Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

DC ಗಳು ಎಂದರೆ ಮಹಾರಾಜರಲ್ಲ: ಸಿಎಂ

ಬೆಂಗಳೂರು : ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ DC ಮತ್ತು CEO ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಈ ಸೂಚನೆ ನೀಡಿದರು.

ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನ ಸಾಮಾನ್ಯರಿಗೆ ತಲುಪಿಸಲು DC-SP-CEO ಗಳು ಕ್ರಿಯಾಶೀಲತೆಯಿಂದ, ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರ್ಕಾರದ ಕಾಳಜಿಗಳು ಜನರಿಗೆ ತಲುಪಲು ಸಾಧ್ಯ ಎಂದರು.

ರಾಜ್ಯದಲ್ಲಿ ಡೆಂಗ್ಯು ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕೆಲಸ ಮಾಡಿ. DC, DHO ಗಳು ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆ ಮಾಡಿ ಕ್ಷಿಪ್ರವಾಗಿ ಕೆಲಸ ಮಾಡಿ ಎಂದು ಸೂಚಿಸಿದರು.

ಇಷ್ಟು ದಿನ ಉದಾಸೀನ, ನಿರ್ಲಕ್ಷ್ಯಕ್ಕೆ, ಕರ್ತವ್ಯಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.

ಮುಖ್ಯಮಂತ್ರಿಗಳ ಆರಂಭಿಕ ಮಾತಿನ ಹೈಲೈಟ್ಸ್...

*DC-CEO ಗಳು, ತಮ್ಮ ಜಿಲ್ಲೆಯ ಸಮಗ್ರ ಮಾಹಿತಿಗಳನ್ನು ಅಂಗೈಯಲ್ಲಿ ಇಟ್ಟುಕೊಂಡು ಉತ್ಸಾಹದಿಂದ ಕೆಲಸ ಮಾಡಬೇಕು. ಆಗ ಮಾತ್ರ ಪ್ರಗತಿ ಮತ್ತು ಅಭಿವೃದ್ಧಿಯ ವೇಗ ಕಾಣಲು ಸಾಧ್ಯ.

*ರಾಜಕಾರಣಿಗಳು, ಅಧಿಕಾರಿಗಳ ಅನುಭವದ ಮೇಲೆ ಆಡಳಿತ ಹೆಚ್ಚು ಪರಿಣಾಮಕಾರಿಯಾಗಿ ಆಗಬೇಕಿತ್ತು.‌ 40 ವರ್ಷಗಳ ಹಿಂದೆ ಅಧಿಕಾರಿಗಳು ಕೆಲಸ ನಿರ್ವಹಿಸುವ ರೀತಿಗೂ, ಇವತ್ತಿನ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ರೀತಿಗೂ ಹೋಲಿಸಿದರೆ ಕಾರ್ಯಾಂಗ ಮತ್ತು ಶಾಸಕಾಂಗ ಈಗ ಹೆಚ್ಚು ಪರಿಣಾಮಕಾರಿಯಾಗಿ, ಗುಣಾತ್ಮಕವಾಗಿ ಕೆಲಸ ಮಾಡುತ್ತಿಲ್ಲ ಎನ್ನುವುದು ಗೊತ್ತಾಗುತ್ತಿದೆ. ಇದು ಬಹಳ ಬೇಸರದ ಸಂಗತಿ.

*ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆ ಪರಸ್ಪರ ಪೂರಕ. ಒಂದು ಇಲ್ಲದಿದ್ದರೆ ಮತ್ತೊಂದು ಇರಲು ಸಾಧ್ಯವಿಲ್ಲ.

*ಕರ್ನಾಟಕ ಗುಡ್ ಗೌರ್ನೆನ್ಸ್ ನಲ್ಲಿ ಮಾದರಿ ರಾಜ್ಯವಾಗಿದೆ ಎನ್ನುವುದನ್ನು ಮರೆಯಬಾರದು. ಈ ಹೆಗ್ಗಳಿಕೆಯನ್ನು ಮುಂದುವರೆಸಿಕೊಂಡು ಹೋಗುವ ಜವಾಬ್ದಾರಿ ನಿಮ್ಮಗಳ ಮೇಲಿದೆ.

*ಜಿಲ್ಲಾಧಿಕಾರಿಗಳು ಯಾವುದೇ ಜಿಲ್ಲೆಗೆ ಹೋಗುವ ಮೊದಲು ಆಯಾ ಜಿಲ್ಲೆಗಳ ಮಾನವ ಅಭಿವೃದ್ಧಿ ಸೂಚ್ಯಂಕಗಳ ಜೊತೆಗೆ ಜಿಲ್ಲೆಯ ಸಮಗ್ರ ಮಾಹಿತಿ ತಿಳಿದುಕೊಳ್ಳಬೇಕು.

*SSLC ಫಲಿತಾಂಶದಲ್ಲಿ ಕೆಲವು ಜಿಲ್ಲೆಗಳಲ್ಲಿ ಕುಸಿತ ಕಂಡಿರುವುದನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ಈ ಬಾರಿ ಕಾಪಿಯನ್ನು ಸಂಪೂರ್ಣ ನಿಲ್ಲಿಸಿದ್ದು ಶ್ಲಾಘನೀಯ. ಆದರೆ ಈ ಕಾರಣಕ್ಕೆ ಫಲಿತಾಂಶ ಕುಸಿತ ಆಯಿತು ಎನ್ನುವ ಸಮರ್ಥನೆ ಸರಿಯಲ್ಲ.

*DC, CEO, ಇಲಾಖಾ ಕಾರ್ಯದರ್ಶಿಗಳ ಜವಾಬ್ದಾರಿ ಇಲ್ಲವಾ ? ಆತ್ಮಾವಲೋಕನ ಮಾಡಿಕೊಂಡು ಪರಿಸ್ಥಿತಿ ಸುಧಾರಿಸಲು ಪ್ರಯತ್ನಿಸಲೇಬೇಕು.

*DDPI, DC, CEO ಗಳು ಒಟ್ಟಿಗೇ ಕುಳಿತು ಚರ್ಚಿಸಿ ಪರಿಸ್ಥಿತಿ ಸುಧಾರಿಸಬೇಕು ಎನ್ನುವ ಸೂಚನೆ ನೀಡಿದರು.

*ಜನಸಂಪರ್ಕ, ಜನಸ್ಪಂದನ ಸಭೆಗಳಲ್ಲಿ 15-20 ಸಾವಿರ ಅರ್ಜಿಗಳು ಬರುತ್ತವೆ. ನೀವು ಸರಿಯಾಗಿ ಸ್ಥಳೀಯವಾಗಿ ಕೆಲಸ ಮಾಡಿದ್ದರೆ ಇಷ್ಟೊಂದು ಮಂದಿ ನನ್ನ ಬಳಿಗೆ ಏಕೆ ಬರುತ್ತಾರೆ ಎಂದು ಪ್ರಶ್ನಿಸಿ, DC, CEO ಗಳು ಇರೋದು ಜನಸಂಪರ್ಕ ಸಭೆಗಳಿಗೆ ಬಂದ ಅರ್ಜಿಗಳನ್ನು Forward ಮಾಡಿ ಮುಚ್ಚಳಿಕೆ ಕೊಟ್ಟು ಕೈತೊಳೆದುಕೊಳ್ಳೋಕಾ ಇರೋದು ? ಪರಿಹಾರ ಕೊಡಿಸುವವರು ಯಾರು? ಇದಕ್ಕೇನಾ ನೀವು ಇರೋದು ಎಂದು ಖಾರವಾಗಿ ಪ್ರಶ್ನಿಸಿದರು. ನೀವು ಪರಿಹಾರ ಕೊಡಲಿಲ್ಲ ಅಂತ ನನ್ನ ತನಕ ಬಂದಿದ್ದಾರೆ. ಜನರ ಸಮಸ್ಯೆಗಳ ಅರ್ಜಿಗಳು ಸಕಾರಾತ್ಮಕವಾಗಿ ವಿಲೇವಾರಿ ಆಗಿಲ್ಲ, ಗುಣಾತ್ಮಕವಾಗಿ ವಿಲೇವಾರಿ ಆಗಿಲ್ಲ ಅಂದರೆ ನಿಮ್ಮ ವಿರುದ್ಧ ಕ್ರಮ ಖಚಿತ ಎಂದು ಎಚ್ಚರಿಸಿದರು.

*ತಹಶೀಲ್ದಾರ್, ಜಿಲ್ಲಾಧಿಕಾರಿಗಳ ಸಮೇತ ಜಿಲ್ಲಾ , ತಾಲ್ಲೂಕು ಮಟ್ಟದ ಅಧಿಕಾರಿಗಳು ಜನರನ್ನು ನೇರ ಭೇಟಿ ಮಾಡುತ್ತಿಲ್ಲ. ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಕಡೆಯೇ ಉಳಿಯಬೇಕು ಎನ್ನುವ ನನ್ನ ಸೂಚನೆ ಸರಿಯಾಗಿ ಪಾಲನೆ ಆಗುತ್ತಿಲ್ಲ. PDO ಗಳು, VA ಗಳು ಕೆಲಸ ಮಾಡುವ ಜಾಗದಲ್ಲೇ ಉಳಿಯಬೇಕು. ಈ ಬಗ್ಗೆ DC, CEO ಗಳು ಗಮನ ಹರಿಸಬೇಕು.

*ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ನೀಡಬೇಕು, ಕುರಿ-ಮೇಕೆಗಳ ಟೆಂಟ್ ಹಾಕಿರುವ ಸ್ಥಳಕ್ಕೇ ಹೋಗಿ ಲಸಿಕೆ ಮತ್ತು ಚುಚ್ಚುಮದ್ದುಗಳನ್ನು ನೀಡಬೇಕು, ಸಂಚಾರಿ ಕುರಿಗಾಹಿಗಳಿಗೆ ಬಂದೂಕು ಲೈಸೆನ್ಸ್ ಕೊಡುವುದು ಕಡ್ಡಾಯ. ಕುರಿ ಕಳ್ಳತನ ತಡೆಯಲು ಇದು ಅಗತ್ಯ ಎನ್ನುವ ಸ್ಪಷ್ಟ ಸೂಚನೆಗಳನ್ನು ನೀಡಿದರು.

*ಮಣ್ಣಿನ ಫಲವತ್ತತೆ ಕಡಿಮೆ ಆಗುತ್ತಿದೆ. ಇದನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವ ಜೊತೆಗೆ ರೈತರಿಗೆ ಮಣ್ಣಿನ ಆರೋಗ್ಯ ಕಾರ್ಡ್ ಅನ್ನು ಕಡ್ಡಾಯವಾಗಿ ನೀಡಬೇಕು. ಪ್ರತೀ ಎರಡು ವರ್ಷಕ್ಕೊಮ್ಮೆ ಮಣ್ಣಿನ ಪರೀಕ್ಷೆ ನಡೆಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.

*ಈ ಎಲ್ಲಾ ಕೆಲಸಗಳನ್ನು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು ಎನ್ನುವ ಸೂಚನೆ ನೀಡಿದರು.

*ತಹಶೀಲ್ದಾರ್ ನ್ಯಾಯಾಲಯಗಳಲ್ಲಿ 8234 ಪ್ರಕರಣಗಳು ಬಾಕಿ ಇವೆ. ಉಪವಿಭಾಹಾಧಿಕಾರಿಗಳ ಬಳಿ RRT (ಹಕ್ಕು ಬದಲಾವಣೆ) ಪ್ರಕರಣಗಳು 37587 ಬಾಕಿ ಇವೆ. ಇವುಗಳಲ್ಲಿ 5 ವರ್ಷಕ್ಕೂ ಮೇಲ್ಪಟ್ಟವು 7522 ಪ್ರಕರಣಗಳಿವೆ, DC ಗಳ ಬಳಿ 10838 ಪ್ರಕರಣಗಳು ಬಾಕಿ ಇವೆ. 5 ವರ್ಷಕ್ಕೂ ಮೇಲ್ಪಟ್ಟವು 4207 ಪ್ರಕರಣಗಳಿವೆ. DC ಗಳೇ ಬಾಕಿ ಉಳಿಸಿಕೊಂಡರೆ ನೀವು AC ಮತ್ತು ತಹಶೀಲ್ದಾರ್ ಗಳಿಗೆ ಏನು ಸೂಚನೆ ಕೊಡ್ತೀರಿ ಎಂದು ಖಾರವಾಗಿ ಪ್ರಶ್ನಿಸಿದರು.

*ಕೆಲವು DC ಗಳ ಬಳಿ ಒಂದೂ ಪ್ರಕರಣಗಳೂ ಬಾಕಿ ಇಲ್ಲ. ಉಳಿದ DC ಗಳಿಂದ ಏಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರು.

*ಜನ DC, AC ತಹಶೀಲ್ದಾರ್ ಕಚೇರಿಗಳಿಗೆ ಅಲೆಯೋದು ಅಧಿಕಾರಿಗಳು ಜನರ ಕೈಗೆ ಸಿಗದೇ ಇದ್ದರೆ ಅವರು ಏನು ಮಾಡಬೇಕು ಎಂದು ಪ್ರಶ್ನಿಸಿದರು.

*ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಾಸ್ತಾವಿಕ ನುಡಿಗಳ ಹೈಲೈಟ್ಸ್..*

• ಇದು ಅಧಿಕಾರಿಗಳನ್ನು ಟೀಕೆ ಮಾಡಲು ಕರೆದ ಸಭೆ ಅಲ್ಲ. ಜಿಲ್ಲೆಯಲ್ಲಿ ಅಭಿವೃದ್ಧಿ ಯಾವ ರೀತಿ ಮಾಡಿದ್ದೀರಿ ಎಂದು ಪರಿಶೀಲಿಸಲು ಕರೆದ ಸಭೆ ಇದು. ಪ್ರತಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಡಿಸಿ, ಸಿಈಓ, ಎಸ್ಪಿ ಇವರ ಪಾತ್ರ ದೊಡ್ಡದು. ಇವರು ಮೂರು ಜನ ಸಮನ್ವಯದಿಂದ ಬೇರೆ ಅಧಿಕಾರಿಗಳನ್ನು ಜೊತೆಗೆ ಕರೆದೊಯ್ಯುವ ಪ್ರಯತ್ನ ಮಾಡಿದರೆ ಅಭಿವೃದ್ಧಿ ವೇಗವಾಗಿ ಮಾಡಲು ಸಾಧ್ಯ.

• ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ. ಇವು ಜನರನ್ನು ತಲುಪಬೇಕು*

• ನಾನು ಮಂತ್ರಿಯಾಗಿ 40 ವರ್ಷಗಳಾದವು. 40 ಕ್ಕೂ ಹೆಚ್ಚು ವರ್ಷಗಳಿಂದ ಅಧಿಕಾರಿಗಳ ಕಾರ್ಯ ವೈಖರಿಯನ್ನು ನೋಡುತ್ತಿದ್ದೇನೆ. ರಾಜಕಾರಣಿಗಳು, ಅಧಿಕಾರಿಗಳು ಅನುಭವದ ಮೇಲೆ ಆಡಳಿತ ಹೆಚ್ಚು ಪರಿಣಾಮಕಾರಿಯಾಗಬೇಕು. ಆದರೆ ನಿರೀಕ್ಷಿತ ಮಟ್ಟದಲ್ಲಿ ಪರಿಣಾಮಕಾರಿಯಾಗಿಲ್ಲ.

• ಅವತ್ತು ಭ್ರಷ್ಟಾಚಾರ ಹೇಗಿತ್ತು, ಇವತ್ತು ಹೇಗಿದೆ ಎಂದು ನೋಡಿದಾಗ, ಕಾರ್ಯಾಂಗ ಮತ್ತು ಶಾಸಕಾಂಗ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬುದು ಕಂಡುಬರುತ್ತದೆ. ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗ ಪರಿಣಾಮಕಾರಿಯಾಗಿ ಕೆಲಸಮಾಡಬೇಕು.

•ಕರ್ನಾಟಕ ರಾಜ್ಯ ಆಡಳಿತ ವ್ಯವಸ್ಥೆಯಲ್ಲಿ ಮುಂಚೂಣಿಯಲ್ಲಿದೆ. ನೀವು ಕೆಲಸ ಮಾಡುವ ಜಿಲ್ಲೆಯ ಬಗ್ಗೆ ಮೊದಲೇ ತಿಳಿದುಕೊಂಡಿರಬೇಕು. ಅಲ್ಲಿನ ಆರ್ಥಿಕ ಸ್ಥಿತಿ, ಸಾಮಾಜಿಕ ಸ್ಥಿತಿಗಳ ಬಗ್ಗೆ ಅರಿತುಕೊಳ್ಳಬೇಕು. ಅಲ್ಲಿನ ಸಾಕ್ಷರತೆ, ಶಿಕ್ಷಣ, ತಲಾ ಆದಾಯ ಮೊದಲಾದವುಗಳ ಕುರಿತು ತಿಳಿದಿರಬೇಕು.

*ಎಸ್‌.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 10 ರಷ್ಟು ಕಡಿಮೆಯಾಗಿದೆ. ಪರೀಕ್ಷಾ ಅಕ್ರಮಗಳನ್ನು ನಿಯಂತ್ರಣದಲ್ಲಿಟ್ಟಿರುವುದೇ ಒಂದು ಕಾರಣವಾಗಲು ಸಾಧ್ಯವಿಲ್ಲ. ಇನ್ನು ಮುಂದೆ ಹೀಗೆ ಆಗದಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳು, ಸಿಇಓಗಳು, ಶಿಕ್ಷಣ ಇಲಾಖೆಯ ಹಿರಿ ಅಧಿಕಾರಿಗಳದೂ ಜವಾಬ್ದಾರಿ ಇದೆ. ಒಟ್ಟಿಗೆ ಕುಳಿತು ಚರ್ಚೆ ಮಾಡಿ ಫಲಿತಾಂಶ ಹೆಚ್ಚಿಸಲು ಪ್ರಯತ್ನಿಸಬೇಕು*

*ಜನಸ್ಪಂದನ ಅರ್ಜಿಗಳ ಸಕಾರಾತ್ಮಕ ವಿಲೇವಾರಿ ಮಾಡಿ*

*ಗೆಜೆಟಿಯರ್‌, ಎಕನಾಮಿಕ್‌ ಸರ್ವೇ ಗಳನ್ನು ಕಡ್ಡಾಯವಾಗಿ ಓದಿ*

• ಜಿಲ್ಲಾಧಿಕಾರಿಗಳು ಗಜೆಟಿಯರ್‌, ಎಕನಾಮಿಕ್‌ ಸರ್ವೇ ಓದಿದರೆ ಆ ಜಿಲ್ಲೆಯ ಇತಿಹಾಸ, ಸ್ಥಿತಿಗತಿಗಳನ್ನು ಅರಿತುಕೊಳ್ಳಲು ಸಾಧ್ಯ. ಫ್ರೇಸರ್‌ ಎಂಬ ಅಧಿಕಾರಿಯ ಸಲಹೆ ಇಲ್ಲದೆ ನಾಲ್ವಡಿ ಕೃಷ್ಣರಾಜ ಒಡೆಯರ್‌, ಗಾಯಕ್‌ವಾಡ್‌, ಶಾಹು ಮಹಾರಾಜ ಮೊದಲಾದವರು ಒಳ್ಳೆಯ ಅರಸರೆಂದು ಹೆಸರುಗಳಿಸಲು ಸಾಧ್ಯವಾಗುತ್ತಿರಲಿಲ್ಲ. ಬಳ್ಳಾರಿಯಲ್ಲಿ ಮನ್ರೋ ಎಂಬ ಅಧಿಕಾರಿ ಕಲೆಕ್ಟರ್‌ ಆಗಿದ್ದರು. ಇಂದಿಗೂ ಅಲ್ಲಿನ ಜನ ತಮ್ಮ ಮಕ್ಕಳಿಗೆ ಅವರ ಹೆಸರಿಡುತ್ತಾರೆ. ನಾವೆಲ್ಲರೂ ಜನಸೇವಕರು ಎಂಬ ಭಾವನೆಯಿಂದ ಕೆಲಸ ನಿರ್ವಹಿಸಬೇಕು. ಆಗ ಮಾತ್ರ ಜನಪರ ಆಡಳಿತ ನೀಡಲು ಸಾಧ್ಯವಾಗುತ್ತದೆ.

*ನಮ್ಮ ಜನರು ತಮ್ಮ ಮಕ್ಕಳಿಗೆ ನಿಮ್ಮ ಹೆಸರು ಇಡುವ ರೀತಿಯಲ್ಲಿ ಗುಣಾತ್ಮಕವಾಗಿ, ಪರಿಣಾಮಕಾರಿಯಾಗಿ ಕೆಲಸ ಮಾಡಲು ಅವಕಾಶಗಳಿವೆ, ನಿಮ್ಮಿಂದ ಇದು ಸಾಧ್ಯವಿದೆ ಎಂದರು.

•ಬಡವರ ಬಗ್ಗೆ ಅನುಕಂಪ ಇರಬೇಕು. ಅಸಮಾನತೆ ನೀಗಿಸಲು ಪ್ರಯತ್ನಿಸಬೇಕು. ಬಸವಣ್ಣ, ಗಾಂಧೀಜಿ, ಅಂಬೇಡ್ಕರ್‌ ಅವರನ್ನು ಓದುತ್ತೇವೆ. ಸಂವಿಧಾನ ಅರಿತುಕೊಳ್ಳಬೇಕು ಎಂದು ಹೇಳುತ್ತೇವೆ. ಇದು ಕೇವಲ ಓದುವುದಕ್ಕಲ್ಲ; ಅನುಷ್ಠಾನ ಮಾಡುವುದಕ್ಕೆ ಎಂಬುದನ್ನು ಅರಿತುಕೊಳ್ಳಿ. ಈ ಸೇವೆಯನ್ನು ಆಯ್ಕೆ ಮಾಡಿಕೊಂಡಿದ್ದೀರಿ. ಪರಿಸ್ಥಿತಿ ಬದಲಾದಂತೆ ನಾವೂ ಬದಲಾಗಬೇಕು.

*ಡೆಂಘಿ ನಿಯಂತ್ರಿಸಿ:*

•ಕಲುಷಿತ ನೀರು ಕುಡಿದು ಹಲವು ಸಾವು- ನೋವುಗಳು ಸಂಭವಿಸಿವೆ. ಇಂತಹ ಪ್ರಕರಣಗಳು ಮರುಕಳಿಸಿದರೆ, ಹಿರಿಯ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು.
*ವಲಸೆ ಕುರಿಗಾರರ ಹಿತ ಕಾಪಾಡಿ*
ವಲಸೆ ಕುರಿಗಳ ಆಕಸ್ಮಿಕ ಮರಣ ಸಂಭವಿಸಿದಲ್ಲಿ ಮಾಲೀಕರಿಗೆ ತ್ವರಿತವಾಗಿ ಪರಿಹಾರ ವಿತರಿಸಬೇಕು.

•ಸಿಂಧುತ್ವ ಪ್ರಮಾಣ ಪತ್ರ ಸಕಾಲದಲ್ಲಿ ನೀಡಬೇಕು. ಇವುಗಳನ್ನು ಬಾಕಿ ಉಳಿಸಿಕೊಳ್ಳದೆ ಸೂಕ್ತ ಆದೇಶ ಹೊರಡಿಸಬೇಕು. ಅಭ್ಯರ್ಥಿಗಳಿಗೆ ಸಕಾಲದಲ್ಲಿ ಸಿಂಧುತ್ವ ಪ್ರಮಾಣ ಪತ್ರ ನೀಡದೆ ಇದ್ದರೆ ಅವರ ಭವಿಷ್ಯ ಹಾಳಾಗುವುದಿಲ್ಲವೇ ಎಂದು ಪ್ರಶ್ನಿಸಿದರು.

•ಗಂಗಾ ಕಲ್ಯಾಣ ಯೋಜನೆಯಡಿ ವಿದ್ಯುತ್‌ ಸಂಪರ್ಕ ಕಲ್ಪಿಸಲು ಬಾಕಿ ಉಳಿದಿರುವ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಸಂಪರ್ಕ ಒದಗಿಸಬೇಕು

•ಬುಡಕಟ್ಟು ಜನರಿಗೆ ಅರಣ್ಯ ಜಮೀನು ಮಂಜೂರು ಮಾಡಲು 26,126 ಅರ್ಜಿಗಳು ಬಾಕಿ ಇವೆ. ಇವುಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು. ಅವರ ಹಾಡಿಗಳಿಗೆ ಹೋಗಲು ರಸ್ತೆ ಸಂಪರ್ಕ ಇರುವುದಿಲ್ಲ. ಈ ಬಗ್ಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಸೂಕ್ತ ಸುತ್ತೋಲೆ ಹೊರಡಿಸಲು ಸೂಚಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ