Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕನ್ನಡದ ಖ್ಯಾತ ಪೋಷಕ ನಟ ದಿನೇಶ ಮಂಗಳೂರು ನಿಧನ

ಉಡುಪಿ : ಕೆಜಿಎಫ್‌ ಸೇರಿದಂತೆ ಅನೇಕ‌ ಸಿನಿಮಾಗಳಲ್ಲಿ ನಟಿಸಿದ್ದ ಪ್ರತಿಭಾನ್ವಿತ ನಟ, ಕಲಾ ನಿರ್ದೇಶಕ ದಿನೇಶ ಮಂಗಳೂರು ಇಂದು ಭಾನುವಾರ (ಆಗಸ್ಟ್‌ 25) ಬೆಳಗಿನ ಜಾವ ನಿಧನರಾಗಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು.
ದಿನೇಶ ಮಂಗಳೂರು ಅವರು ಕಳೆದ ಐದು ದಿನಗಳಿಂದ ಪಾರ್ಶ್ವವಾಯುವಿಗೆ ಕುಂದಾಪುರದ ಸರ್ಜನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ‘ಕಾಂತಾರ’ ಚಿತ್ರದ ಶೂಟಿಂಗ್​ ವೇಳೆ ಅವರಿಗೆ ಪಾರ್ಶ್ವವಾಯು ಆಗಿತ್ತು ಎನ್ನಲಾಗಿದೆ. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ಒಂದು ವಾರದ ಹಿಂದೆ ಅವರು ಮತ್ತೆ ಅಸ್ವಸ್ಥರಾಗಿದ್ದರು.
ಕೆಜಿಎಫ್ ಬಾಂಬೆ ಡಾನ್ ಪಾತ್ರದಲ್ಲಿ ನಟಿಸಿದ್ದ ದಿನೇಶ ಅವರು ರಿಕ್ಕಿ, ಹರಿಕಥೆ ಅಲ್ಲ ಗಿರಿಕಥೆ, ಉಳಿದವರು ಕಂಡಂತೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೋಷಕ ನಟರಾಗಿ ಅಭಿನಯಿಸಿದ್ದರು.

‘ಉಳಿದವರು ಕಂಡಂತೆ’, ‘ರಿಕ್ಕಿ’, ‘ಕಿರಿಕ್‌ ಪಾರ್ಟಿ’ ಹಾಗೂ ಪುನೀತರಾಜಕುಮಾರ ಅವರ ‘ರಣ ವಿಕ್ರಮ’ ಚಿತ್ರದಲ್ಲಿನ ಕುಲಕರ್ಣಿ ಪಾತ್ರದಲ್ಲಿನ ಅವರ ನಟನೆ ಎಲ್ಲರ ಗಮನಸೆಳೆದಿತ್ತು. ‘‘ಕೆಜಿಎಫ್: ಚಾಪ್ಟರ್ 1’ ಮತ್ತು ‘ಕೆಜಿಎಫ್: ಚಾಪ್ಟರ್ 2’ ಸಿನಿಮಾಗಳಲ್ಲಿ ದಿನೇಶ ಮಂಗಳೂರು ಅಭಿನಯ ಅವರಿಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹೆಸರನ್ನು ತಂದುಕೊಟ್ಟಿತ್ತು. ‘ವೀರ ಮದಕರಿ’, ‘ಚಂದ್ರಮುಖಿ ಪ್ರಾಣಸಖಿ’ ಮುಂತಾದ ಸಿನಿಮಾಗಳಿಗೆ ಅವರು ಕಲಾ ನಿರ್ದೇಶನ ಕೂಡ ಮಾಡಿದ್ದಾರೆ. ಈ ವರ್ಷ ತೆರೆಕಂಡ ‘ಭುವನಂ ಗಗನಂ’, ‘ಎಲ್ಲೋ ಜೋಗಪ್ಪ ನಿನ್ನ ಅರಮನೆ’ ಸಿನಿಮಾಗಳಲ್ಲಿ ಅವರು ಕೊನೆಯದಾಗಿ ಕಾಣಿಸಿಕೊಂಡಿದ್ದರು
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ