Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜೆಡಿಎಸ್ ಗೆ ಆತ್ಮಸಾಕ್ಷಿ ಇದೆಯೇ : ಸಿದ್ದರಾಮಯ್ಯ

 

ಬೆಂಗಳೂರು : ಜೆಡಿಎಸ್ ಗೆ ಗೆಲ್ಲಲು 45 ಮತಗಳ ಅಗತ್ಯವಿದೆ ಅಷ್ಟು ಮತಗಳು ಅವರಿಗಿದೆಯೇ ? ಅವರಿಗೆ ಆತ್ಮಸಾಕ್ಷಿ ಇದೆಯೇ ಎಂದು ಪ್ರಶ್ನಿಸಿ ಅವರ ಮತಗಳೇ ನಮಗೆ ಬರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯ ಸಭಾ ಚುನಾವಣೆಯ ಬಗ್ಗೆ ಮಾತನಾಡಿ ಎಲ್ಲರೂ ಗೆಲ್ಲಬೇಕೆಂದೆ ಸ್ಪರ್ಧಿಸುತ್ತಾರೆ ಎಂದರು.

*ಶಾಸಕರಿಗೆ ಆಮಿಷ*
ಅಡ್ಡಮತ ವಿಚಾರವಾಗಿ ಕಾನೂನು ತಿದ್ದಿ ಎಫ್.ಐ.ಆರ್. ಹಾಕಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಅವರಿಗೆ ಮತವಿಲ್ಲ ದಿದ್ದರೂ ಅಭ್ಯರ್ಥಿಯನ್ನು ನಿಲ್ಲಿಸಿ , ಶಾಸಕರಿಗೆ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಬೆದರಿಕೆ ಹಾಕಿರುವುದಕ್ಕೆ ಎಫ್.ಐ.ಆರ್ ಹಾಕಲಾಗಿದೆ ಎಂದರು. ನಮ್ಮ ಮೂವರು ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಅವರು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

 

ಆಡಳಿತ ಹಾಗೂ ರಾಜ್ಯದ ಬಗ್ಗೆ ಕೆ.ಸಿ ರೆಡ್ಡಿ ಅವರಿಗಿದ್ದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ :
ಆಡಳಿತ ಹಾಗೂ ರಾಜ್ಯದ ಬಗ್ಗೆ ಕೆ.ಸಿ ರೆಡ್ಡಿ ಅವರಿಗಿದ್ದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೆ.ಸಿ.ರೆಡ್ಡಿಯವರ 48 ನೇ ಪುಣ್ಯ ತಿಥಿಯನ್ನು ಇಂದು ಆಚರಿಸಲಾಗಿದೆ. ಮೈಸೂರು ರಾಜ್ಯದ ಮೊದಲ ಮುಖ್ಯಮಂತ್ರಿಗಳು. ರಾಜ್ಯದ ಬೆಳವಣಿಗೆಗೆ ಅಡಿಪಾಯ ಹಾಕಿದವರು ಅವರು. ಸ್ವಾತಂತ್ರ್ಯ ಹೋರಾಟಗಾರರಾಗಿ ತಮ್ಮನ್ನು ಹೋರಾಟದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು. ಕರ್ನಾಟಕ ಇಂದು ಆರ್ಥಿಕವಾಗಿ ಸಧೃಢವಾಗಿದ್ದರೆ ಅವರು ಹಾಕಿದ ಬುನಾದಿಯೇ ಕಾರಣ. 1950 ನೇ ಇಸವಿಯಲ್ಲಿ ಸಂವಿಧಾನ ಜಾರಿಗೆ ಬಂದ ನಂತರ ಮೊದಲ ಚುನಾವಣೆಯಲ್ಲಿ ಕೆ.ಸಿ.ರೆಡ್ಡಿಯವರೇ ಮೊದಲ ಮುಖ್ಯ ಮಂತ್ರಿಯಾದರು. ಅವರನ್ನು ಸ್ಮರಿಸಿ ಗೌರವಿಸುವ ಕೆಲಸವನ್ನು ಸರ್ಕಾರ ಮಾಡಿದೆ ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ