Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊಲ್ಲೂರಿನಲ್ಲಿ ಡಿ.ಕೆ. ಶಿವಕುಮಾರ್ ಮನವಿ : ಊರ ಹೊರಗಿದ್ದರೂ ಬಂದು ಕಾಂಗ್ರೆಸಿಗೆ ಮತ ಹಾಕಿ !

 

ಬೈಂದೂರು :
ಬೈಂದೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪ್ರಚಾರ ಸಭೆಯಲ್ಲಿ ಜನರ ಉತ್ಸಾಹ ಮುಗಿಲು ಮುಟ್ಟಿತ್ತು. ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಈ ಬಾರಿ ಯಾವುದೇ ಕಾರಣಕ್ಕೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕು ಎಂದು ಮನವಿ ಮಾಡಿದರು.

ಬಿಜೆಪಿಯಿಂದ ಸಾವಿರಾರು ಜನ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಆನೇಕ ನಾಯಕರು ಕಾಂಗ್ರೆಸ್ ಸೇರಿದ್ದಾರೆ. ಜನರ ಈ ವಿಶ್ವಾಸ ಉಳಿಸಿಕೊಂಡು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತಂದು ಜನರ ಸೇವೆ ಮಾಡಬೇಕು. ರಾಹುಲ್ ಗಾಂಧಿ ಅವರು ಈ ಭಾಗದಲ್ಲಿ ಪ್ರಚಾರ ಮಾಡಲಿದ್ದಾರೆ ಎಂದು ಹೇಳಿದರು.

ಕರಾವಳಿ ಭಾಗದಲ್ಲಿ ನಮ್ಮ ಪಕ್ಷಕ್ಕೆ ಉತ್ತಮ ವಾತಾವರಣವಿದ್ದು ಕನಿಷ್ಠ 10 ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸವಿದೆ.
ಈ ಭಾಗದಲ್ಲಿ ಬಿಜೆಪಿ ಹಿಂದುತ್ವದ ವಿಚಾರದಲ್ಲಿ ಚುನಾವಣೆ ಮಾಡುತ್ತಿದೆ ಇದು ಫಲ ನೀಡುವುದೇ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, 'ಈ ಬಾರಿ ಆ ತಂತ್ರ ಫಲ ನೀಡುವುದಿಲ್ಲ. ಈ ಚುನಾವಣೆ ಭಾವನೆ ಹಾಗೂ ಬದುಕಿನ ನಡುವಣ ಚುನಾವಣೆ. ಬಿಜೆಪಿ ಭಾವನೆಗಳ ಮೇಲೆ ಚುನಾವಣೆ ಮಾಡಿದರೆ, ನಾವು ಬದುಕಿನ ಮೇಲೆ ಚುನಾವಣೆ ಮಾಡುತ್ತೇವೆ. ಅವರು ಭ್ರಷ್ಟಾಚಾರ ನಿರ್ಮೂಲನೆಗೆ ನಾವು ಪಣ ತೊಟ್ಟಿದ್ದೇವೆ' ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದ ವಿರುದ್ಧ ಬಂಡಾಯ ಸ್ಪರ್ಧಿಗಳ ವಿಚಾರವಾಗಿ ಕೇಳಿದ ಪ್ರಶ್ನೆಗೆ, 'ಬಹುತೇಕ ಎಲ್ಲಾ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯುತ್ತಾರೆ. ಕೆಲವರಿಗೆ ಪಕ್ಷೇತರರಾಗಿ ಸ್ಪರ್ಧಿಸುವ ಚಟ ಇದ್ದು, ಮೊದಲಿನಿಂದಲೂ ಹಾಗೆ ಮಾಡಿದ್ದಾರೆ. ಅಂತಹವರನ್ನು ಹೋಗಬಹುದು, ಉಳಿದವರು ಅರ್ಜಿ ಹಿಂಪಡೆಯಲಿದ್ದಾರೆ. ನಿನ್ನೆ ಉಡುಪಿಯಲ್ಲಿ ಮಾತನಾಡಿದ್ದೇನೆ, ಅವರು ಹಾಗೂ ಚಿಕ್ಕಪೇಟೆಯಲ್ಲಿ ಮಾಜಿ ಮೇಯರ್ ಅವರು ಅರ್ಜಿ ಹಿಂಪಡೆಯಲಿದ್ದಾರೆ' ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರ ಲಿಂಗಾಯತ ಸಮುದಾಯ ಕುರಿತ ವಿವಾದದ ಬಗ್ಗೆ ಕೇಳಿದಾಗ, 'ಸಿದ್ದರಾಮಯ್ಯ ಅವರು ಅವರ ಕಾಲದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹೇಳಿದ್ದಾರೆ ಹೊರತು, ಇಡೀ ಸಮುದಾಯ ಉದ್ದೇಶಿಸಿ ಹೇಳಿಲ್ಲ. ರಾಜ್ಯದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿ ನಾಯಕರಾದ ಯತ್ನಾಳ್, ವಿಶ್ವನಾಥ್, ಗೂಳಿಹಟ್ಟಿ ಶೇಖರ್, ಕೆಂಪಣ್ಣ ಅವರು ಹೇಳಿದ್ದಾರೆ. ಈ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಿರುವುದನ್ನು ಯಾರು ಮುಚ್ಚಿ ಹಾಕಲು ಸಾಧ್ಯವಿಲ್ಲ. ರಾಜ್ಯದಲ್ಲಿ 40% ಕಮಿಷನ್, ಪಿ ಎಸ್ ಐ ಸೇರಿದಂತೆ ನೇಮಕಾತಿ ಹಗರಣ, ವಿವಿ ಉಪಕುಲಪತಿ ನೇಮಕಕ್ಕೆ ಹಣ ಪಡೆದಿರುವುದು ನಮ್ಮ ಕಾಲದಲ್ಲಿ ಆಗಿದೆಯಾ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿದೆ. ಸಿದ್ದರಾಮಯ್ಯ ಸರ್ಕಾರದ ವಿಚಾರ ಮಾತನಾಡಿದ್ದು, ಸಮುದಾಯದ ವಿಚಾರ ಮಾತನಾಡಿಲ್ಲ' ಎಂದು ತಿಳಿಸಿದರು.

ಈ ಬಾರಿ ಲಿಂಗಾಯತ ಸಮುದಾಯ ಕಾಂಗ್ರೆಸ್ ಪಕ್ಷದ ಕೈ ಹಿಡಿಯಲಿದೆಯೆ ಎಂಬ ಪ್ರಶ್ನೆಗೆ, 'ಬಿಜೆಪಿ ಆಣೆಕಟ್ಟು ಒಡೆದಿದೆ. ಕೇವಲ ಲಿಂಗಾಯತ ಸಮುದಾಯ ಮಾತ್ರವಲ್ಲ, ಎಲ್ಲಾ ಸಮುದಾಯದ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಉತ್ತಮ ಆಡಳಿತ ನೀಡಲಾಗುವುದು. ಹೊರಗಡೆ ಇರುವ ಎಲ್ಲ ಮತದಾರರು ತಮ್ಮ ಊರಿಗೆ ಬಂದು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಬೇಕು ಎಂದು ಮನವಿ ಮಾಡುತ್ತೇನೆ' ಎಂದು ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ