Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಸವ ಜಯಂತಿ ಅಂಗವಾಗಿ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ

ಬೆಳಗಾವಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯು ವಿಶ್ವಗುರು ಬಸವಣ್ಣನವರ ಜಯಂತ್ಯೋತ್ಸವ ನಿಮಿತ್ತ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಮತ್ತು ಎಲ್ಲ ವಯೋಮಿತ ಹಿರಿಯ ನಾಗರಿಕರಿಗೆ ಐದು ವಿಭಾಗಗಳಲ್ಲಿ ಪ್ರಬಂಧ ಸ್ಪರ್ಧೆಯನ್ನು ಬುಧವಾರ 8 ಏಪ್ರಿಲ್ 2026 ರಂದು ಮುಂಜಾನೆ 10.00 ಗಂಟೆಗೆ ಕೆಎಲ್‌ಇ ಸಂಸ್ಥೆಯ ಬೆಳಗಾವಿಯ ಜಿ. ಎ. ಪ್ರೌಢಶಾಲೆಯಲ್ಲಿ ಆಯೋಜಿಸಿದೆ.

ಪ್ರಾಥಮಿಕ ವಿಭಾಗಕ್ಕೆ ‘ಬಾಲಕ ಬಸವಣ್ಣ’, ಮಾಧ್ಯಮಿಕ ವಿಭಾಗಕ್ಕೆ ‘ವಚನಗಳಲ್ಲಿ ಸರ್ವಸಮಾನತೆ’, ಪದವಿಪೂರ್ವ ವಿಭಾಗಕ್ಕೆ ‘ಸಮಾಜಕ್ಕೆ ಶರಣರ ಕೊಡುಗೆ’, ಪದವಿ ಹಾಗೂ ಸ್ನಾತಕೋತ್ತರ ವಿಭಾಗಕ್ಕೆ ‘ವಚನಗಳಲ್ಲಿ ಪ್ರಕೃತಿದರ್ಶನ’ ಎಲ್ಲ ವಯೋಮಾನದವರಿಗೆ ‘ಶರಣರ ದೃಷ್ಟಿಯಲ್ಲಿ ದೇವರು’ ವಿಷಯದ ಮೇಲೆ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ. ಪ್ರಬಂಧವು ಒಂದು ಗಂಟೆಯದಾಗಿದ್ದು, 4 ಪುಟ ಮೀರದಂತೆ ರಚಿಸಬೇಕು.

ಸ್ಪರ್ಧಾ ವಿಜೇತರಿಗೆ ಪ್ರಶಸ್ತಿ ಪತ್ರಗಳನ್ನು ಬಸವ ಜಯಂತಿಯ ಉದ್ಘಾಟನಾ ಸಮಾರಂಭದಲ್ಲಿ ವಿತರಿಸಲಾಗುವುದು. ಆಸಕ್ತ ಸ್ಪರ್ಧಾಳುಗಳು 7 ಏಪ್ರಿಲ್ 2025 ರ ಒಳಗಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ, ಲಿಂಗಾಯತ ಭವನದಲ್ಲಿ ಹೆಸರನ್ನು ನೋಂದಾಯಿಸಬಹುದು ಅಥವಾ ಕಾರ್ಯಾಲಯದ ಪ್ರವೀಣ ತವಕರಿ ಮೊ.ನಂ. 9164345208 ಇವರನ್ನು ಸಂಪರ್ಕಿಸಬೇಕೆಂದು ಮಹಾಸಭೆಯ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ಹಾಗೂ ಜಯಂತಿ ಉತ್ಸವದ ಅಧ್ಯಕ್ಷ ಬಾಲಚಂದ್ರ ಬಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆಖ್ಯಾತ ನಟ ದರ್ಶನ್ ಗೆ ಇನ್ನೊಂದು ವರ್ಷ ಜಾಮೀನು ಇಲ್ಲ : ಸುಪ್ರೀಂ ಕೋರ್ಟ್ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಜನಗಣತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಶಿಕ್ಷಕಿ ಸಾವುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ದಾರುಣ ಸಾವುಒಂದೇ ಸಲ 224 ವಿಧಾನ ಸಭೆ ಸ್ಥಾನ ಗೆದ್ದು ಸಿಎಂ ಆಗುತ್ತೇನೆ ಎಂದಿದ್ದ ನೀಲಣ್ಣನವರಿಗೆ ಅಧಿಕಾರಿಗಳಿಂದ ಶಾಕ್ ..!ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವುಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ