Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಚರ್ಚಾ ಸ್ಪರ್ಧೆ ಕಾನೂನು ವಿದ್ಯಾರ್ಥಿಗಳಿಗೆ ಆಧಾರ ಸ್ತಂಭ :  ಸಂಜೀವ ಕುಲಕರ್ಣಿ

ಬೆಳಗಾವಿ: ಕೆಎಲ್ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜು 86 ನೇ “ಮಜಲಿ” (ಇಂಗ್ಲಿಷ್) ಮತ್ತು “ಬೆಂಬಳಗಿ” (ಕನ್ನಡ) ಚರ್ಚಾ ಸ್ಪರ್ಧೆಯನ್ನು ಆಯೋಜಿಸಿತ್ತು. ಕರ್ನಾಟಕದ ವಿವಿಧ ಭಾಗಗಳಿಂದ 18 ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು.

ಬೆಳಗಾವಿಯ ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗದ  ಅಧ್ಯಕ್ಷ ಸಂಜೀವ ಕುಲಕರ್ಣಿ ಮಾತನಾಡಿ, ಕಾನೂನು ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆಯ ಮಹತ್ವದ ಬಗ್ಗೆ ವಿವರಿಸಿ, ಚರ್ಚಾ ಸ್ಪರ್ಧೆ ಕಾನೂನು ವಿದ್ಯಾರ್ಥಿಗಳಿಗೆ ಆಧಾರಸ್ತಂಭವಾಗಿದ್ದು, ಅವರಿಗೆ ಧೈರ್ಯ ಮತ್ತು ಆತ್ಮವಿಶ್ವಾಸವನ್ನು ನೀಡುತ್ತದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಮತ್ತು ನ್ಯಾಯವಾದಿ ಆರ್.ಎಸ್. ಮುತಾಲಿಕ್ ಅವರು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿದ್ದ ಕೆಎಲ್ಎಸ್ ಪ್ಲಾಟಿನಂ ಜುಬಿಲಿ ಆಚರಣೆಯನ್ನು ನೆನಪಿಸಿಕೊಂಡರು.

ಸಾಹಿತ್ಯ ಕ್ಲಬ್‌ನ ಅಧ್ಯಕ್ಷೆ ಪ್ರೊ. ಮಾಧುರಿ ಕುಲಕರ್ಣಿ “ಮಜಲಿ” ಇಂಗ್ಲಿಷ್ ಮತ್ತು “ಬೆಂಬಳಗಿ” ಕನ್ನಡ ಚರ್ಚಾ ಸ್ಪರ್ಧೆಯ ಬಗ್ಗೆ ವಿವರಿಸಿದರು.  “ಮಜಲಿ” ಸ್ಮಾರಕ ರೋಲಿಂಗ್ ಶೀಲ್ಡ್ ಅನ್ನು ಬೆಳಗಾವಿಯ ಕೆಎಲ್ಇ ಸಿಬಿಎಎಲ್ಸಿ ಕಾಲೇಜು ಗೆದ್ದುಕೊಂಡಿತು ಮತ್ತು “ಬೆಂಬಳಗಿ” ಸ್ಮಾರಕ ರೋಲಿಂಗ್ ಶೀಲ್ಡ್ ಅನ್ನು ಚಿಕ್ಕೋಡಿಯ ಕೆಎಲ್ಇ ಕಾನೂನು ಕಾಲೇಜು ಗೆದ್ದುಕೊಂಡಿತು.

ಪ್ರಾಂಶುಪಾಲ ಡಾ. ಎ. ಎಚ್. ಹವಾಲ್ದಾರ್, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಂಗ್ಲಾದೇಶದ ಹೆಸರಲ್ಲಿ ವಿದೇಶಿ ಅಡಕೆ ಅಕ್ರಮ ಆಮದು ಪತ್ತೆ ; ₹2500 ಕೋಟಿ ನಷ್ಟದ ಶಂಕೆ : ನಮ್ಮ ಬೆಳೆಗಾರರ ಮೇಲೆ ಪರಿಣಾಮ ಏನು..?ಅಮೆರಿಕ ಸೈನಿಕನನ್ನು ಕೊಂದ್ರೆ ಅಥವಾ ಸೆರೆ ಹಿಡಿದ್ರೆ 30 ಸಾವಿರ ಡಾಲರ್ ಬಹುಮಾನ : ಮಹಿಳೆಯರಿಗೆ ದುಪ್ಪಟ್ಟು ಹಣ; ಇರಾನ್‌ ಘೋಷಣೆನಾಲ್ಸಾರ್‌ ನಂತರ ಬೆಂಗಳೂರಿನ ಪ್ರತಿಷ್ಠಿತ ಕಾನೂನು ಕಾಲೇಜಿನಿಂದಲೂ ಘಟಿಕೋತ್ಸವಕ್ಕೆ ಸಿಜೆಐ ಆಹ್ವಾನಕ್ಕೆ ವಿರೋಧದೇವಸ್ಥಾನದಲ್ಲಿ ಕಾಲ್ತುಳಿತ : 7 ಮಂದಿ ಸಾವು, ಹಲವರಿಗೆ ಗಾಯವಂದೇ ಮಾತರಂಗೆ ಅಪಮಾನ ಆರೋಪ ; ಸೋನಿಯಾ ಗಾಂಧಿ ವಿರುದ್ಧ ದೂರುಒಳಚರಂಡಿ ಕಾಮಗಾರಿ ವೇಳೆ 18 ವರ್ಷದ ಕಾರ್ಮಿಕನಿಗೆ ಸಿಕ್ಕಿತು 98 ಕೋಟಿ ರೂ. ಮೌಲ್ಯದ ನಿಧಿ….!ಕರ್ನಾಟಕದ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನಕನ್ನಡ ಸಾಹಿತ್ಯ ಕಣಜವನ್ನು ಶ್ರೀಮಂತಗೊಳಿಸಿದವರು ಡಾ. ಸರಜೂ ಕಾಟ್ಕರ್ : ಡಾ. ಬಸವರಾಜ ಜಗಜಂಪಿಮೇಕೆ ಬೇಟೆಗೆ ಮಾಂಸದ ಅಂಗಡಿಗೆ ನುಗ್ಗಿದ ಹೆಬ್ಬಾವು; ಕುತ್ತಿಗೆಗೆ ಸುತ್ತಿಕೊಂಡು ಆಟವಾಡಿದ ಕುಡುಕ!