Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದೀಪಾವಳಿ ಈ ಬಾರಿ ಐತಿಹಾಸಿಕ : ಕಾರಣ ಏನು ಗೊತ್ತೇ ?

ದೆಹಲಿ : ಈ ಸಲದ ದೀಪಾವಳಿ ಐತಿಹಾಸಿಕವಾಗಿರಲಿದೆ. 500 ವರ್ಷಗಳ ಕಾಯುವಿಕೆ ನಂತರ ಬಾಲ ರಾಮನ ಜನ್ಮಸ್ಥಳ ಅಯೋಧ್ಯೆಯಲ್ಲಿ ಹಬ್ಬದ ದಿನ ಅಸಂಖ್ಯ ದೀಪಗಳು ಬೆಳಗಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ರಾಮ ಮನೆಗೆ ಮರಳಿದ ದಿನವೇ ದೀಪಾವಳಿ. ಆದರೆ ರಾಮನ ಬರುವಿಕೆಯ ನಿರೀಕ್ಷೆ ಈ ಬಾರಿ 14 ವರ್ಷಗಳಲ್ಲಿ ಈಡೇರಲಿಲ್ಲ. ಬದಲಿಗೆ 500 ವರ್ಷ ಬೇಕಾಯಿತು ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸುಮಾರು 12850 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ಈ ಸಲದ ದೀಪಾವಳಿ ಸದಾ ನೆನಪಿನಲ್ಲಿ ಇಡುವಂತೆ ಇರಲಿದೆ ಎಂದು ಹೇಳಿದ್ದಾರೆ.

ಅಯೋಧ್ಯೆಯಲ್ಲಿ ಈ ಸಲದ ದೀಪೋತ್ಸವ ಅದ್ವಿತೀಯ ಹಾಗೂ ಅದ್ಬುತವಾಗಿರುತ್ತದೆ ಎಂದು ಮಂದಿರದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ರಾವ್ ತಿಳಿಸಿದ್ದಾರೆ. ರಾಮಾಯಣ ನಡೆದ ಕಾಲಘಟ್ಟವಾದ ತೇತ್ರಾಯುಗದ ಮಾದರಿಯಲ್ಲಿ ಇಲ್ಲಿನ ಪರಿಸರ ಭಾಸವಾಗುವಂತೆ ಮಾಡಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇತ್ತೀಚಿನ ದಿನಗಳಲ್ಲಿ ಸುಮಾರು ಒಂದು ಲಕ್ಷ ಜನ ದರ್ಶನಕ್ಕೆ ಬರುತ್ತಿದ್ದಾರೆ ಎಂದು ಅಯೋಧ್ಯೆ ಮೇಯರ್ ತಿಳಿಸಿದ್ದಾರೆ. ಈ ವರ್ಷದ ದೀಪೋತ್ಸವ ಸುಂದರವಾಗಿ ಕಾಣಲು ನಾವು ಕಾತರರಾಗಿದ್ದೇವೆ. ಸುಂದರವಾದ ರೀತಿಯಲ್ಲಿ ಪರಿಸರ ಅಲಂಕೃತಗೊಂಡಿದೆ. ಸ್ಥಳೀಯರಲ್ಲಿ ಉತ್ಸಾಹ ಕಾಣುತ್ತಿದೆ. ಈ ಸ್ಥಳದ ನಿವಾಸಿಯಾಗಿದ್ದಕ್ಕೆ ನಾನು ಹೆಮ್ಮೆಪಡುತ್ತೇನೆ ಎಂದು ಸ್ಥಳೀಯ ನಿವಾಸಿ ಪ್ರಜ್ವಲ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಮುನ್ನ ಬಾಲರಾಮ ಕೇವಲ ಟೆಂಟ್ ನಲ್ಲಿ ಇರುವುದನ್ನು ಕಂಡು ಬೇಸರವಾಗುತ್ತಿತ್ತು. ಆದರೆ, ಈಗ ಹೊಸ ಮಂದಿರದಿಂದಲೇ ರಾಮ ಪಾಲ್ಗೊಳ್ಳುತ್ತಿರುವುದು ಎಲ್ಲರಲ್ಲೂ ಸಂತಸ ತಂದಿದೆ ಎಂದು ಅಯೋಧ್ಯೆಯ ಹನುಮನ್ ಗಿರಿ ದೇವಸ್ಥಾನದ ಅರ್ಚಕ ಮಹಾಂತ ರಾಜುದಾಸ್ ಹೇಳಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ