Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಲೋಕಸಭೆ ಚುನಾವಣೆ : ಭರದ ತಯಾರಿಯಲ್ಲಿ ಜಿಲ್ಲಾಡಳಿತ

ಬೆಳಗಾವಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಮತದಾನದ ಕುರಿತು ಜಾಗೃತಿ ಮೂಡಿಸಬೇಕು. ಮತದಾರರ ಪಟ್ಟಿಗಳನ್ನು ಪರಿಷ್ಕರಣೆ ಮಾಡಬೇಕು. ವಯಸ್ಕರ ಮತದಾರರ ಪಟ್ಟಿಗಳ ಮಾಹಿತಿ ಸಂಗ್ರಹಿಸಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಸೂಚನೆ ನೀಡಿದರು.

ಚಿಕ್ಕೋಡಿ ಪಟ್ಟಣದ ಉಪವಿಭಾಗಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಚಿಕ್ಕೋಡಿ ಲೋಕಸಭಾ ಚುನಾವಣೆ ಕುರಿತು ನಡೆದ ಪೂರ್ವ ಸಿದ್ಧತೆಯ ಸಭೆಯಲ್ಲಿ ಅವರು ಮಾತನಾಡಿದರು.

ಮತಗಟ್ಟೆಗಳನ್ನು ಸರಿಯಾಗಿ ಪರಿಶೀಲನೆ ಮಾಡಬೇಕು. ಒಂದು ವೇಳೆ ದುರಸ್ತಿ ಇದ್ದಲ್ಲಿ ಸರಿಪಡಿಸಿಕೊಳ್ಳಬೇಕು. ಸೂಕ್ಷ್ಮ, ಅತೀ ಸೂಕ್ಷ್ಮ ಮತಗಟ್ಟೆಗಳ ಕಡೆಗೆ ಹೆಚ್ಚು ಗಮನಹರಿಸಬೇಕು ಎಂದು ತಿಳಿಸಿದರು.

ಮತಗಟ್ಟೆ ಅಧಿಕಾರಿಗಳಿಗೆ ಪ್ರಾತ್ಯಕ್ಷತೆ ತರಬೇತಿ ನೀಡಬೇಕು. ಮತದಾರರು ಹೆಚ್ಚು ಮತದಾನ ಮಾಡುವ ನಿಟ್ಟಿನಲ್ಲಿ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಲೋಕಸಭೆ ಚುನಾವಣೆಯಲ್ಲಿ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಉತ್ತಮ‌ ರೀತಿಯಲ್ಲಿ ಕೆಲಸ ಮಾಡಬೇಕು. ಎಲ್ಲ ಅಧಿಕಾರಿಗಳು ತಂಡವಾಗಿ ಕೆಲಸ ಮಾಡುವ ಮೂಲಕ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದರು.

ಚಿಕ್ಕೋಡಿ ಉಪವಿಭಾಗಾಧಿಕಾರಿ ಮಹೆಬೂಬಿ ತಹಶೀಲ್ದಾರ್ ಸಿ.ಎಸ್.ಕುಲಕರ್ಣಿ, ತಾಪಂ ಇಒ ಜಗದೀಶ ಕಮ್ಮಾರ ಹಾಗೂ ತಾಲ್ಲೂಕಾ ಮಟ್ಟದ ಎಆರ್ ಒಗಳು ಇಒಗಳು ಮತ್ತಿತರರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ