Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಿಜೆಪಿ ಪ್ರತಿಭಟನೆ-ಗೋರಕ್ಷಕರ ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ - ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ

ಬೆಳಗಾವಿ : ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದವರನ್ನು ಪೋಲಿಸ ವಶಕ್ಕೆ ಪಡೆದು ಸೂಕ್ತ ಕಾನೂನಾತ್ಮಕವಾಗಿ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಪೋಲಿಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂದೆ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು

ಮಾಧ್ಯಮದವರೊಂದಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಮಾತನಾಡಿ, ಇತ್ತಿಚಿಗೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ
ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದ ಹಿಂದೂ ಕಾರ್ಯಕರ್ತರ ಮೇಲಿನ ಹಲ್ಲೆಯನ್ನು ಭಾರತೀಯ ಜನತಾ ಪಾರ್ಟಿ
ತೀವೃವಾಗಿ ಖಂಡಿಸುತ್ತದೆ, ಗೋ ಶಾಲೆಯಿಂದ ಗೋವುಗಳನ್ನು ತೆಗೆದುಕೊಂದು ಹೋಗಿದ್ದನ್ನು ನೋಡಿ
5 ಜನ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ. ಪ್ರಶ್ನೆ ಮಾಡಿದ್ದಕ್ಕೆ ದಲ್ಲಾಲಿಗಳು ಹಿಂದೂ
ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಹಾಕಿ ಮನಸೋಇಚ್ಚೆ ತಳಿಸಿದ್ದಾರೆ, ಈ ಕೃತ್ಯದ ವಿಡಿಯೋಗಳು ಇಗಾಗಲೇ ಸಾಮಾಜಿಕ
ಜಾಲತಾಣದಲ್ಲಿ ಮತ್ತು ಸುದ್ದಿ ಮಾಧ್ಯಮದಲ್ಲಿ ಹರಿದಾಡುತ್ತಿವೆ.
ಈ ಘಟನೆಯು ಯಮಕನಮರಡಿ ಪೋಲಿಸ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ಹಿಂದೂ ಕಾರ್ಯಕರ್ತರು ನಂತರ ಪೋಲಿಸ ಠಾಣೆಗೆ ದೂರು ದಾಖಲಿಸಲು ಹೋದಾಗ ಹಿಂದೂ ಕಾರ್ಯರ್ತರನ್ನು
ಅವಾಚ್ಯ ಶಬ್ದಗಳಿಂದ ನಿಂದಿಸಿ ದೂರು ದಾಖಲಿಸಿಕೊಳ್ಳದೇ ಉದ್ಧಟತನ ಪ್ರದರ್ಶಿಸಿದ್ದಾರೆ. ಪೋಲಿಸರು ಯಾರ ಕುಮ್ಮಕ್ಕಿನಿಂದ
ಈ ರೀತಿ ಮಾಡಿದ್ದಾರೆಂದು ತಿಳಿಯಬೇಕಾಗಿದೆ
ತಾವು ಈ ಕೂಡಲೇ ಈ ಪ್ರಕರಣಕ್ಕೆ ಸಂಬಂದಪಟ್ಟ ವಿಡಿಯೋದಲ್ಲಿ ಕಾಣಿಸಿರುವ
ಹಲ್ಲೆಕೋರನ್ನು ಬಂಧಿಸಿ ಅವರ ಮೇಲೆ ಎಫ್.ಐ.ಆರ್ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇವೆ.
ಹಾಗೂ ಉದ್ಧಟತನ ಮೆರದ ಪೋಲಿಸ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಜರುಗಿಸಬೇಕೆಂದು ಆಗ್ರಹಿಸುತ್ತೇವೆ. ಈ ಮುಖಾಂತರ
ಹಲ್ಲೆಗೊಳಗಾದ ಹಿಂದೂ ಕಾರ್ಯಕರ್ತರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಆಗ್ರಹಿಸಿದರು ಇದೇ ವೇಳೆ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಅವರು ಆಗಮಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಮುಖಂಡ ಬಸವರಾಜ ಹುಂದ್ರಿ,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ದೇಶಪಾಂಡೆ, ಮಲ್ಲಿಕಾರ್ಜುನ ಮಾದಮ್ಮನವರ, ಧನಶ್ರೀ ದೇಸಾಯಿ, ಮುರುಗೇಂದ್ರಗೌಡ ಪಾಟೀಲ, ಈರಯ್ಯ ಖೋತ್, ಜಿಲ್ಲಾ ಉಪಾಧ್ಯಕ್ಷ ಬಸನಗೌಡ ಕೊಳದೂರ, ಜಿಲ್ಲಾ ಮಾಧ್ಯಮ ಪ್ರಮುಖ್ ಸಚಿನ್ ಕಡಿ, ಜಿಲ್ಲಾ ಕೋಶಾಧ್ಯಕ್ಷ ಸಂತೋಷ ದೇಶನೂರ, ಮುಖಂಡರಾದ ಧನಂಜಯ ಜಾಧವ, ರಾಜೇಶ್ ನೆರ್ಲಿ, ಶಿವಾನಂದ ಹನುಮಸಾಗರ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹಾಂತೇಶ ಚಿನ್ನಪ್ಪಗೌಡ್ರ, ಶ್ರೀಕರ ಕುಲಕರ್ಣಿ,ಮನೋಜ್ ಪಾಟೀಲ, ಪ್ರಶಾಂತ್ ಅಮ್ಮಿನಭಾವಿ, ಮಹಾಂತೇಶ ವಕ್ಕುಂದ, ಪಂಡಿತ್ ಓಗಲೆ, ಪ್ರಸಾದ್ ದೇವರಮನಿ, ಆನಂದ ಬಾಗೋಡಿ, ಶ್ವೇತಾ ಜಗದಾಳೆ, ವೀರಭದ್ರ ಪೂಜಾರಿ, ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ