Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸರಪಂಚ ಹತ್ಯೆ ಪ್ರಕರಣ ; ಆಪ್ತ ಸಹಾಯಕನ ಬಂಧನದ ನಂತರ ಸಚಿವ ಸ್ಥಾನಕ್ಕೆ ಧನಂಜಯ ಮುಂಡೆ ರಾಜೀನಾಮೆ

ಮುಂಬೈ: ಮಹಾರಾಷ್ಟ್ರದ ಬೀಡ್‌ನ ಸರಪಂಚ ಸಂತೋಷ ದೇಶಮುಖ್‌ ಅವರ ಹತ್ಯೆ ಪ್ರಕರಣದಲ್ಲಿ ಎನ್‌ಸಿಪಿ ನಾಯಕ ಹಾಗೂ ಸಚಿವ ಧನಂಜಯ ಮುಂಡೆ ಅವರ ಆಪ್ತ ಸಹಾಯಕ ವಾಲ್ಮಿಕ ಕರಾಡ್‌ ನನ್ನು ಆರೋಪಿ ಎಂದು ಪೊಲೀಸರು ಉಲ್ಲೇಖಿಸಿದ ನಂತರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಮಂಗಳವಾರ ಹೇಳಿದ್ದಾರೆ.

ಫಡ್ನವೀಸ್ ರಾಜೀನಾಮೆಯನ್ನು ಅಂಗೀಕರಿಸಿ ರಾಜ್ಯಪಾಲರಿಗೆ ಕಳುಹಿಸಿದ್ದಾರೆ. ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ದೇವೆಂದ್ರ ಫಡ್ನವೀಸ್, “ಮಹಾರಾಷ್ಟ್ರ ಸಚಿವ ಧನಂಜಯ್ ಮುಂಡೆ ಅವರು ಇಂದು ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ, ನಾನು ರಾಜೀನಾಮೆಯನ್ನು ಅಂಗೀಕರಿಸಿದ್ದೇನೆ ಮತ್ತು ಮುಂದಿನ ಕ್ರಮಕ್ಕಾಗಿ ರಾಜ್ಯಪಾಲರಿಗೆ ಕಳುಹಿಸಿದ್ದೇನೆ” ಎಂದು ಹೇಳಿದ್ದಾರೆ.

ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವರಾಗಿದ್ದ ಧನಂಜಯ ಮುಂಡೆ, ಬೀಡ್ ಜಿಲ್ಲೆಯ ಪರ್ಲಿಯಿಂದ ಎನ್‌ಸಿಪಿಯಿಂದ (NCP) ಶಾಸಕರಾಗಿ ಆಯ್ಕೆಯಾಗಿದ್ದಾರೆ. ಪ್ರಸ್ತುತ, ಬೀಡ್ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದರು.

ಮೂಲಗಳ ಪ್ರಕಾರ, ಸೋಮವಾರ ರಾತ್ರಿ ಉಪಮುಖ್ಯಮಂತ್ರಿ ಅಜಿತ ಪವಾರ್ ಅವರು ಫಡ್ನವೀಸ್ ಅವರನ್ನು ಭೇಟಿಯಾಗಿ ದೇಶಮುಖ್ ಹತ್ಯೆ ಪ್ರಕರಣದಲ್ಲಿ ಸಿಐಡಿಯ ಚಾರ್ಜ್‌ಶೀಟ್‌ನ ಪರಿಣಾಮಗಳ ಕುರಿತು ಮತ್ತು ಕರಾಡ್‌ ಅವರನ್ನು ಪ್ರಮುಖ ಆರೋಪಿ ಎಂದು ಹೆಸರಿಸಲಾಗಿರುವ ಎರಡು ಸಂಬಂಧಿತ ಪ್ರಕರಣಗಳ ಬಗ್ಗೆ ಚರ್ಚಿಸಿದ್ದಾರೆ. ಮಂಗಳವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಫಡ್ನವೀಸ್ ಧನಂಜಯ್ ಮುಂಡೆ ಅವರಿಗೆ ಸೂಚಿಸಿದ್ದರು ಎಂದು ಮೂಲವೊಂದು ತಿಳಿಸಿದೆ.
ಬೀಡಿನ ಸರಪಂಚ್ ಸಂತೋಷ ದೇಶಮುಖ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಒತ್ತಡದ ಹಿನ್ನೆಲೆಯಲ್ಲಿ ಮುಂಡೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೊಲೆಗೆ ಸಂಬಂಧಿಸಿದ ಪ್ರಕರಣದಲ್ಲಿ ಮುಂಡೆ ಅವರ ಆಪ್ತ ಸಹಾಯಕ ವಾಲ್ಮಿಕ್ ಕರಾಡ್ ಅವರನ್ನು ಬಂಧಿಸಿರುವ ಕಾರಣ ಪ್ರತಿಪಕ್ಷಗಳು ಅವರ ರಾಜೀನಾಮೆಗೆ ಒತ್ತಾಯಿಸಿದ್ದವು.

ಧನಂಜಯ್ ಮುಂಡೆ ರಾಜೀನಾಮೆ ನೀಡದಿದ್ದರೆ ಸದನದ ಕಲಾಪಕ್ಕೆ ಅಡ್ಡಿಪಡಿಸುವುದಾಗಿ ಪ್ರತಿಪಕ್ಷಗಳು ಘೋಷಿಸಿದ್ದವು.

ಇಂಧನ ಕಂಪನಿಯನ್ನು ಟಾರ್ಗೆಟ್‌ ಮಾಡಿ ನಡೆದ ಸುಲಿಗೆ ಯತ್ನವನ್ನು ತಡೆಯಲು ಪ್ರಯತ್ನಿಸಿದ್ದಕ್ಕಾಗಿ ಬೀಡ್‌ನ ಮ್ಯಾಸಜೋಗ್ ಗ್ರಾಮದ ಸರಪಂಚ ದೇಶಮುಖ್ ಅವರನ್ನು ಕಳೆದ ವರ್ಷ ಡಿಸೆಂಬರ್ 9 ರಂದು ಅಪಹರಿಸಿ, ಚಿತ್ರಹಿಂಸೆ ನೀಡಿ, ಕೊಲೆ ಮಾಡಲಾಗಿತ್ತು.
ಫೆಬ್ರವರಿ 27 ರಂದು, ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ) ಬೀಡ್ ಜಿಲ್ಲಾ ನ್ಯಾಯಾಲಯದಲ್ಲಿ ದೇಶಮುಖ್ ಹತ್ಯೆ ಮತ್ತು ಸಂಬಂಧಿತ ಎರಡು ಪ್ರಕರಣಗಳನ್ನು ಒಳಗೊಂಡ 1,200 ಪುಟಗಳಿಗಿಂತ ಹೆಚ್ಚಿನ ಚಾರ್ಜ್‌ಶೀಟ್ ಅನ್ನು ಸಲ್ಲಿಸಿತು.
ಮೂರು ಪ್ರತ್ಯೇಕ ಪ್ರಕರಣಗಳು : ಸರಪಂಚನ ಕೊಲೆ, ಆವಾದ ಕಂಪನಿಯ ಮೇಲೆ ಸುಲಿಗೆ ಯತ್ನ ಮತ್ತು ಕಂಪನಿಯ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಈ ಮೂರು ಪ್ರಕರಣಗಳು ಬೀಡ್‌ನ ಕೇಜ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಆರೋಪಿಗಳ ವಿರುದ್ಧ ಕಠಿಣ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (MCOCA) ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನರನ್ನು ಬಂಧಿಸಿ ಮೊಕಾ (MCOCA) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಒಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ