Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಎರಡು ಸಲ ಸಿಎಂ ಆಗಿದ್ದ ಹಾಲಿ ಸಚಿವ ರವಿ ನಾಯ್ಕ ನಿಧನ

ಪಣಜಿ: ಗೋವಾದ ಕೃಷಿ ಸಚಿವ, ಮಾಜಿ ಮುಖ್ಯಮಂತ್ರಿ ರವಿ ನಾಯ್ಕ (79) ಬುಧವಾರ ಮಧ್ಯರಾತ್ರಿ ಹೃದಯಸ್ತಂಭನದಿಂದ ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

1991ರಿಂದ 1993 ಮತ್ತು 1994ರಲ್ಲಿ ಆರು ದಿನಗಳ ವರೆಗೆ (ಏ.2ರಿಂದ 8) ಗೋವಾ ಸಿಎಂ ಆಗಿ ಕಾರ್ಯನಿರ್ವಹಿಸಿದ್ದರು. 1998 ರಲ್ಲಿ ಕಾಂಗ್ರೆಸ್ ಟಿಕೆಟ್‌ನಿಂದ ಉತ್ತರ ಗೋವಾದ ಸಂಸದರಾಗಿಯೂ ಆಯ್ಕೆಯಾಗಿದ್ದರು. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ರವಿ ನಾಯ್ಕ ಎರಡು ಬಾರಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1984ರಲ್ಲಿ ಮೊದಲ ಬಾರಿ ಗೋವಾ ವಿಧಾನಸಭೆಗೆ ಆಯ್ಕೆಯಾಗಿದ್ದರು. ಆರು ಬಾರಿ ಪೊಂಡಾ ಮತ್ತು ಒಂದು ಬಾರಿ ಮಾರ್ಕೈಮ್ ವಿಧಾನಸಭಾ ಕ್ಷೇತ್ರದಿಂದ ಗೆಲುವು ದಾಖಲಿಸಿದ್ದರು. ಮಹಾರಾಷ್ಟ್ರವಾದಿ ಗೋಮಂತಕ್ ಪಕ್ಷ, ಕಾಂಗ್ರೆಸ್, ಮತ್ತು ಬಿಜೆಪಿ ಪಕ್ಷಗಳನ್ನು ಪ್ರತಿನಿಧಿಸಿದ್ದರು.

ಪೊಂಡಾ ವಿಧಾನಸಬಾ ಕ್ಷೇತ್ರದಲ್ಲಿ 1999, 2002,2007, 2017ರಲ್ಲಿ ಕಾಂಗ್ರೆಸ್ ಟಿಕೆಟ್ ಮತ್ತು 2022ರಲ್ಲಿ ಬಿಜೆಪಿ ಟಿಕೆಟ್‌ನಿಂದ ಗೆಲುವು ದಾಖಲಿಸಿದ್ದರು.

 

ಪಣಜಿಯಿಂದ 30 ಕಿ.ಮೀ. ದೂರದ ನಿವಾಸದಲ್ಲಿ ರವಿ ನಾಯ್ಕ ಅವರಿಗೆ ಹೃದಯಸ್ತಂಭನವಾಗಿತ್ತು. ಬಳಿಕ ಪೊಂಡಾ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತು. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ನಿಧನರಾದರು.

ಬುಧವಾರ ಸಂಜೆ ಮೂರು ಗಂಟೆ ಸುಮಾರಿಗೆ ಅಂತ್ಯಕ್ರಿಯೆ ನಡೆಯಲಿದೆ. ರವಿ ನಾಯ್ಕ ಅವರ ಪಾರ್ಥಿವ ಶರೀರ ಅಂತಿಮ ದರ್ಶನಕ್ಕಾಗಿ ಸ್ವಗೃಹಕ್ಕೆ ತರಲಾಗಿದೆ.

ರವಿ ನಾಯ್ಕ ನಿಧನಕ್ಕೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಂತಾಪ ಸೂಚಿಸಿದ್ದಾರೆ. 'ರವಿ ನಾಯ್ಕ ಅವರ ನಾಯಕತ್ವ, ವಿನಯತೆ ಹಾಗೂ ಸಾರ್ವಜನಿಕ ಕಲ್ಯಾಣಕ್ಕೆ ನೀಡಿದ ಕೊಡುಗೆ ಗಮನಾರ್ಹ' ಎಂದು ಉಲ್ಲೇಖಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ