Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಡಿಕೆಶಿ ಸಿಎಂ : ನಿಜವಾಯ್ತು ಬೊಂಬೆ ಭವಿಷ್ಯ..!

ಧಾರವಾಡ: ಉಪ್ಪಿನ ಬೆಟಗೇರಿಗೆ ಹೊಂದಿಕೊಂಡ ಹನುಮನಕೊಪ್ಪ ಗ್ರಾಮದ ಗ್ರಾಮಸ್ಥರು ನಡೆಸಿಕೊಂಡು ಬಂದಿರುವ ಬೊಂಬೆ ಭವಿಷ್ಯ ಮತ್ತೆ ನಿಜವಾಗಿದೆ.

ಸಿಎಂ ಸಿದ್ದರಾಮಯ್ಯ ಪದತ್ಯಾಗ ಆಗಬಹುದು ಎಂದು ಈ ವರ್ಷದ ಯುಗಾದಿ ಪಾಡ್ಯಮಿಯಂದು ಹಾಕಲಾಗಿದ್ದ ಬೊಂಬೆ ಭವಿಷ್ಯ ನುಡಿದಿತ್ತು. ಆ ಪ್ರಕಾರ ಇದೀಗ ಸಿಎಂ ಸಿದ್ದರಾಮಯ್ಯ ಅವರು ಖುರ್ಚಿ ಬಿಟ್ಟು ಕೆಳಗಿಳಿದಿದ್ದಾರೆ.

ಯುಗಾದಿ ಅಮವಾಸ್ಯೆಯಂದು ಪೂರ್ವಕ್ಕೆ ಹರಿಯುವ ಹಳ್ಳದಲ್ಲಿ ಹನುಮನಕೊಪ್ಪ ಗ್ರಾಮದ ಹಿರಿಯರು ಫಲ ಹಾಕಿ ಬರುತ್ತಾರೆ. ಮಣ್ಣಿನಿಂದ ಗದ್ದುಗೆ ನಿರ್ಮಾಣ ಮಾಡಿ ನಾಲ್ಕೂ ದಿಕ್ಕಿಗೆ ರಾಜಕಾರಣಿಗಳ ಆಕೃತಿ, ಸೈನಿಕರ ಆಕೃತಿ, ರೈತರ ಆಕೃತಿ ಸೇರಿದಂತೆ ಮಳೆಯ ಹೆಸರಿನಲ್ಲಿ ಧಾನ್ಯ ಹಾಗೂ ಅನ್ನದ ಉಂಡೆಗಳನ್ನು ಇಟ್ಟು ಬರುತ್ತಾರೆ. ಮಾರನೇ ದಿನ ಬೆಳಿಗ್ಗೆ ಬಂದು ಫಲವನ್ನು ನೋಡುತ್ತಾರೆ ಯಾವ್ಯಾವ ಮೂರ್ತಿಗಳಿಗೆ ಪೆಟ್ಟಾಗಿದೆ. ಅನ್ನದ ಉಂಡೆ ಹೇಗಿದೆ? ಮಳೆ, ಬೆಳೆ ಹೇಗಿದೆ ಎಂಬುದನ್ನು ನೋಡಿ ಅದರ ಮೇಲೆ ಭವಿಷ್ಯ ನಿರ್ಧಾರ ಮಾಡುತ್ತಾರೆ.

ಈ ಹಿಂದೆ ಇಂದಿರಾ ಗಾಂಧಿ ಹತ್ಯೆಯಾದಾಗ ರಾಷ್ಟ್ರಮಟ್ಟದ ನಾಯಕರ ಬೊಂಬೆಗೆ ಪೆಟ್ಟಾಗಿತ್ತು. ಯಡಿಯೂರಪ್ಪ ಖುರ್ಚಿ ಬಿಟ್ಟು ಕೆಳಗಿಳಿಯುವಾಗ ಕರ್ನಾಟಕದ ದಿಕ್ಕಿನ ಬೊಂಬೆಗೆ ಪೆಟ್ಟಾಗಿತ್ತು. ಮಳೆ, ಬೆಳೆ ಸಹ ಈ ಬೊಂಬೆ ನುಡಿದ ಭವಿಷ್ಯದಂತೆಯೇ ಆಗಿತ್ತು; ಈ ವರ್ಷದ ಯುಗಾದಿ ಫಲದಲ್ಲಿ ಕರ್ನಾಟಕದ ದಿಕ್ಕಿನ ಬೊಂಬೆಗೆ ಪೆಟ್ಟಾಗಿದ್ದು, ಸಿಎಂ ಸಿದ್ದರಾಮಯ್ಯ ಖುರ್ಚಿ ಬಿಟ್ಟು ಕೆಳಗಿಳಿಯುವ ಪರಿಸ್ಥಿತಿ ಬರುತ್ತದೆ ಎಂದು ಬೊಂಬೆ ಭವಿಷ್ಯ ನುಡಿದಿತ್ತು.

 

ಆ ಪ್ರಕಾರ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಮೂಲಕ ಇದೀಗ ಭವಿಷ್ಯ ನಿಜವಾದಂತಾಗಿದೆ. ಪ್ರತಿ ವರ್ಷ ಹನುಮನಕೊಪ್ಪದ ಗ್ರಾಮಸ್ಥರು ಈ ಫಲ ಹಾಕುವ ಪದ್ಧತಿ ನಡೆಸಿಕೊಂಡು ಬಂದಿದ್ದು, ಈ ಬೊಂಬೆ ಭವಿಷ್ಯ ಭಾಗಶಃ ನಿಜವಾಗುತ್ತಲೇ ಬಂದಿದೆ. ಇದಕ್ಕೆ ಮತ್ತೊಂದು ತಾಜಾ ಉದಾಹರಣೆ ಎಂದರೆ ಇದೀಗ ಸಿದ್ದರಾಮಯ್ಯ ರಾಜೀನಾಮೆ. ಈ ಹಿಂದೆ ಇಲ್ಲಿನ ಬೊಂಬೆಗಳ ಭವಿಷ್ಯ ಸಾಕಷ್ಟು ಬಾರಿ ನಿಜವಾಗಿದ್ದು, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹಾಗೂ ರಾಜೀವ ಗಾಂಧಿ ಅವರ ಹತ್ಯೆ, ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ರಾಜಶೇಖರ ರೆಡ್ಡಿ ಅವರ ದುರಂತ ಸಾವು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬದಲಾವಣೆ ಹಾಗೂ ಚಿತ್ರನಟ ಪುನೀತ್ ರಾಜಕುಮಾರ ಅವರ ಅಕಾಲಿಕ ಸಾವು ಹಾಗೂ ರಾಜ್ಯ ರಾಜಕಾರಣದಲ್ಲಿ ಅನೇಕ ಬದಲಾವಣೆ ಅನೇಕ ಸಂಗತಿಗಳು ಈ ಮಣ್ಣಿನ ಬೊಂಬೆಗಳ ಮುನ್ಸೂಚನೆಯ ಭವಿಷ್ಯ ನಿಜವಾಗಿವೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕದ ಮುಜರಾಯಿ ದೇವಾಲಯಗಳ ಹುಂಡಿ ಹಣದ ಸುರಕ್ಷತೆಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟಕಾರಿನಡಿ ಸಿಲುಕಿ ಮಗು ಸಾವುಮೆರ್ಸಿಡಿಸ್ ಕಾರಿನಡಿಗೆ ಸಂಪೂರ್ಣವಾಗಿ ಸಿಲುಕಿದ ಕೆಲ ಕ್ಷಣಗಳಲ್ಲೇ ಎದ್ದು ನಡೆದು ಅಚ್ಚರಿ ಮೂಡಿಸಿದ ವ್ಯಕ್ತಿ…!ಚಲಿಸುತ್ತಿದ್ದ ರೈಲಿನಿಂದ ಬಿದ್ದ ಪ್ರಯಾಣಿಕನ ಪ್ರಾಣ ಉಳಿಸಿದ ಸಿಬ್ಬಂದಿಥಾರ್‌ಗೆ ಹಗ್ಗಕಟ್ಟಿ ಎಟಿಎಂ ಎಳೆದೊಯ್ದು ಹಣ ದೋಚಿ ರಸ್ತೆಯಲ್ಲೇ ಯಂತ್ರ ಎಸೆದು ಕಳ್ಳರು ಪರಾರಿʼಟಾಯ್ಲೆಟ್‌ಗೆ ಹೋಗ್ಬೇಕು’ ಎಂದು ಮನೆಗೆ ನುಗ್ಗಿದ ಡೆಲಿವರಿ ಬಾಯ್ ; ಮಹಿಳೆ ಎದುರು ಅಶ್ಲೀಲ ವರ್ತನೆ ಆರೋಪತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್ಬೆಂಗಳೂರು ದಕ್ಷಿಣದಲ್ಲೇ ಎರಡನೇ ವಿಮಾನ ನಿಲ್ದಾಣ: ಸಿಎಂ ಡಿ ಕೆ ಶಿವಕುಮಾರ್ಬೆಳಗಾವಿ ಜಿಲ್ಲೆಗೆ ಮೂರು ಸಚಿವ ಸ್ಥಾನ : ಈ ಬಾರಿ ಬಿಗಿಪಟ್ಟು ಬೆಳಗಾವಿ ಜಿಲ್ಲೆಗೆ ಮೂರು ಸಚಿವ ಸ್ಥಾನ : ಈ ಬಾರಿ ಬಿಗಿಪಟ್ಟು