Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಡಿಕೆಶಿ ದಿಲ್ಲಿ ಭೇಟಿ ರದ್ದು

 

ಬೆಂಗಳೂರು :
ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಹುದ್ದೆಯಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಾನು ಮುಖ್ಯಮಂತ್ರಿ ಹುದ್ದೆಗೆ ಪ್ರಬಲ ಆಕಾಂಕ್ಷಿ ಎಂದು ಪ್ರತಿಪಾದಿಸಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಸೋಮವಾರ ಸಂಜೆ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ ಇದು.
ಈ ನಡುವೆ ಅವರ ದೆಹಲಿ ಭೇಟಿ ರದ್ದಾಗಿದೆ.

ಇಂದು ನನ್ನ ಜನ್ಮದಿನವಾಗಿದ್ದು, ನನ್ನ ಖಾಸಗಿ ಕಾರ್ಯಕ್ರಮದಲ್ಲಿ ನನ್ನ ಗುರುಗಳನ್ನು ಭೇಟಿ ಮಾಡಲಿದ್ದೇನೆ. ನಂತರ ನಾನು ದೆಹಲಿಗೆ ಪ್ರಯಾಣ ಬೆಳೆಸಬೇಕಿದೆ.

ನಿನ್ನೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಕ್ಷದ 135 ಶಾಸಕರೂ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದು, ಸಿಎಂ ಆಯ್ಕೆ ತೀರ್ಮಾನವನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ತೀರ್ಮಾನಕ್ಕೆ ಬಿಡಲು ಎಲ್ಲಾ ಶಾಸಕರು ಸರ್ವಾನುಮತದ ಒಪ್ಪಿಗೆ ನೀಡಿದ್ದಾರೆ. ನನಗೆ ಯಾರ ನಂಬರ್ ಬಗ್ಗೆ ಮಾತನಾಡುವ ಶಕ್ತಿ ಇಲ್ಲ. ಡಬಲ್ ಇಂಜಿನ್ ಸರ್ಕಾರ ಹಾಗೂ ಭ್ರಷ್ಟಾಚಾರ ವಿರುದ್ಧ ನನ್ನ ಅಧ್ಯಕ್ಷತೆಯಲ್ಲಿ ಪಕ್ಷದ 135 ಅಭ್ಯರ್ಥಿಗಳು ಗೆಲವು ಸಾಧಿಸಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ಚುನಾವಣೆ ನಡೆಸಿದ ರೀತಿ, ಒಗ್ಗಟ್ಟಿನ ಪ್ರದರ್ಶನ ಎಲ್ಲವೂ ದೇಶಕ್ಕೆ ಮಾದರಿಯಾಗಿದ್ದು, ಅನೇಕ ನಾಯಕರುಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ..

ಕೆಲವು ಕಡೆಗಳಲ್ಲಿ ಸ್ಥಳೀಯವಾಗಿ ಉತ್ತಮವಾಗಿ ಸಂಘಟನೆ ಮಾಡಿದ್ದರೆ ನಮ್ಮ ಸಂಖ್ಯೆ ಇನ್ನು ಸ್ವಲ್ಪ ಹೆಚ್ಚಾಗುತ್ತಿತ್ತು. ಆದರೂ ನಮ್ಮ ಫಲಿತಾಂಶ ತೃಪ್ತಿ ತಂದಿದೆ. ಇಂದು ನಮ್ಮ ವರಿಷ್ಠರು ನನ್ನನ್ನು ಹಾಗೂ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆದಿದ್ದಾರೆ. ನಾನು ಹೋಗುತ್ತಿದ್ದೇನೆ. ನಾನು ಹೋಗುವುದು ಸ್ವಲ್ಪ ತಡವಾಗಲಿದೆ.

ನನ್ನ ವೈಯಕ್ತಿಕ ಬೆಂಬಲಕ್ಕೆ ಹೆಚ್ಚಿನ ಶಾಸಕರ ಸಂಖ್ಯಾಬಲವಿಲ್ಲದಿರಬಹುದು, ಆದರೆ ಪಕ್ಷದ 135 ಶಾಸಕರ ಸಂಖ್ಯೆ ನನ್ನ ಸಂಖ್ಯೆ. ನನ್ನನ್ನು ಪಕ್ಷದ ಅಧ್ಯಕ್ಷನಾಗಿ ಆಯ್ಕೆ ಮಾಡಿದಾಗ ನಾನು ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವ ಭರವಸೆ ನೀಡಿದ್ದೆ. ನಾನು ಕೊಟ್ಟ ಮಾತನ್ನು ಈಡೇರಿಸಿದ್ದೇನೆ.

ಬೇರೆಯವರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ನಾನು ಬೇರೆಯವರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಓರ್ವ ವ್ಯಕ್ತಿ. ನಾನು ಧೈರ್ಯವಾಗಿ ಪಕ್ಷವನ್ನು ಮುನ್ನಡೆಸಿದ್ದು, ನನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದೇನೆ. ಕಳೆದ ಐದು ವರ್ಷಗಳಲ್ಲಿ ಏನೆಲ್ಲಾ ಆಗಿದೆ ಎಂದು ನಾನು ಬಹಿರಂಗಪಡಿಸುವುದಿಲ್ಲ. ಭವಿಷ್ಯದಲ್ಲಿ ಇದರ ಬಗ್ಗೆ ಮಾತನಾಡುತ್ತೇನೆ. ನಾವು ಮೈತ್ರಿ ಸರ್ಕಾರ ಕಳೆದುಕೊಂಡಾಗ ಶಾಸಕರು ಪಕ್ಷ ಬಿಟ್ಟು ಹೋದಾಗ ನಾವು ಧೃತಿಗೆಡಲಿಲ್ಲ. ಧೈರ್ಯವಾಗಿ ಜವಾಬ್ದಾರಿ ಹೊತ್ತು, ಕೆಲಸ ಮಾಡಿದ್ದೇನೆ. ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ನನಗೆ ಧೈರ್ಯ ತುಂಬಿದ್ದು, ಈ ವಿಚಾರವನ್ನು ಅವರಿಗೆ ಬಿಡುತ್ತೇನೆ’ ಎಂದು ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ