Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಮರುಪ್ರಶ್ನೆ

ಬೆಳಗಾವಿ:

"ಒಟ್ಟಿಗೆ ಸೇರಿ ಊಟ ಮಾಡುವುದನ್ನು ಬೇಡ ಎಂದು ಹೇಳಲು ಆಗುತ್ತದೆಯೇ? ನನಗೇಕೆ ಅದೆಲ್ಲಾ? ಹೊರಗಡೆಯಿಂದ ಬಂದಿದ್ದೀವಿ. ಎಲ್ಲಾ ಸೇರಿರೋದ್ರಲ್ಲಿ, ಊಟ ಮಾಡೋದ್ರಲ್ಲಿ ತಪ್ಪೇನಿದೆ?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮರುಪ್ರಶ್ನಿಸಿದ್ದಾರೆ.

ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಗುರುವಾರ ರಾತ್ರಿ ಡಿನ್ನರ್ ಮೀಟಿಂಗ್ ನಡೆದಿದೆಯಲ್ಲ ಎಂದು ಕೇಳಿದಾಗ ಡಿಸಿಎಂ ಈ ರೀತಿ ಉತ್ತರಿಸಿದರು.

ಎಲ್ಲ ಸೇರಿ ಊಟ ಮಾಡೋದ್ರಲ್ಲಿ ತಪ್ಪು ಹುಡುಕಬೇಡಿ ಎಂದರು.

ಅಲ್ಲಿ ಬರೀ ನಾಲ್ಕೈದು ಜನ ಸೇರಿದ್ರಂತೆ ಎಂದು ಮಾಧ್ಯಮದವರು ಕೇಳಿದಾಗ, "ಅದು ನನಗ್ಯಾಕೆ ಬೇಕು. ನನ್ನನ್ಯಾಕೆ ಈ ಪ್ರಶ್ನೆ ಕೇಳ್ತೀರಿ" ಎಂದು ಮರು ಪ್ರಶ್ನಿಸಿದರು.

ನಿಮ್ಮನ್ನು ಭ್ರಷ್ಟಾಚಾರದ ಪಿತಾಮಹ ಎಂದು ವಿಜಯೇಂದ್ರ ಕರೆದಿರುವ ಬಗ್ಗೆ ಕೇಳಿದಾಗ, "ವಿಜಯೇಂದ್ರ ಅವರಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡೋಣ. ಹೈಕಮಾಂಡ್ ಗೆ ನಾವು ಎಟಿಎಂ ಎಂದು ವಿಜಯೇಂದ್ರ ಹೇಳಿದ್ದಾರೆ. ಇದನ್ನು ಅವರು ಸಾಬೀತು ಮಾಡಬೇಕು. ಯಾವ ಲೆಕ್ಕಾಚಾರದ ಮೇಲೆ ಅವರು ಆರೋಪ ಮಾಡಿದ್ದಾರೆ. ಇಲ್ಲಿ ಸರಕಾರನಾ ನಾವು ದಿವಾಳಿ ಮಾಡಿ ದುಡ್ಡು ತೆಗೆದುಕೊಂಡು ಹೋಗಿ ಹೈಕಮಾಂಡ್ ಗೆ ಕೊಡುತ್ತಿದ್ದೇವೆ, ನಾವು ಹೈ ಕಮಾಂಡ್ ಗೆ ಎಟಿಎಂ ಎಂದು ಹೇಳಿದ್ದಾರೆ. ಈಗ ಏನು ಹೇಳಬೇಕು ಅದನ್ನು ಹೇಳಿದ್ದೇನೆ. ಉಳಿದ ಉತ್ತರಕ್ಕೆ ಸಮಯ ಬರುತ್ತದೆ, ಕಾಲವೇ ಉತ್ತರ ನೀಡುತ್ತದೆ. ಅವರಿಗೆ ಏನು ಬೇಕೋ ಆ ಉತ್ತರ ಈಗಾಗಲೇ ನೀಡಿದ್ದೇನೆ" ಎಂದರು.

ತಮ್ಮ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಅವರ ಕಾರು ಅಪಘಾತದ ಬಗ್ಗೆ ಕೇಳಿದಾಗ, "ರಾಜೇಂದ್ರ ಪ್ರಸಾದ್ ಅವರನ್ನು ವೈದ್ಯರು ತಪಾಸಣೆ ನಡೆಸಿದ್ದಾರೆ. ಯಾವುದೇ ಆತಂಕ ಪಡಬೇಕಿಲ್ಲ. ಕತ್ತಿನ ಬಳಿ ನೋವಿದೆ. ಒಂದೆರಡು ದಿನ ವಿಶ್ರಾಂತಿ ಬೇಕು ಎಂದು ಹೇಳಿದ್ದಾರೆ. ತೀವ್ರ ತೆರನಾದ ತೊಂದರೆ ಉಂಟಾಗಿಲ್ಲ. ದೇವಿ ಯಲ್ಲಮ್ಮನೇ ಕಾಪಾಡಿದ್ದಾಳೆ" ಎಂದರು.

"ಒಬ್ಬ ಯುವಕನ ಸಾವಾಗಿದೆ. ಆತನ ಕುಟುಂಬದವರನ್ನು ಭೇಟಿ ಮಾಡಲು ಮಂತ್ರಿಗಳಿಗೆ ತಿಳಿಸುತ್ತೇನೆ. ನನಗೂ ಈ ಬಗ್ಗೆ ನೋವಿದೆ. ಮೃತಪಟ್ಟವನು ಇನ್ನೂ ಯುವಕ, ವಾಹನ ಚಾಲಕನಿಗೂ ಎದೆಯ ಬಳಿ ನೋವಾಗಿದೆ. ದೇವಸ್ಥಾನಕ್ಕೆ ತೆರಳಿ ಬರುವಾಗ ವಾಹನ ಅಡ್ಡ ಬಂದ ಕಾರಣಕ್ಕೆ ಈ ದುರ್ಘಟನೆ ನಡೆದಿದ್ದು, ಮೃತನ ಕುಟುಂಬದವರಿಗೆ ಸೂಕ್ತ ಪರಿಹಾರ ನೀಡಲಾಗುವುದು" ಎಂದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆಖ್ಯಾತ ನಟ ದರ್ಶನ್ ಗೆ ಇನ್ನೊಂದು ವರ್ಷ ಜಾಮೀನು ಇಲ್ಲ : ಸುಪ್ರೀಂ ಕೋರ್ಟ್ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಜನಗಣತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಶಿಕ್ಷಕಿ ಸಾವುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ದಾರುಣ ಸಾವುಒಂದೇ ಸಲ 224 ವಿಧಾನ ಸಭೆ ಸ್ಥಾನ ಗೆದ್ದು ಸಿಎಂ ಆಗುತ್ತೇನೆ ಎಂದಿದ್ದ ನೀಲಣ್ಣನವರಿಗೆ ಅಧಿಕಾರಿಗಳಿಂದ ಶಾಕ್ ..!ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವುಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ