಟ್ಟು 18 ನಿಲ್ದಾಣಗಳನ್ನು ಮಾಡಲಾಗುತ್ತಿದೆ. ನಾಲ್ಕು ಪ್ಯಾಕೆಜ್ ನಲ್ಲಿ ಈ ಯೋಜನೆ ತೆಗೆದುಕೊಳ್ಳಲಾಗಿದೆ.

ಕೆಲವೆಡೆ ಕಾಮಗಾರಿ ಪೂರ್ಣಗೊಂಡಿದ್ದರೆ, ಮತ್ತೆ ಕೆಲವು ಕಡೆಗಳಲ್ಲಿ 70%, 80% ಪೂರ್ಣವಾಗಿದೆ. 2025ರ ಮಾರ್ಚ್ ವೇಳೆಗೆ ಈ ಮೆಟ್ರೋ ಕಾಮಗಾರಿ ಪೂರ್ಣವಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳು, ಗುತ್ತಿಗೆದಾರರು, ಸರಕಾರ ಎಲ್ಲರ ಸಹಕಾರ ಬೇಕು.

ಬ್ರ್ಯಾಂಡ್ ಬೆಂಗಳೂರು ನಿರ್ಮಾಣ ಮಾಡಲು ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಿ ಕಾಮಗಾರಿ ತೀವ್ರಗತಿಯಲ್ಲಿ ಸಾಗುತ್ತಿದೆ. ಬೆಂಗಳೂರಿನ ಅಭಿವೃದ್ಧಿಗಾಗಿ ಬಹಳ ದೊಡ್ಡ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುತ್ತಿದೆ.

ಇನ್ನು ಸುರಂಗ ರಸ್ತೆ ನಿರ್ಮಾಣದ ಸಾಧಕ ಬಾಧಕಗಳ ಬಗ್ಗೆ ಅಧ್ಯಯನ ಮಾಡುತ್ತಿದ್ದೇವೆ. ಬೇರೆ ರಾಜ್ಯಗಳಲ್ಲಿ ಹೇಗೆ ಮಾಡಲಾಗುತ್ತಿದೆ ಎಂಬುದನ್ನು ನೋಡುತ್ತಿದ್ದೇವೆ. ಈ ವಿಚಾರವಾಗಿ ಸದ್ಯದಲ್ಲೇ ಮಾಹಿತಿ ನೀಡುತ್ತೇನೆ.

ಈ ಕಾಮಗಾರಿಗಳು ತಾಂತ್ರಿಕವಾಗಿ ನಡೆಯುತ್ತವೆ. ಇವು ಬಹಳ ಸುರಕ್ಷಿತವಾಗಿ ಮಾಡಬೇಕಾದ ಕೆಲಸ. ಹೀಗಾಗಿ ಇದಕ್ಕೆ ಸಮಯ ತೆಗೆದುಕೊಳ್ಳುತ್ತದೆ. ಯಾರು ಟೀಕೆ ಮಾಡುತ್ತಾರೆ ಎಂಬುದು ಮುಖ್ಯ ಅಲ್ಲ."
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ