Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮರಕುಂಬಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ : 7 ಕ್ಕೆ ಮುಟ್ಟಿದ ಸಾವಿನ ಸಂಖ್ಯೆ

ಬೆಳಗಾವಿ: ಸಕ್ಕರೆ ಕಾರ್ಖಾನೆಯಲ್ಲಿ ಭೀಕರ ದುರಂತಕ್ಕೆ ಸಂಬಂಧಿಸಿ ಸಾವಿನ ಸಂಖ್ಯೆ ಏರಿಕೆ ಗೊಂಡಿದೆ. ಘಟನೆ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಕಾರ್ಮಿಕರ ಕುಟುಂಬದವರ ಆಕ್ರೋಶವಂತೂ ಹೇಳತೀರದಾಗಿದೆ. ಅದರಲ್ಲೂ ತುಂಬು ಗರ್ಭಿಣಿಯೊಬ್ಬರ ಪತಿ ಮೃತಪಟ್ಟಿದ್ದು, ಗರ್ಭಿಣಿಗೆ ವಿಷಯ ಇನ್ನು ತಿಳಿಸಿಲ್ಲ.

ಬೈಲಹೊಂಗಲ ತಾಲೂಕು ಮರಕುಂಬಿ ಗ್ರಾಮದ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಘಟನೆಗೆ ಸಂಬಂಧಿಸಿ ಮೃತಪಟ್ಟ ಕಾರ್ಮಿಕರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ. ಬುಧವಾರ ಸಂಭವಿಸಿದ ಘಟನೆಯಲ್ಲಿ ಅಂದೇ ಮೂವರು ಮೃತಪಟ್ಟಿದ್ದರು. ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಗುರುವಾರ ಮೃತಪಟ್ಟಿದ್ದಾರೆ.

ಬುಧವಾರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ವಾಲ್ ರಿಪೇರಿ ಮಾಡುವಾಗ ಬಾಯ್ಲರ್ ಸ್ಫೋಟಗೊಂಡಿತ್ತು. ಬಾಯ್ಲರ್ ನಲ್ಲಿದ್ದ ಬಿಸಿ ಮಳ್ಳಿ (ಪದಾರ್ಥ) ಕಾರ್ಮಿಕರ ಮೈಮೇಲೆ ಬಿದ್ದ ಪರಿಣಾಮ ಎಂಟು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರು.
ಬೈಲಹೊಂಗಲ ತಾಲೂಕು ನೇಸರಗಿ ಗ್ರಾಮದ ದೀಪಕ
ಮುನವಳ್ಳಿ (31), ಖಾನಾಪುರ ತಾಲೂಕು ಚಿಕ್ಕಮುನವಳ್ಳಿ ಗ್ರಾಮದ ಸುದರ್ಶನ ಬನೋಶಿ(25), ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯ ಅಕ್ಷಯ ಸುಭಾಷ್ ಚೋಪಡೆ(48)ಮೃತಪಟ್ಟಿದ್ದರು.

ಗುರುವಾರದಂದು ಗೋಕಾಕ ತಾಲೂಕು ಗೊಡಚಿನಮಲ್ಕಿ ಗ್ರಾಮದ ಭರತ ಬಸಪ್ಪ ಸಾರವಾಡಿ(27), ಬೈಲಹೊಂಗಲ ತಾಲೂಕು ಅರವಳ್ಳಿ ಗ್ರಾಮದ ಮಂಜುನಾಥ ಮಡಿವಾಳಪ್ಪ ಕಾಜಗಾರ (28), ಬಾಗಲಕೋಟೆ ಜಿಲ್ಲೆ ಮರೆಗುದ್ದಿ ಗ್ರಾಮದ ಗುರುನಾಥ ಭೀರಪ್ಪ ತಮ್ಮಣ್ಣವರ (38), ಅಥಣಿ ತಾಲೂಕು ಹೂಲಿಕಟ್ಟಿಯ ಮಂಜುನಾಥ ಗೋಪಾಲ ತೇರದಾಳ (31)ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಗೋಕಾಕ ತಾಲೂಕು
ಗಿಳಿಹೊಸೂರು ಗ್ರಾಮದ ರಾಘವೇಂದ್ರ ಮಲ್ಲಪ್ಪ ಗಿರಿಯಾಲ(36)ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಮೃತ ಕಾರ್ಮಿಕ ಮಂಜುನಾಥ ತೇರದಾಳ ಅವರ ಸಹೋದರ ವಿಶ್ವನಾಥ ತೇರದಾಳ ಮಾತನಾಡಿ, ಘಟನೆಯಿಂದ ಬಹಳ ದುಃಖವಾಗಿದೆ. ಮೆಕಾನಿಕಲ್ ಇಂಜಿನಿಯರಿಂಗ್ ಆಗಿ ಎರಡು ವರ್ಷಗಳಿಂದ ನಮ್ಮ ಅಣ್ಣ ಕೆಲಸ ಮಾಡುತ್ತಿದ್ದರು. ಘಟನೆ ಬಗ್ಗೆ ಕಾರ್ಖಾನೆಯವರು ಯಾವ ಮಾಹಿತಿ ನೀಡಿಲ್ಲ. ಮಾಧ್ಯಮಗಳಲ್ಲಿ ಸುದ್ದಿ ನೋಡಿ ಆಸ್ಪತ್ರೆಗೆ ಬಂದೆವು. ಅವರ ಪತ್ನಿ ತುಂಬು ಗರ್ಭಿಣಿಯಾಗಿದ್ದು ಮೂರು ದಿನಗಳಲ್ಲಿ ಹೆರಿಗೆ ಆಗಲಿದೆ. ಅವರಿಗೆ ಗೊತ್ತಾದರೆ ಅಘಾತವಾಗುತ್ತದೆ. ಅಣ್ಣನ ಸಾವಿನ ಬಗ್ಗೆ ನಾವು ತಿಳಿಸಿಲ್ಲ. ಅವರಿಗೆ 65,000 ರೂ.ಸಂಬಳ ಇತ್ತು. ನಿವೃತ್ತಿ ಆಗುವವರೆಗೆ 3 ಕೋಟಿ ರೂಪಾಯಿ ದುಡಿಯುತ್ತಿದ್ದರು. ಆದ್ದರಿಂದ ಕಾರ್ಖಾನೆಯವರು ಇಲ್ಲಿಗೆ ಬಂದು ದೊಡ್ಡ ಮೊತ್ತದ ಪರಿಹಾರ ಪ್ರಕಟಿಸಬೇಕು. ಇಲ್ಲವಾದರೆ ಶವ ಮುಟ್ಟಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುರಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ