Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಮಾಧಿ ಮಾಡಲು ಗುಂಡಿ ತೋಡಿ, ವಿಧಿವಿಧಾನ ನಡೆಯುತ್ತಿದ್ದಾಗ ಅಲುಗಾಡಿದ ಕೈ ಕಾಲು...!

Advertisement

ಲಕ್ನೋ: ಸಾವು ಗೆದ್ದು ಬರುವುದು ಎಂದರೆ ಇದೇ ಇರಬೇಕು! ವೈದ್ಯರು ಮೃತಪಟ್ಟಿದ್ದಾರೆ ಎಂದು ಘೋಷಿಸಿ, ಮನೆಯವರು ಅಂತ್ಯಸಂಸ್ಕಾರಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದ ವೇಳೆ ಶವವೊಂದು ಜೀವತಳೆದು ಎದ್ದು ಕುಳಿತ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಸಮಾಧಿ ಮಾಡಲು ಗುಂಡಿ ತೋಡಿ, ವಿಧಿವಿಧಾನಗಳು ನಡೆಯುತ್ತಿದ್ದಾಗ ಮೃತಪಟ್ಟಿದ್ದಾನೆ ಎನ್ನಲಾದ ಯುವಕ ಕೈಕಾಲು ಆಡಿಸಲು ಶುರುಮಾಡಿದ್ದು ನೋಡಿ ನೆರೆದಿದ್ದವರು ದೆವ್ವ ಎಂದು ಓಡಿಹೋದರೆ, ಕುಟುಂಬಸ್ಥರು ಅಕ್ಷರಶಃ ದಿಗ್ಭ್ರಮೆಗೊಂಡಿದ್ದಾರೆ.

ಈ ಅಚ್ಚರಿಯ ಘಟನೆಗೆ ಸಾಕ್ಷಿಯಾದವನು 20 ವರ್ಷದ ಮೊಹಮ್ಮದ್ ಫುರ್ಕಾನ್. ಜೂನ್ 21 ರಂದು ಭೀಕರ ಅಪಘಾತಕ್ಕೀಡಾಗಿದ್ದ ಫುರ್ಕಾನ್‌ನನ್ನು ಲಕ್ನೋದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಲವು ದಿನಗಳ ಕಾಲ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆತನ ಚಿಕಿತ್ಸೆಗಾಗಿ ಕುಟುಂಬಸ್ಥರು ಸುಮಾರು 7 ಲಕ್ಷ ರೂಪಾಯಿ ಖರ್ಚು ಮಾಡಿದ್ದರು. ಆದರೆ, ಮತ್ತಷ್ಟು ಹಣ ಪಾವತಿಸಲು ಅಸಾಧ್ಯ ಎಂದು ಕುಟುಂಬದವರು ಹೇಳಿದ ಬೆನ್ನಲ್ಲೇ, ಖಾಸಗಿ ಆಸ್ಪತ್ರೆಯ ವೈದ್ಯರು ಫುರ್ಕಾನ್ ಮೃತಪಟ್ಟಿದ್ದಾನೆ ಎಂದು ಘೋಷಿಸಿ ಮನೆಗೆ ಕಳುಹಿಸಿದ್ದರು.

ಮನೆಗೆ ಬಂದ 'ಶವ'ಕ್ಕೆ ಮುಸ್ಲಿಂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡಲು ಸಿದ್ಧತೆ ನಡೆಯಿತು. ಸ್ಮಶಾನದಲ್ಲಿ ಗುಂಡಿ ತೋಡಲಾಗಿತ್ತು, ಅಂತಿಮ ವಿಧಿವಿಧಾನಗಳು ನಡೆಯುತ್ತಿದ್ದವು. ಇನ್ನೇನು ಮಣ್ಣು ಮಾಡಬೇಕು ಎನ್ನುವಷ್ಟರಲ್ಲಿ ಫುರ್ಕಾನ್ ದೇಹದಲ್ಲಿ ಚಲನೆ ಕಂಡುಬಂದಿದೆ. ಇದನ್ನು ಗಮನಿಸಿದ ಕೂಡಲೇ ಆತನನ್ನು ತಕ್ಷಣವೇ ನಗರದ ಡಾ. ರಾಮ್ ಮನೋಹರ್ ಲೋಹಿಯಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಆತನನ್ನು ಪರೀಕ್ಷಿಸಿದ ವೈದ್ಯರು, ಆತನಲ್ಲಿ ನಾಡಿಮಿಡಿತ, ರಕ್ತದೊತ್ತಡ ಮತ್ತು ಪ್ರತಿಕ್ರಿಯೆಗಳು ಇರುವುದನ್ನು ಕಂಡು ಬೆರಗಾಗಿದ್ದಾರೆ. ಕೂಡಲೇ ಆತನನ್ನು ವೆಂಟಿಲೇಟರ್‌ಗೆ ಸ್ಥಳಾಂತರಿಸಿ ಚಿಕಿತ್ಸೆ ಆರಂಭಿಸಿದ್ದಾರೆ.

ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು 'ಅವಧಿಪೂರ್ವ ಸಾವು ಘೋಷಣೆ' ಎನ್ನಲಾಗುತ್ತದೆ. ಖಾಸಗಿ ಆಸ್ಪತ್ರೆಯ ವೈದ್ಯರು ಕೇವಲ ಹಣಕ್ಕಾಗಿ ಅಥವಾ ಬೇಜವಾಬ್ದಾರಿಯಿಂದ ಈ ರೀತಿ ಮಾಡಿದ್ದಾರೆಯೇ ಎಂಬ ಬಗ್ಗೆ ಈಗ ತನಿಖೆ ಆರಂಭವಾಗಿದೆ. ಲಕ್ನೋದ ಮುಖ್ಯ ವೈದ್ಯಕೀಯ ಅಧಿಕಾರಿ ಈ ಬಗ್ಗೆ ಅಧಿಕೃತ ವಿಚಾರಣೆಗೆ ಆದೇಶಿಸಿದ್ದಾರೆ. ಮಗನ ಸಾವಿನ ಶೋಕದಲ್ಲಿದ್ದ ಕುಟುಂಬಕ್ಕೆ ಈ ಪವಾಡವು ಆಘಾತದ ನಡುವೆಯೂ ಹೊಸ ಭರವಸೆ ನೀಡಿದೆ. ಸದ್ಯ ಫುರ್ಕಾನ್ ಸ್ಥಿತಿ ಗಂಭೀರವಾಗಿದ್ದರೂ, ಆತ ಬದುಕುಳಿಯುವ ಸಾಧ್ಯತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸರಕಾರದಿಂದ ವಿಶೇಷ ಯೋಜನೆ ಮತ್ತು ಅನುದಾನ ಒದಗಿಸುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದ ಕಿರಣ್ ಜಾಧವ ಆಟೋನಗರ, ರಾಮತೀರ್ಥನಗರ ಕೈಗಾರಿಕಾ ಪ್ರದೇಶಗಳಲ್ಲಿ ಮೂಲ ಸೌಕರ್ಯ ಹೆಚ್ಚಿಸಿ ಕೈಗಾರಿಕಾ ಅಭಿವೃದ್ಧಿಗೆ ಉತ್ತೇಜನ ನೀಡಿSSLC ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ : ಶಿಕ್ಷಕನಿಗೆ ಥಳಿತವಾಯುಪಡೆ ಸಿಬ್ಬಂದಿ ಪತ್ನಿಗೆ ಮತ್ತು ಬರಿಸುವ ಪಾನೀಯ ನೀಡಿ ಅತ್ಯಾಚಾರ, ಬ್ಲ್ಯಾಕ್‌ಮೇಲ್, ಬಲವಂತದ ಮತಾಂತರಕ್ಕೆ ಯತ್ನ; ಇಬ್ಬರ ಬಂಧನಇನ್ಮುಂದೆ ವೈದ್ಯರ ಚೀಟಿ ಇಲ್ಲದೇ ಕೆಮ್ಮಿನ ಔಷಧ ಮಾರಾಟ ನಿಷೇಧಮಾರಿಹಾಳ ಗ್ರಾಮದಲ್ಲಿ ಎನ್‌ಎಸ್‌ಎಸ್ ವಿಶೇಷ ಶಿಬಿರ; ಉಚಿತ ನೇತ್ರ ತಪಾಸಣೆಯಿಂದ ಗ್ರಾಮಸ್ಥರಿಗೆ ಪ್ರಯೋಜನಟೆಲಿಗ್ರಾಮ್ ನಿರ್ಬಂಧಿಸಿದ ಕೇಂದ್ರ ಸರ್ಕಾರಶರಣರು ಜನಪರವಾದ ಸಾಹಿತ್ಯಕ್ಕೆ ಒತ್ತು ನೀಡಿದರು: ಡಾ.ವಿದ್ಯಾವತಿ ಕುಂದರಗಿ* *ಮಹಾಸಭೆಯಲ್ಲಿ ಅಮವಾಸ್ಯೆ ಅನುಭಾವ ಗೋಷ್ಠಿರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ಹಣದ ತೊಂದರೆಯುದ್ದರೂ ಪರರ ಹಣ ಬೇಡವೆಂದು ಚಿಕ್ಕೋಡಿಯಲ್ಲಿ ಪ್ರಾಮಾಣಿಕತೆ ಮೆರೆದ ಕುಂದಾಪುರದ ವ್ಯಕ್ತಿ..!ಐಎಎಸ್‌ ಅಧಿಕಾರಿಗಳೂ ಸೇರಿದಂತೆ ಎಲ್ಲರ ಮೇಲೂ ‘ಎಐ’ ಕಣ್ಗಾವಲು | ಕರ್ತವ್ಯದ ಸ್ಥಳದ ಮಾಹಿತಿ ಸರ್ಕಾರಕ್ಕೆ ಲಭ್ಯ