Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಬೆಳಗಾವಿಯಲ್ಲಿ ನೋಂದಣಿಯಿಲ್ಲದ ವಾಹನಗಳ ಕಾರ್ಯಾಚರಣೆ ಮಾಡಿದ ಪೊಲೀಸರು : ವಶಪಡಿಸಿಕೊಂಡ ವಾಹನಗಳ ಸಂಖ್ಯೆ ಎಷ್ಟು ಗೊತ್ತೇ ?

ಬೆಳಗಾವಿ : ಇತ್ತೀಚಿನ ದಿನಗಳಲ್ಲಿ ನೊಂದಣಿ ಸಂಖ್ಯೆ ಹೊಂದಿಲ್ಲದ ದ್ವಿಚಕ್ರ ವಾಹನಗಳನ್ನು ಅಪರಾಧಿಕ ಕೃತ್ಯಗಳಲ್ಲಿ ಬಳಸುತ್ತಿರುವುದನ್ನು ಗಮನಿಸಿ ಬೆಳಗಾವಿ ನಗರದಲ್ಲಿ ನೊಂದಣಿ ಸಂಖ್ಯೆಗಳಿಲ್ಲದ ದ್ವಿಚಕ್ರ ವಾಹನಗಳ ವಿರುದ್ಧ ಈ ದಿವಸ ದಿನಾಂಕ: 18/06/2024 ರಂದು ವಿಶೇಷ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿರುತ್ತದೆ.

ಈ ಕಾರ್ಯಾಚರಣೆಯಲ್ಲಿ ನಗರದಾದ್ಯಂತ ನೊಂದಣಿ ಸಂಖ್ಯೆಗಳಿಲ್ಲದ/ ನೊಂದಣಿ ಸಂಖ್ಯೆ ಮರೆಮಾಚಿದ/ ಮುಂದೆ ಅಥವಾ ಹಿಂದೆ ಯಾವುದಾದರು ಒಂದು ನೊಂದಣಿ ಸಂಖ್ಯೆ ಇಲ್ಲದ ಒಟ್ಟು 344 ದ್ವಿಚಕ್ರ ವಾಹನಗಳನ್ನು ತಡೆಹಿಡಿಯಲಾಗಿರುತ್ತದೆ. ತಡೆಹಿಡಿಯಲಾದ ವಾಹನಗಳಲ್ಲಿ 266 ಸಂಖ್ಯೆಯ ವಾಹನಗಳ ದಾಖಲಾತಿಗಳನ್ನು ಪರಿಶೀಲಿಸಿ ದಂಡ ವಿಧಿಸಿ ನೊಂದಣಿ ಸಂಖ್ಯೆಗಳನ್ನು ಅಳವಡಿಸಿದ ನಂತರ ಬಿಡುಗಡೆಗೊಳಿಸಲಾಗಿರುತ್ತದೆ.

ಸಂಶಯಾಸ್ಪದ ಹಿನ್ನಲೆಯಲ್ಲಿ ಇನ್ನುಳಿದ 78 ಸಂಖ್ಯೆಯ ವಾಹನಗಳನ್ನು ತಡೆಹಿಡಿಯಲಾಗಿದ್ದು, ಅವುಗಳ ಬಗ್ಗೆ ಕಾನೂನು ಪ್ರಕ್ರಿಯೆ ಮುಂದುವರಿಸಿದ್ದು ಈ ರೀತಿ ಪರಿಶೀಲಿಸಿದ ವಾಹನಗಳ ಮೇಲೆ ಸಂಚಾರ ನಿರ್ವಹಣೆ ಕೇಂದ್ರದಲ್ಲಿ ಬಾಕಿ ಇರುವ 160 ಪ್ರಕರಣಗಳನ್ನೂ ಸಹ ಇತ್ಯರ್ಥಗೊಳಿಸಲಾಗಿರುತ್ತದೆ.

ಬೆಳಗಾವಿ ನಗರ ಪ್ರದೇಶದಲ್ಲಿ ಇತ್ತೀಚಿಗೆ ವಾಹನಗಳಿಗೆ ದೋಷಪೂರಿತ ಸೈಲನ್ಸ್‌ರ (Defective Silencer) ಗಳನ್ನು ಅಳವಡಿಸುವುದು, ನಿಷ್ಕಾಳಜಿತನದಿಂದ ವಾಹನ ಚಾಲನೆ (Rash and Negligence Driving) ಮಾಡುವುದು. ಹೆಲೈಟ್ ಧರಿಸದೇ ದ್ವೀಚಕ್ರ ವಾಹನ ಸವಾರಿ ( Riding Without Helmet) ಹಾಗೂ ಟ್ರಿಪಲ್ ರೈಡಿಂಗ್ (Triple Riding) ಮಾಡುವುದು ಕಂಡು ಬರುತ್ತಿದ್ದು, ಈ ಬಗ್ಗೆ ತಪ್ಪಿತಸ್ಥರ ವಿರುದ್ಧ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಕಾನೂನು ರೀತ್ಯ ಕ್ರಮ ಕೈಕೊಳ್ಳಲಾಗುವುದು. ಕಾರಣ ಎಲ್ಲ ವಾಹನ ಮಾಲೀಕರು ಎಚ್ಚರವಹಿಸಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಿಕೊಂಡು ಬರುವಂತೆ ಕೋರಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರು