Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

PUC ಫಲಿತಾಂಶದಲ್ಲಿ ಬೆಳಗಾವಿಗೆ ಎಷ್ಟನೇ ಸ್ಥಾನ ಗೊತ್ತಾ !

 

ಬೆಂಗಳೂರು:
2022-23ನೇ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು ಈ ಸಲ ಬೆಳಗಾವಿ ಜಿಲ್ಲೆ 25 ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಇದು ಜಿಲ್ಲೆಯ ಶೈಕ್ಷಣಿಕ ಹಿನ್ನಡೆಯನ್ನು ಎತ್ತಿ ತೋರಿಸಿದೆ. ರಾಜ್ಯದ ಒಟ್ಟು 32 ಜಿಲ್ಲೆಗಳಲ್ಲಿ ಬೆಳಗಾವಿಯ ಈ ಕಳಪೆ ಸಾಧನೆ ಶಿಕ್ಷಣ ಪ್ರೇಮಿಗಳಿಗೆ ಆತಂಕ ಮಾಡಿಸಿದೆ.

ರಾಜ್ಯದಲ್ಲಿ ಈ ಬಾರಿ ಒಟ್ಟು
7,02,067 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಅವರಲ್ಲಿ 524209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ‌. ಶೇ 80.72 ವಿದ್ಯಾರ್ಥಿನಿಯರು ಹಾಗೂ ಬಾಲಕರು ಶೇ 69.05 ಸಾಧಿಸಿದ್ದಾರೆ.

ರಾಜ್ಯದಲ್ಲಿ ಒಟ್ಟಾರೆ ಈ ಬಾರಿ ಇದೇ ಮೊದಲ ಬಾರಿ ಶೇ 74.67 ಫಲಿತಾಂಶ ಲಭ್ಯವಾಗಿದೆ.

ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ

https://karresults.nic.in

ಶೇ. 74.64 ಮಂದಿ ಉತ್ತೀರ್ಣ :
ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಇಂದು(ಏಪ್ರಿಲ್ 21) ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಫಲಿತಾಂಶ ಬಿಡುಗಡೆ ಮಾಡಿದ್ದು, ಶೇ. 74.64ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದಕ್ಷಿಣ ಕನ್ನಡ ಪ್ರಥಮ ಸ್ಥಾನ ಪಡೆದುಕೊಂಡಿದೆ. ಹಾಗೂ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ.
ಕಲಾ ವಿಭಾಗದಲ್ಲಿ ಜಯನಗರ NMKRV ಕಾಲೇಜು ವಿದ್ಯಾರ್ಥಿನಿ ಥಬಸುಮ್ ಶೇಖ್ 600ಕ್ಕೆ 593 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನದಲ್ಲಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಅನನ್ಯಾ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಟಾಪರ್ ಆಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಇಬ್ಬರು ಹಂಚಿಕೊಂಡಿದ್ದಾರೆ. ಕೋಲಾರದ ಶ್ರೀನಿವಾಸಪುರದ ಗಂಗೋತ್ರಿ ಪಿಯು ಕಾಲೇಜಿನ ವಿದ್ಯಾರ್ಥಿ ಎಸ್.ಎಂ.ಕೌಶಿಕ್ ಹಾಗೂ ಬೆಂಗಳೂರಿನ ಜಯನಗರದ ಆರ್​. ವಿ. ಪಿಯು ಕಾಲೇಜಿನ ವಿದ್ಯಾರ್ಥಿನಿ ಸುರಭಿ ಎಸ್​ ಇಬ್ಬರೂ 596 ಅಂಕಗಳನ್ನು ಗಳಿಸಿ ಮೊದಲ ಸ್ಥಾನದಲ್ಲಿದ್ದಾರೆ.
ಪರೀಕ್ಷೆಗೆ ಕುಳಿತ ಒಟ್ಟು 7,26,195 ವಿದ್ಯಾರ್ಥಿಗಳ ಪೈಕಿ 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ1,34,876 ಶ್ರ( ಶೇಕಡಾ 61.22ರಷ್ಟು) ವಿದ್ಯಾರ್ಥಿ ಪಾಸ್ ಆಗಿದ್ದರೆ, ವಾಣಿಜ್ಯ ವಿಭಾಗದಲ್ಲಿ 1,82,246 (ಶೇಕಡಾ 75.89ರಷ್ಟು) ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 2,07,087 (ಶೇಕಡಾ 85.71ರಷ್ಟು) ಉತ್ತೀರ್ಣರಾಗಿದ್ದಾರೆ.
ಉತ್ತಮ ಸಾಧನೆ ಮಾಡಿದ ಜಿಲ್ಲೆಗಳು..
ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಉಡುಪಿ ಜಿಲ್ಲೆ 2ನೇ ಸ್ಥಾನ, ಕೊಡಗು ಜಿಲ್ಲೆಗೆ 3ನೇ ಸ್ಥಾನ ಹಾಗೂ ಉತ್ತರ ಕನ್ನಡ ಜಿಲ್ಲೆಗೆ 4ನೇ ಸ್ಥಾನ ಪಡೆದಿದೆ. ಯಾದಗಿರಿ ಜಿಲ್ಲೆ ಕೊನೆ ಸ್ಥಾನದಲ್ಲಿದೆ.
ಆನ್‌ಲೈನ್‌ನಲ್ಲಿ ಪರಿಶೀಲಿಸುವುದು ಹೇಗೆ?
ಕೆಲವೇ ಕ್ಷಣಗಳಲ್ಲಿ karresults.nic.in/ ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿದ್ದು, ಆನ್​ಲೈನ್​ ಮೂಲಕ ಚೆಕ್​ ಮಾಡುವುದು ಹೇಗೆ ಎನ್ನುವುದು ಈ ಕೆಳಗಿನಂತಿದೆ ನೋಡಿ.
ಕರ್ನಾಟಕ ಮಂಡಳಿಯ ಅಧಿಕೃತ ವೆಬ್‌ಸೈಟ್‌ಗೆ (karresults.nic.in/) ಭೇಟಿ ನೀಡಿ
ಫಲಿತಾಂಶದ ಲಿಂಕ್ ಅನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ
ದ್ವಿತೀಯ ಪಿಯುಸಿ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ
ಫಲಿತಾಂಶದ ಲಿಂಕ್‌ನಲ್ಲಿ ದ್ವಿತೀಯ ಪಿಯುಸಿ ರೋಲ್ ಸಂಖ್ಯೆ ನಮೂದಿಸಿ ಸಬ್ಮಿಟ್‌ ಮಾಡಿ
ನಿಮ್ಮ ಫಲಿತಾಂಶವು ಪರದೆಯ ಮೇಲೆ ಸ್ಕ್ರೀನ್‌ ಮೇಲೆ ಕಾಣಿಸಿಕೊಳ್ಳುತ್ತದೆ
ಸ್ಕ್ರೀನ್‌ ಮೇಲೆ ಕಾಣಿಸಿದ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ