Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಪರಾಧ ತನಿಖೆಗಾಗಿ ಡಿಜಿಟಲ್ ಮೊರೆ: ಡಿಸಿಪಿ ನಿರಂಜನ್ ರಾಜ್ ಅರಸ್

ಬೆಳಗಾವಿ: ಬದಲಾಗುತ್ತಿರುವ ಕಾಲಘಟ್ಟದಲ್ಲಿ ಅಪರಾಧಗಳ ಸ್ವರೂಪ ಬದಲಾಗುತ್ತಿವೆ. ಅದಕ್ಕೆ ತಕ್ಕಂತೆ ತನಿಖಾ ವ್ಯವಸ್ಥೆ ಬದಲಾಗುತ್ತಿದೆ. ಅಪರಾಧ ಪತ್ತೆ ಹಚ್ಚಲು ತಂತ್ರಜ್ಞಾನದ ಮೊರೆ ಹೋಗುವುದು ಇಂದಿನ ಅವಶ್ಯಕತೆಯಾಗಿದೆ ಎಂದು ಬೆಳಗಾವಿ ನಗರದ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ನಿರಂಜನ್ ರಾಜ್ ಅರಸ್ ಅಭಿಪ್ರಾಯಪಟ್ಟರು.

ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಕ್ರಿಮಿನಾಲಜಿ ಮತ್ತು ಪೊರೆನ್ಸಿಕ್ ಸೈನ್ಸ್ ವಿಭಾಗದ ವತಿಯಿಂದ “ಅಪರಾಧ ತನಿಖೆಯಲ್ಲಿ ವೈಜ್ಞಾನಿಕ ಮತ್ತು ಡಿಜಿಟಲ್ ನವೀನತೆಗಳು: ಆಧುನಿಕ ಯುಗದಲ್ಲಿ ಪೊಲೀಸ್ ಪಾತ್ರ” ವಿಷಯದ ಕುರಿತು ಆಯೋಜಿಸಿದ್ದ ವಿಶೇಷ ಉಪನ್ಯಾಸ ಉದ್ಘಾಟಿಸಿ ಮಾತನಾಡಿದರು.

ಹಳೆಯ ಕಾಲದಲ್ಲಿ ತನಿಖೆಗಳು ಸಾಕ್ಷ್ಯಾಧಾರಗಳ ಮೇಲೆ ಮಾತ್ರ ಹೆಚ್ಚು ಅವಲಂಬಿತವಾಗಿದ್ದವು. ಈಗ ವೈಜ್ಞಾನಿಕ ವಿಧಾನಗಳ ಸಹಾಯದಿಂದ ಅವುಗಳ ತನಿಖೆಗೆ ಹೆಚ್ಚು ನಿಖರತೆ ಸಿಗುತ್ತಿದೆ. ಫಾರೆನ್ಸಿಕ್ ವಿಜ್ಞಾನ, ಡಿಎನ್‌ಎ ವಿಶ್ಲೇಷಣೆ, ಫಿಂಗರ್‌ಪ್ರಿಂಟ್ ತಂತ್ರಜ್ಞಾನ, ಹಾಗೂ ಡಿಜಿಟಲ್ ಡೇಟಾ ವಿಶ್ಲೇಷಣೆ ಇತ್ಯಾದಿಗಳು ಅಪರಾಧ ಪತ್ತೆಯಲ್ಲಿ ಪ್ರಮುಖ ಸಾಧನಗಳಾಗಿ ಕೆಲಸ ಮಾಡುತ್ತಿವೆ.

ಪ್ರಸ್ತುತ ಅಪರಾಧ ತನಿಖೆಯ ಹೈಟೆಕ್ ಸ್ವರೂಪ ಪಡೆಯುತ್ತಿದೆ. ನಮ್ಮ ತನಿಖೆಯ ಜಾಡು ಕೂಡ ನವೀನ ತಂತ್ರಜ್ಞಾನವನ್ನು ಆಶ್ರಯಿಸಿದೆ. ತಂತ್ರಜ್ಞಾನ ಹಾಗೂ ವೈಜ್ಞಾನಿಕ ವಿಧಾನಗಳ ಬಳಕೆ ಪೊಲೀಸ್ ಇಲಾಖೆಗೆ ಅಪರಾಧಗಳನ್ನು ಬೇಗ ಹಾಗೂ ನಿಖರವಾಗಿ ಪತ್ತೆಹಚ್ಚಲು ಸಹಾಯ ಮಾಡುತ್ತಿವೆ.
ಡಿಜಿಟಲ್ ಯುಗದಲ್ಲಿ ಸೈಬರ್ ಅಪರಾಧಗಳು ಹೆಚ್ಚುತ್ತಿರುವ ಹಿನ್ನೆಲೆ, ಪೊಲೀಸರ ಪಾತ್ರ ಇನ್ನಷ್ಟು ಜವಾಬ್ದಾರಿಯುತವಾಗಿದೆ.

ಪೊಲೀಸ್ ಇಲಾಖೆಗಳು ಈಗ ಡೇಟಾ ಅನಾಲಿಟಿಕ್ಸ್ ಮತ್ತು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಬಳಕೆಗೂ ಒತ್ತು ನೀಡುತ್ತಿವೆ. ಇದರಿಂದ ಅಪರಾಧ ಮಾದರಿಗಳನ್ನು ವಿಶ್ಲೇಷಿಸಿ ಮುನ್ನೆಚ್ಚರಿಕಾ ಕ್ರಮಕ್ಕೆ ಹೆಚ್ಚು ಸಹಾಯಕಾರಿಯಾಗಿದೆ. ಸೈಬರ್ ಅಪರಾಧಗಳನ್ನು ತಡೆಗಟ್ಟಲು ತಜ್ಞರ ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದರು.

ಪೊಲೀಸ್ ಇಲಾಖೆ ಹಾಗೂ ತನಿಖಾ ತಂಡದ ಜೊತೆಗೆ ಸಾರ್ವಜನಿಕರ ಸಹಕಾರವೂ ಅತ್ಯಗತ್ಯವಾಗಿದೆ. ನಾಗರಿಕರು ತಂತ್ರಜ್ಞಾನವನ್ನು ಜವಾಬ್ದಾರಿಯುತವಾಗಿ ಬಳಸುವುದು ಮತ್ತು ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಕ್ಷಣ ಪೊಲೀಸರಿಗೆ ತಿಳಿಸುವುದು, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಗುರುತುಗಳನ್ನು ಬಿಟ್ಟು ಕೊಡಬಾರದು. ತಮ್ಮ ಸ್ವವಿವರ ಅವಶ್ಯಕತೆ ಇದ್ದಲ್ಲಿ ಮಾತ್ರ ಹಂಚಿಕೊಳ್ಳಿ. ಅಪರಾಧವಾದ ತಕ್ಷಣ ಪೊಲೀಸರನ್ನು ಸಂಪರ್ಕಿಸಿ ಆಗ ಅಪರಾಧಿಯನ್ನು ಪತ್ತೆ ಹಚ್ಚಲು ಸಹಾಯವಾಗುತ್ತದೆ. ನಾಗರಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಅಳವಡಿಸಿಕೊಳ್ಳುವುದರಿಂದ ಅಪರಾಧವನ್ನು ನಿಯಂತ್ರಿಸಬಹುದು ಎಂದರು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕ್ರಿಮಿನಾಲಜಿ ಮತ್ತು ಪೊರೆನ್ಸಿಕ್ ಸೈನ್ಸ್ ವಿಭಾಗದ ಮುಖ್ಯಸ್ಥೆ ಡಾ. ನಂದಿನಿ ಜಿ. ದೇವರಮನಿ ಮಾತನಾಡಿ, ಇಂದಿನ ಕಾಲಘಟ್ಟದಲ್ಲಿ ಅಪರಾಧ ಶಾಸ್ತ್ರ ಮತ್ತು ವಿಧಿವಿಜ್ಞಾನದ ಅಗತ್ಯತೆ ಹೆಚ್ಚಿದೆ. ಪ್ರಸ್ತುತ ಈ ಕೋರ್ಸ್ ಗೆ ಹೆಚ್ಚು ಬೇಡಿಕೆಯಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೊರೆನ್ಸಿಕ್ ಸೈನ್ಸ್ ನ ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗವನ್ನು ಸೃಷ್ಟಿಸುತ್ತಿದೆ ಎಂದರು.

ರಾಚವಿ ಕ್ರಿಮಿನಾಲಜಿ ಮತ್ತು ಪೊರೆನ್ಸಿಕ್ ಸೈನ್ಸ್ ಪ್ರಾಧ್ಯಾಪಕ ಪ್ರೊ. ಆರ್. ಎನ್. ಮನಗೋಳಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪೊಲೀಸ್ ಮತ್ತು ಫೋರೆನ್ಸಿಕ್ ಕ್ಷೇತ್ರಗಳಲ್ಲಿ ಇರುವ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯ ಪ್ರಾಚಾರ್ಯ ಪ್ರೊ ಎಸ್. ಸಿ. ಪಾಟೀಲ ಅವರು ಇಂದಿನ ಕಾಲದಲ್ಲಿ ಅಪರಾಧ ಎಸಗುವ ಪ್ರತಿಯೊಬ್ಬ ವ್ಯಕ್ತಿಯೂ ಡಿಜಿಟಲ್ ಜಗತ್ತಿನಲ್ಲಿ ಯಾವುದಾದರೊಂದು ಹೆಜ್ಜೆ ಗುರುತನ್ನು ಬಿಟ್ಟಿರುತ್ತಾನೆ. ಮೊಬೈಲ್ ಲೊಕೇಶನ್, ಸಾಮಾಜಿಕ ಜಾಲತಾಣದ ಚಟುವಟಿಕೆ ಇನ್ನಿತರ ಸಾಕ್ಷ್ಯಗಳನ್ನು ಬಿಟ್ಟು ಹೋಗಿರುತ್ತಾನೆ. ತಂತ್ರಜ್ಞಾನದ ಮೂಲಕ ಆರೋಪಿಗಳನ್ನು ಪತ್ತೆಹಚ್ಚುವುದು ಇಂದು ಸುಲಭವಾಗಿದೆ. ಅಪರಾಧಿಗಳು ತಮ್ಮ ದತ್ತಾಂಶಗಳನ್ನು ಅಳಿಸಿ ಹಾಕಿದರೂ ಅದನ್ನು ಮರಳಿ ಪಡೆಯುವ ತಂತ್ರಜ್ಞಾನವನ್ನು ಪೊಲೀಸರು ಬಳಸುವುದರಿಂದ ಅಪರಾಧಿಗಳನ್ನು ಪತ್ತೆ ಹೆಚ್ಚಿಸಲು ಪೊಲೀಸ್ ಇಲಾಖೆಗೆ ಸಹಾಯವಾಗಿದೆ. ವಿದ್ಯಾರ್ಥಿಗಳು ನೈತಿಕ ಮೌಲ್ಯಗಳು, ಶಿಸ್ತು ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ ನಾಗರಿಕ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ವಿಭಾಗದ ಮುಖ್ಯಸ್ಥ ಡಾ. ಚಿದಾನಂದ ಹಾರುಗೇರಿ ಸ್ವಾಗತಿಸಿದರು, ಉಪನ್ಯಾಸಕ ಯೋಗೇಶ್ ಕಾಂಬಳೆ ಪರಿಚಯಿಸಿದರು, ಸಹನಾ ನರಗುಂದ ವಂದಿಸಿದರು, ವಿದ್ಯಾರ್ಥಿನಿಯರಾದ ರೇವತಿ ಮತ್ತು ಮಧುಪ್ರಿಯಾ ನಿರೂಪಿಸಿದರು. ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ