Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಉಪ ರಾಷ್ಟ್ರಪತಿ ಹುದ್ದೆಗೆ ಧನಕರ್‌ ರಾಜೀನಾಮೆ: ಸಂವಿಧಾನದಲ್ಲಿ ಏನಿದೆ ? ಮುಂದಿನ ಉಪರಾಷ್ಟ್ರಪತಿ ಯಾರಾಗಬಹುದು ?

ನವದೆಹಲಿ: ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರು ವೈದೈಕೀಯ ಕಾರಣಗಳನ್ನು ನೀಡಿ ಸೋಮವಾರ(ಜು.21) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ಉಪರಾಷ್ಟ್ರಪತಿ ಚುನಾವಣೆಗೆ ಕೆಲವೇ ದಿನಗಳಲ್ಲಿ ರಂಗೇರುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ಅವರು ಹೊಸ ಉಪರಾಷ್ಟ್ರಪತಿ ನೇಮಕದಲ್ಲಿ ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಅವರ ನಿರ್ಧಾರವೇ ಅಂತಿಮವಾಗಲಿದ್ದು ಮುಂದಿನ ಉಪರಾಷ್ಟ್ರಪತಿ ಯಾರಾಗಬಹುದು ಎಂಬ ತೀವ್ರ ಕುತೂಹಲ ದೇಶದ ಜನರಲ್ಲಿ ವ್ಯಕ್ತವಾಗಿದೆ.

ರಾಜೀನಾಮೆ, ನಿಧನ, ಪದಚ್ಯುತಿ ಅಥವಾ ಇನ್ಯಾವುದೇ ಕಾರಣದಿಂದ ಉಪ ರಾಷ್ಟ್ರಪತಿ ಸ್ಥಾನ ತೆರವಾದಲ್ಲಿ, ಆ ಸ್ಥಾನವನ್ನು ಭರ್ತಿ ಮಾಡಲು ಸಾಧ್ಯವಾದಷ್ಟು ಬೇಗ ಚುನಾವಣೆ ನಡೆಸಬೇಕೆಂದು ಸಂವಿಧಾನವು ಹೇಳುತ್ತದೆ.

ಈ ಬಗ್ಗೆ ಸಂವಿಧಾನದ 68ನೇ ವಿಧಿಯ 2ನೇ ಷರತ್ತಿನಲ್ಲಿ ವಿವರಿಸಲಾಗಿದೆ.

ಆಯ್ಕೆಯಾದ ವ್ಯಕ್ತಿಯು ಅಧಿಕಾರ ವಹಿಸಿಕೊಂಡ ದಿನದಿಂದ ಐದು ವರ್ಷಗಳ ಪೂರ್ಣ ಅವಧಿಗೆ ಅಧಿಕಾರದಲ್ಲಿರಲು ಅರ್ಹರಾಗಿರುತ್ತಾರೆ ಎಂದು ಹೇಳಿದೆ.

ಆದರೆ, ಉಪ ರಾಷ್ಟ್ರಪತಿ ಹುದ್ದೆಯಲ್ಲಿದ್ದವರು ಅವಧಿ ಮುಗಿಯುವ ಮೊದಲು ನಿಧನರಾದರೆ ಅಥವಾ ರಾಜೀನಾಮೆ ನೀಡಿದರೆ ಅಥವಾ ರಾಷ್ಟ್ರಪತಿಯಾಗಿ ಆಯ್ಕೆಯಾದರೆ, ಮುಂದಿನ ಉಪ ರಾಷ್ಟ್ರಪತಿ ಆಯ್ಕೆಯಾಗುವವರೆಗೆ ಅವರ ಕರ್ತವ್ಯಗಳನ್ನು ಯಾರು ನಿರ್ವಹಿಸುತ್ತಾರೆ ಎಂಬ ಬಗ್ಗೆ ಸಂವಿಧಾನದಲ್ಲಿ ವಿವರಿಸಿಲ್ಲ.

ಉಪ ರಾಷ್ಟ್ರಪತಿ ಹುದ್ದೆಯು ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಾಗಿದೆ. ಅವರ ಅಧಿಕಾರವಧಿ ಐದು ವರ್ಷಗಳ ಕಾಲ ಇರುತ್ತದೆ. ಅವಧಿ ಮುಗಿದ ನಂತರ ಮುಂದಿನ ಉಪ ರಾಷ್ಟ್ರಪತಿ ಆಯ್ಕೆಯಾಗುವರೆಗೂ ಅವರು ಅಧಿಕಾರದಲ್ಲಿ ಮುಂದುವರಿಯಬಹುದಾಗಿದೆ.

ಸಂವಿಧಾನದಲ್ಲಿರುವ ಏಕೈಕ ನಿಬಂಧನೆಯು ರಾಜ್ಯಸಭೆಯ ಸಭಾಪತಿಯಾಗಿ ಉಪ ರಾಷ್ಟ್ರಪತಿಯ ಕಾರ್ಯವನ್ನು ವಿವರಿಸುತ್ತದೆ. ಉಪ ರಾಷ್ಟ್ರಪತಿ ರಾಜೀನಾಮೆ ನೀಡಿದ ಸಂದರ್ಭ, ಉಪ ಸಭಾಪತಿ ಅಥವಾ ರಾಷ್ಟ್ರಪತಿಗಳು ಅಧಿಕಾರ ನೀಡಿದ ರಾಜ್ಯಸಭೆಯ ಸದಸ್ಯ ಅವರ ಕಾರ್ಯವನ್ನು ನಿರ್ವಹಿಸುತ್ತಾರೆ.

ಉಪ ರಾಷ್ಟ್ರಪತಿಗಳು ತಮ್ಮ ರಾಜೀನಾಮೆಯನ್ನು ರಾಷ್ಟ್ರಪತಿಗೆ ಸಲ್ಲಿಸುವ ಮೂಲಕ ತಮ್ಮ ಹುದ್ದೆಗೆ ರಾಜೀನಾಮೆ ನೀಡಬಹುದು. ರಾಜೀನಾಮೆಯು ಅಂಗೀಕರಿಸಲ್ಪಟ್ಟ ದಿನದಿಂದ ಜಾರಿಗೆ ಬರುತ್ತದೆ.

ಜಗದೀಪ್‌ ಧನಕರ್‌ ರಾಜೀನಾಮೆಯಿಂದಾಗಿ ತೆರವಾಗುವ ಉಪರಾಷ್ಟ್ರಪತಿ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎಂಬ ಚರ್ಚೆ ಆರಂಭವಾಗಿದೆ.

ರಾಜ್ಯಸಭಾ ಉಪ ಸಭಾಪತಿಯೂ ಆದ ಜನತಾದಳ (ಯುನೈಟೆಡ್‌) ಸಂಸದ ಹರಿವಂಶ್‌ ಅವರು 2020ರಿಂದ ಉಪ ಸಭಾಪತಿ ಸ್ಥಾನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಸರ್ಕಾರದ ವಿಶ್ವಾಸವನ್ನು ಗಳಿಸಿದ್ದಾರೆ. ಈ ಕಾರಣಕ್ಕೆ ಅವರು ಸಂಭಾವ್ಯ ಅಭ್ಯರ್ಥಿಯಾಗಿದ್ದಾರೆ.

‘ಮುಂದಿನ ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ನಡೆದಿದೆ. ಉತ್ತಮ ಘನತೆಯುಳ್ಳ ಹಾಗೂ ವಿವಾದಾತ್ಮಕ ವಲ್ಲದ ವ್ಯಕ್ತಿಯನ್ನು ಪಕ್ಷವು ಆಯ್ಕೆ ಮಾಡಲಿದೆಯೆಂದು ನಂಬಿದ್ದೇನೆ’ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

ಉಪ ರಾಷ್ಟ್ರಪತಿ ಜಗದೀಪ್ ಧನಕರ್‌ ಅವರು ವೈದ್ಯಕೀಯ ಕಾರಣಗಳನ್ನು ನೀಡಿ ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.

74 ವರ್ಷದ ಧನಕರ್‌ ಅವರು 2022ರ ಆಗಸ್ಟ್‌ನಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಅವರ ಅಧಿಕಾರದ ಅವಧಿ 2027ರ ವರೆಗೂ ಇತ್ತು. ರಾಜ್ಯಸಭೆಯ ಸಭಾಪತಿಯೂ ಆಗಿರುವ ಅವರು ಸೋಮವಾರ ಆರಂಭವಾದ ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ಕಲಾಪದಲ್ಲಿ ಪಾಲ್ಗೊಂಡಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ