
ಬೆಳಗಾವಿ: ಅಥಣಿ ಶಾಸಕ ಲಕ್ಷ್ಮಣ ಸವದಿಯವರ ಅವರ ಆಪ್ತ ರಾವ್ ಸಾಬ್ ಬೇವನೂರ ಹೃದಯಾಘಾತದಿಂದ ಮೃತ ಪಟ್ಟ ಘಟನೆ ಅಥಣಿ ತಾಲೂಕು ತಾಂವಶಿ ಗ್ರಾಮದಲ್ಲಿ ನಡೆದಿದೆ.
ತಾಂವಶಿ ಗ್ರಾಮದಲ್ಲಿ ಶುಕ್ರವಾರ ಗ್ರಹಪ್ರವೇಶ ಇತ್ತು. ಶಾಸಕ ಲಕ್ಷ್ಮಣ ಸವದಿ ಅವರೊಂದಿಗೆ ಅವರ ಆಪ್ತ ರಾವ್ ಸಾಬ್ ಆಗಮಿಸಿದ್ದರು. ಈ ನಡುವೆ ರಾವ್ ಸಾಬ್ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ರವಾನಿಸುವ ಪ್ರಯತ್ನ ಮಾಡಲಾದರೂ ಮಾರ್ಗ ಮಧ್ಯೆ ಅವರು ಮೃತ ಪಟ್ಟಿದ್ದಾರೆ. ಹಾಲುಮತ ಸಮಾಜದ ಪ್ರಭಾವಿ ಮುಖಂಡರಾಗಿರುವ ಅವರು ಲಕ್ಷ್ಮಣ ಸವದಿ ಅವರ ಅತ್ಯಾಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ರಾವ್ ಸಾಬ್ ಬೇವನೂರ ಅವರು ಅಥಣಿ ತಾಲೂಕಿನ ಶಿವನೂರು ಗ್ರಾಮದವರು. ಹಾಲುಮತ ಸಮಾಜದ ಪ್ರಮುಖ ನಾಯಕರಾಗಿದ್ದ ಅವರು ಸಾರ್ವಜನಿಕ ಜೀವನದಲ್ಲಿ ಹಾಗೂ ರಾಜಕೀಯ ರಂಗದಲ್ಲಿ ತಮ್ಮದೇ ಆದ ಪ್ರಭಾವ ಬೆಳೆಸಿಕೊಂಡಿದ್ದರು. ಶಾಸಕ ಲಕ್ಷ್ಮಣ ಸವದಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಅವರ ಸಾವು ಗೃಹ ಪ್ರವೇಶದಲ್ಲಿ ಭಾಗಿಯಾಗಿದ್ದಾಗ ಕಣ್ಣಾರೆ ಕಂಡ ಶಾಸಕ ಲಕ್ಷ್ಮಣ ಸವದಿ ಮತ್ತು ಬೆಂಬಲಿಗರು ಸ್ನೇಹಿತನ ಸಾವಿಗೆ ಮರುಗಿದರು.
