Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶ್ರಮದಿಂದ ಬದುಕು ಕಟ್ಟಿಕೊಂಡ ಗಾಣಿಗ ಸಮುದಾಯ: ಮನತುಂಬಿ ಶ್ಲಾಘಿಸಿದ ಡಿಸಿಎಂ

ಬೆಂಗಳೂರು : "ದೀಪ ಉರಿಯುವಾಗ ಎಣ್ಣೆ, ಬತ್ತಿ ಏನೂ ಕಾಣುವುದಿಲ್ಲ ಕಾಣುವುದು ಬೆಳಕು ಮಾತ್ರ. ಗಾಣಿಗ ಸಮುದಾಯ ತಯಾರಿಸುವ ಎಣ್ಣೆ ದೀಪ, ಹಾಗೂ ಮನುಷ್ಯನನ್ನು ತಂಪಾಗಿಸಲು ತಲೆಗೂ ಬೇಕು. ಗಾಣಿಗ ಸಮುದಾಯ ಶ್ರಮದ ಮೂಲಕ ಬದುಕು ಕಟ್ಟಿಕೊಂಡಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯ ಪಟ್ಟರು.



ಯಜಮಾನ್ ಜನೋಪಕಾರಿ ದೊಡ್ಡಣ್ಣ ಶೆಟ್ಟಿ ಅವರ 103ನೇ ವಾರ್ಷಿಕ ಆರಾಧನಾ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು “ಯಾವುದೇ ಮನುಷ್ಯ ಇದೇ ಜಾತಿ, ಧರ್ಮದಲ್ಲಿ ಹುಟ್ಟಬೇಕು ಎಂದು ಹರಕೆ ಹೊತ್ತಿರುವುದಿಲ್ಲ. ಹುಟ್ಟಿದ ನಂತರ ಜಾತ್ಯಾತೀತವಾಗಿ ಬದುಕಬೇಕು. ದೊಡ್ಡಣ್ಣ ಶೆಟ್ಟರು ಬೇದ ಭಾವ ಮಾಡದೆ ಬದುಕಿದ ಕಾರಣಕ್ಕೆ ಅವರನ್ನು ನೆನಸುತ್ತಿದ್ದೇವೆ. ನಿಮ್ಮ ವೃತ್ತಿ, ಸಮುದಾಯವನ್ನು ಉಳಿಸಿಕೊಳ್ಳಲು ಸಂಘಟಿತರಾಗಿ” ಎಂದರು.



"ದೊಡ್ಡಣ್ಣ ಶೆಟ್ಟರು ಬ್ರಿಟಿಷರ ಆಡಳಿತ ಅವಧಿಯಲ್ಲಿಯೇ ಬೆಂಗಳೂರು ಹೃದಯ ಭಾಗದಲ್ಲಿ ಧರ್ಮಾತ್ಮ ಸಂಸ್ಥೆ ಕಟ್ಟಿ ಸಮಾಜದ ಎಲ್ಲಾ ಸಮುದಾಯಗಳ ನೆರವಿಗೆ ನಿಂತ ಮಹಾನುಭಾವ. ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಖಚಿತ ಇದರ ನಡುವೆ ಏನನ್ನು ಗಳಿಸುತ್ತೇವೆ, ಸಾಧಿಸುತ್ತೇವೆ ಎನ್ನುವುದು ಮುಖ್ಯ. ದೊಡ್ಡಣ್ಣ ಶೆಟ್ಟರು ಗತಿಸಿಹೋಗಿ ನೂರು ವರ್ಷಗಳಾದರೂ ಅವರ ನೆನಪು ನಮ್ಮ ನಡುವೆಯಿದೆ” ಎಂದರು.



"ದೇವರು ಯಾರಿಗೆ ವರ, ಶಾಪ ಏನನ್ನೂ ಕೊಡುವುದಿಲ್ಲ. ಸಿಗುವ ಅವಕಾಶದಲ್ಲಿ ಉಪಕಾರ ಮಾಡಿ. ಅನ್ಯ ಕಾರ್ಯಗಳು ಇರುವ ಕಾರಣ ನಿಮಗೆ ಹೆಚ್ಚಿನ ಸಮಯ ನೀಡಲು ಸಾಧ್ಯವಾಗುತ್ತಿಲ್ಲ. ತುಳಿತಕ್ಕೆ ಒಳಗಾಗಿರುವ ಸಮಾಜವು ಹಿಂದುಳಿದಿದ್ದೇವೆ ಎನ್ನುವ ಚಿಂತೆ ಮಾಡಬಾರದು. ನಿಮ್ಮ ಸಮಸ್ಯೆಗಳನ್ನು ನಮಗೆ ತಿಳಿಸಿ ನಾವು ಬಗೆಹರಿಸುತ್ತೇವೆ” ಎಂದು ತಿಳಿಸಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ