Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

 

ಬೆಂಗಳೂರು:
'ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಿಡಿಕಾರಿದ್ದಾರೆ.

ಸದಾಶಿವನಗರ ನಿವಾಸ ಹಾಗೂ ಸಾಂಘರಿಲಾ ಹೋಟೆಲ್ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಶಿವಕುಮಾರ್ ಅವರು, 'ಕರ್ನಾಟಕದಲ್ಲಿ ಇಬ್ಬರು ಬಿಜೆಪಿ ಶಾಸಕರು ಚೆಕ್ ಬೌನ್ಸ್ ಹಾಗೂ ಇತರೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಅವರನ್ನು ಅನರ್ಹಗೊಳಿಸಿಲ್ಲ ಯಾಕೆ? ಅವರಿಗೆ ಬೇರೆ, ನಮಗೆ ಬೇರೆ ಕಾನೂನು ಇದೆಯೇ? ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ್ದು, ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ದಾಳಿ ಮಾಡಲಾಗಿದೆ. ನಾವು ಇದನ್ನು ಖಂಡಿಸುತ್ತೇವೆ. ನ್ಯಾಯಾಲಯದಲ್ಲಿ ಈ ವಿಚಾರವಾಗಿ ಹೋರಾಟ ಮಾಡುತ್ತೇವೆ. ನಮಗೆ ನ್ಯಾಯ ಸಿಗುವ ಭರವಸೆ ಇದೆ' ಎಂದು ತಿಳಿಸಿದರು.

*ಚಂದ್ರನ ಹಿಂದೆ ಸೂರ್ಯನ ಬೆಳಕು ಬರಲಿದೆ*

ಇನ್ನು ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಗ್ಗೆ ಮಾತನಾಡಿದ ಶಿವಕುಮಾರ್ ಅವರು, ' ಎಲ್ಲರೂ ಯುಗಾದಿ ಚಂದ್ರನ ನೋಡಲು ಕಾಯುತ್ತಿದ್ದರು. ಅದರಂತೆ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಎರಡನೇ ಪಟ್ಟಿ ಪ್ರಕಟಿಸಲಾಗುವುದು. ಆ ಮೂಲಕ ಚಂದ್ರನ ಹಿಂದೆ ಸೂರ್ಯನ ಬೆಳಕು ಆಗಮಿಸಲಿದೆ' ಎಂದು ತಿಳಿಸಿದರು.

'ಬಹುತೇಕ ಶೇ. 95 ರಷ್ಟು ಹಾಲಿ ಶಾಸಕರಿಗೇ ಟಿಕೆಟ್ ಸಿಗಲಿದೆ. ಕೆಲವು ಕ್ಷೇತ್ರಗಳಲ್ಲಿ ಮಾತುಕತೆ ಸಂಧಾನ ನಡೆಯುತ್ತಿದ್ದು, ಎರಡನೇ ಪಟ್ಟಿಯಲ್ಲಿ ಉಳಿದ ಹೆಸರುಗಳು ಪ್ರಕಟವಾಗಲಿದೆ' ಎಂದು ತಿಳಿಸಿದರು.

ಧ್ರುವನಾರಾಯಣ ಅವರ ಪುತ್ರನಿಗೆ ಟಿಕೆಟ್ ನೀಡಿರುವ ವಿಚಾರವಾಗಿ ಕೇಳಿದ ಪ್ರಶ್ನೆಗೆ, ' ಈ ಕ್ಷೇತ್ರದಲ್ಲಿ ಧ್ರುವನಾರಾಯಣ ಅವರು ಸ್ಪರ್ಧಿಸಬೇಕಿತ್ತು. ಆದರೆ ಅವರು ನಮ್ಮನ್ನು ಅಗಲಿದ್ದಾರೆ. ಹೀಗಾಗಿ ಯುವಕರಾದ ಅವರ ಪುತ್ರನಿಗೆ ಟಿಕೆಟ್ ನೀಡಿದ್ದೇವೆ.

ವಿರೋಧದ ನಡುವೆ ಪುಟ್ಟಣ್ಣ ಅವರಿಗೆ ಟಿಕೆಟ್ ನೀಡಿರುವ ಬಗ್ಗೆ ಕೇಳಿದಾಗ, ' ಪುಟ್ಟಣ್ಣ ಅವರು ನಾಲ್ಕೂವರೆ ವರ್ಷಗಳ ಪರಿಷತ್ ಅಧಿಕಾರ ತ್ಯಜಿಸಿ ಪಕ್ಷ ಸೇರಿದ್ದಾರೆ. ಹೀಗಾಗಿ ಅವರಿಗೆ ಒಂದು ಅವಕಾಶ ಕಲ್ಪಿಸಲು ಪಕ್ಷ ತೀರ್ಮಾನಿಸಿದೆ ' ಎಂದು ತಿಳಿಸಿದರು.

ತೀರ್ಥಹಳ್ಳಿ ಸೇರಿದಂತೆ ಪ್ರಮುಖ ಸಂಧಾನ ಕ್ಷೇತ್ರಗಳಲ್ಲಿ ಟಿಕೆಟ್ ಪ್ರಕಟಿಸದಿರುವ ಬಗ್ಗೆ ಕೇಳಿದಾಗ, 'ಎಲ್ಲವೂ ಸರಿ ಹೋಗಲಿದೆ ' ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ವಿಚಾರವಾಗಿ ಕೇಳಿದಾಗ, 'ಕ್ಷೇತ್ರ ಆಯ್ಕೆಯನ್ನು ಸಿದ್ದರಾಮಯ್ಯನವರ ವಿವೇಚನೆಗೆ ಬಿಡಲಾಗಿತ್ತು. ಅವರು ವರುಣಾದಿಂದ ಸ್ಪರ್ಧಿಸಲು ಇಚ್ಚಿಸಿದ್ದು, ಪಕ್ಷ ಟಿಕೆಟ್ ನೀಡಿದೆ' ಎಂದು ತಿಳಿಸಿದರು.

ಕೋಲಾರ ಹಾಗೂ ಬಾದಾಮಿ ಕ್ಷೇತ್ರಗಳಲ್ಲಿ ಟಿಕೆಟ್ ಘೋಷಣೆಯಾಗದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಮತ್ತೊಂದು ಕ್ಷೇತ್ರದಿಂದ ಸ್ಪರ್ಧಿಸಬಹುದೇ ಎಂದು ಕೇಳಿದಾಗ, ' ಈ ಪ್ರಶ್ನೆಯನ್ನು ಪಕ್ಷದ ಹೈಕಮಾಂಡ್ ಗೆ ಕೇಳಬೇಕು' ಎಂದು ತಿಳಿಸಿದರು.

ಅಪಾರ್ಟಮೆಂಟ್ ನಿವಾಸಿಗಳ ಸಭೆ ಕುರಿತು ಕೇಳಿದ ಪ್ರಶ್ನೆಗೆ, ' ಬೆಂಗಳೂರು ಅಭಿವೃದ್ಧಿಯಾಗುತ್ತಿರುವ ಪ್ರದೇಶ. ಇಲ್ಲಿ ಸಂಚಾರ ದಟ್ಟಣೆ ಸೇರಿದಂತೆ ಅನೇಕ ಸಮಸ್ಯೆಗಳಿದ್ದು, ಅವರ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಪರಿಹಾರ ರೂಪಿಸಲು ಪ್ರಯತ್ನ ಮಾಡುತ್ತಿದ್ದೇವೆ ' ಎಂದು ತಿಳಿಸಿದರು.

*ಮೀಸಲಾತಿ ಬೋಗಸ್*

ಮೀಸಲಾತಿ ಹೆಚ್ಚಳ ವಿಚಾರವಾಗಿ ಕೇಳಿದ ಪ್ರಶ್ನೆಗೆ, ' ಇದೆಲ್ಲವೂ ಬೋಗಸ್ ಘೋಷಣೆ. ರಾಜ್ಯದ ಜನರನ್ನು ಮೂರ್ಖರನ್ನಾಗಿಸುವ ಪ್ರಯತ್ನ ' ಎಂದು ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ