Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ

 

ಬೆಳಗಾವಿ :
ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯನ್ನು ಬೆಳಗಾವಿ ಜಿಲ್ಲೆಯಲ್ಲಿ ಜುಲೈನಿಂದ ಅನುಷ್ಠಾನಗೊಳಿಸಬೇಕಾಗಿರುವುದರಿಂದ ಜಿಲ್ಲೆಯಲ್ಲಿ ಒಟ್ಟು ಅಂತ್ಯೋದಯ ೬೮,೬೩೬ ಪಡಿತರ ಚೀಟಿಗಳು ಹಾಗೂ ಅದರ ಫಲಾನುಭವಿಗಳು ೨,೭,೧೦೭೮ ಅದೇ ರೀತಿ ಆದ್ಯತಾ (ಬಿಪಿಎಲ್) ಪಡಿತರ ಚೀಟಿಗಳು ಒಟ್ಟು ೧೦,೮೦,೮೮೦ ಅದರ ಫಲಾನುಭವಿಗಳು ೩೫,೦೧,೨೩೭ ಇದ್ದು, ಅಂತೂ ಒಟ್ಟು ಪಡಿತರ ಚೀಟಿ ಸಂಖ್ಯೆ ೧೧೪೯೫೧೬ ಅಂತೂ ಒಟ್ಟು ಫಲಾನುಭವಿಗಳ ಸಂಖ್ಯೆ ೩೭೭೨೩೧೫ ಇರುತ್ತದೆ.

ಫಲಾನುಭವಿಗಳ ಕುಟುಂಬ ಮುಖ್ಯಸ್ಥರು ಕಡ್ಡಾಯವಾಗಿ ರಾಷ್ಟ್ರೀಕೃತ ಬ್ಯಾಂಕ್ ಅಥವಾ ಪೋಸ್ಟ್ ಆಫೀಸಿನಲ್ಲಿ ಉಳಿತಾಯ ಖಾತೆ ಹೊಂದಿರತಕ್ಕದ್ದು. ಸದರಿ ಉಳಿತಾಯ ಖಾತೆಯು ಚಾಲ್ತಿಯಲ್ಲಿದ್ದು, ಇ-ಕೆವೈಸಿ ಪೂರ್ಣಗೊಂಡಿರಬೇಕು.
ಒಂದು ವೇಳೆ ಬ್ಯಾಂಕ್‌ನಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳದೇ ಬಾಕಿ ಉಳಿಸಿಕೊಂಡಲ್ಲಿ ಅಂತಹ ಫಲಾನುಭವಿಗಳು ತುರ್ತಾಗಿ ಬ್ಯಾಂಕ್‌ಗಳಿಗೆ ತೆರಳಿ ಇ-ಕೆವೈಸಿ ಮಾಡಿಕೊಳ್ಳತಕ್ಕದ್ದು, ಮತ್ತು ಇಲ್ಲಿಯವರೆಗೆ ಬ್ಯಾಂಕ್ ಖಾತೆ ಹೊಂದದೇ ಇರುವ ಫಲಾನುಭವಿಗಳು ಕೂಡಲೇ ಹೊಸ ಬ್ಯಾಂಕ್ ಖಾತೆಯನ್ನು ತೆರೆದು ಅದಕ್ಕೆ ಆಧಾರ ಕಾರ್ಡ್ ಹಾಗೂ ಪೋನ್ ನಂಬರ ಲಿಂಕ್ ಮಾಡಿಕೊಳ್ಳಬೇಕು.

ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿ ಸಂಚಾಲಕರಿಗೆ ಮಾಹಿತಿಯನ್ನು ಒದಗಿಸಬೇಕು. ಪ್ರತಿ ಫಲಾನುಭವಿಗೆ ರೂ. ೧೭೦/- ರಂತೆ ಜುಲೈ ೨೦೨೩ ತಿಂಗಳ ಕೊನೆಗೆ ಹಣ ಸಂದಾಯ ಮಾಡಲಾಗುತ್ತಿದೆ.
ಈ ಕುರಿತು ಯಾವುದೇ ಸಮಸ್ಯೆ ಇದ್ದಲ್ಲಿ ವೆಬ್‌ಸೈಟ್ ಮೂಲಕ ನೇರ ನಗದು ಪಾವತಿಯಾದ ಕುರಿತು ಪರಿಶೀಲಿಸಬಹುದಾಗಿದೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ಕಾರ್ಯಾಲಯದ ಆಹಾರ ಶಾಖೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ