Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಿಂದುಳಿದ ವರ್ಗಗಳ ಪತ್ರಕರ್ತರಿಗೆ ಮಾಧ್ಯಮ ಕಿಟ್ ವಿತರಣೆ

ಬೆಂಗಳೂರು :ಸಮಾಜ‌ ಸುಧಾರಣೆಯಲ್ಲಿ ಮುದ್ರಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ. ಪತ್ರಕರ್ತರ ವೃತ್ತಿಗೆ ಅನುಕೂಲವಾಗುವಂತಹ ಲ್ಯಾಪ್‌ಟಾಪ್, ಕ್ಯಾಮೆರಾ ಮತ್ತಿತರ ಅಗತ್ಯ ಸಲಕರಣೆಗಳನ್ನು ಸರಕಾರದ ವತಿಯಿಂದ ನೀಡಲಾಗಿದ್ದು, ಇವುಗಳನ್ನು ಬಳಸಿಕೊಂಡು ಇನ್ನಷ್ಟು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ನಗರದ ಕಂಠೀರವ ಸ್ಟುಡಿಯೋ ಆವರಣದಲ್ಲಿ ಸೋಮವಾರ (ಮಾ.27) ನಡೆದ‌ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳಿಗೆ ಸೇರಿದ ಮಾನ್ಯತೆ ಪಡೆದ ಪತ್ರಕರ್ತರಿಗೆ ಮಾಧ್ಯಮ‌ ಕಿಟ್ ವಿತರಿಸಿ ಅವರು ಮಾತನಾಡಿದರು.

ಪತ್ರಕರ್ತರು ಮಾಹಿತಿ ಸಂಗ್ರಹದ ಜತೆಗೆ ವಿಚಾರಸಂಗ್ರಹವನ್ನೂ ಹೆಚ್ಚಿಸಿಕೊಂಡು ಜನೋಪಯೋಗಿ ಮಾಹಿತಿಯನ್ನು ನೀಡಬೇಕು.
ಇದನ್ನು ಬಳಸಿಕೊಂಡು ಇನ್ನಷ್ಟು ‌ಪರಿಣಾಮಕಾರಿ‌ ಕೆಲಸ ಸಮಾಜ ಹಾಗೂ ವ್ಯವಸ್ಥೆಯ ಅಂಕುಡೊಂಕು ತಿದ್ದುವ ಕೆಲಸವನ್ನು ಮಾಡಬೇಕು ಎಂದು ಕಿವಿಮಾತು ಹೇಳಿದರು.

ಹಿಂದುಳಿದ ವರ್ಗಗಳ ಪತ್ರಕರ್ತರ ವೃತ್ತಿಗೆ ಸಹಕಾರಿಯಾಗುವಂತಹ ಕ್ಯಾಮೆರಾ, ಲ್ಯಾಪ್‌ಟಾಪ್ ಮತ್ತಿತರ ಗುಣಮಟ್ಟದ ಸಲಕರಣೆಗಳನ್ನು ಸರಕಾರದ ವತಿಯಿಂದ ನೀಡಲಾಗುತ್ತಿದೆ. ರಾಜ್ಯ ಎಲ್ಲ ಜಿಲ್ಲೆಗಳ ಒಟ್ಟು 605 ಜನರಿಗೆ ಅಗತ್ಯ ಸಲಕರಣೆಯನ್ನು ನೀಡಲಾಗುತ್ತಿದೆ.

ಹಿಂದೆ ಯಾವುದೇ ಸರಕಾರ ಈ ರೀತಿಯ ಮಾಧ್ಯಮ ಕಿಟ್ ನೀಡಿರಲಿಲ್ಲ. ಈ ಸಲಕರಣೆಗಳನ್ನು ಬಳಸಿಕೊಂಡು ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.

ಕೇಂದ್ರ ಸರಕಾರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಇಲಾಖೆಯ ಆಯುಕ್ತ ಡಾ.ಪಿ.ಎಸ್.ಹರ್ಷ, ಜಂಟಿ ನಿರ್ದೇಶಕ ಡಿ..ಪಿ.ಮುರಳೀಧರ್ ಸೇರಿದಂತೆ ಇಲಾಖೆಯ ಅಧಿಕಾರಿಗಳು, ಹಿರಿಯ ಪತ್ರಕರ್ತರು ಉಪಸ್ಥಿತರಿದ್ದರು.

ಆಯವ್ಯಯದಲ್ಲಿ ಘೋಷಿಸಿದಂತೆ ಹಿಂದುಳಿದ ವರ್ಗಗಳ ‌ಪತ್ರಕರ್ತರಿಗೆ ಮುಖ್ಯಮಂತ್ರಿಗಳು ಸಾಂಕೇತಿಕವಾಗಿ ಮಾಧ್ಯಮ ಕಿಟ್ ವಿತರಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ