Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣವಚನ

 

 

ವಾಷಿಂಗ್ಟನ್‌ ಡಿಸಿ: ಅಮೇರಿಕಾದ 47ನೇ ಅಧ್ಯಕ್ಷರಾಗಿ ಡೊನಾಲ್ಡ್‌ ಟ್ರಂಪ್‌ (Donald Trump) ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ವಾಷಿಂಗ್ಟನ್ ಡಿಸಿಯ ಕ್ಯಾಪಿಟಲ್ ಹಿಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಮೆರಿಕ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾದ ಜಾನ್ ರಾಬರ್ಟ್ಸ್ ಅವರು ಪ್ರಮಾಣ ವಚನ ಬೋಧಿಸಿದರು.
ಟ್ರಂಪ್ ಗೂ ಮೊದಲು ಉಪಾಧ್ಯಕ್ಷರಾಗಿ ಜೆಡಿ ವ್ಯಾನ್ಸ್ ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ನಿರ್ಗಮಿತ ಅಧ್ಯಕ್ಷ ಜೋ ಬೈಡನ್, ಮಾಜಿ ಅಧ್ಯಕ್ಷ ಬರಾಕ್ ಒಬಾಮಾ,

ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ, ಟ್ರಂಪ್ ಅವರ ಕುಟುಂಬ ಮತ್ತು ಕ್ಯಾಬಿನೆಟ್ ಸದಸ್ಯರ ಜೊತೆಗೆ, ಎಲೋನ್ ಮಸ್ಕ್, ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್, ಅಮೆಜಾನ್ ಮುಖ್ಯಸ್ಥ ಜೆಫ್ ಬೆಜೋಸ್ ಮತ್ತು ಗೂಗಲ್ ಸಿಇಒ ಸುಂದರ್ ಪಿಚೈ, ಭಾರತದ ಉದ್ಯಮಿ ಮುಖೇಶ ಅಂಬಾನಿ ಸೇರಿದಂತೆ ಟೆಕ್ ಉದ್ಯಮಿಗಳು, ಗಣ್ಯರು ಕ್ಯಾಪಿಟಲ್‌ನಲ್ಲಿ ಉಪಸ್ಥಿತರಿದ್ದರು.
ಭಾರತ ಸರ್ಕಾರದ ಪರವಾಗಿ ವಿದೇಶಾಂಗ ಸಚಿವ ಎಸ್. ಜೈಶಂಕರ ಡೊನಾಲ್ಡ್ ಟ್ರಂಪ್ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಅವರು ಟ್ರಂಪ್​ಗೆ ಮೋದಿ ಬರೆದು ಕಳುಹಿಸಿದ ಶುಭಾಶಯ ಪತ್ರವನ್ನು ನೀಡಿದ್ದಾರೆ.

 

ಇದೇ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೇರೆ ದೇಶಗಳ ನಾಯಕರನ್ನು ಅಮೆರಿಕದ ಅಧ್ಯಕ್ಷರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ. ಇದಕ್ಕೂ ಮುನ್ನ ಅಮೆರಿಕದ ಮಾಜಿ ಅಧ್ಯಕ್ಷ ಜೈ ಬೈಡೆನ್ ಮತ್ತು ಜಿಲ್ ಬಿಡೆನ್ ಶ್ವೇತಭವನದಲ್ಲಿ ಡೊನಾಲ್ಡ್ ಟ್ರಂಪ್ ಮತ್ತು ಅವರ ಪತ್ನಿ ಮೆಲಾನಿಯಾ ಅವರಿಗೆ ಚಹಾ ಪಾರ್ಟಿ ಆಯೋಜಿಸಿದ್ದರು. ಇದಾದ ನಂತರ ನಾಲ್ಕೂ ಜನ ಒಟ್ಟಿಗೇ ಕ್ಯಾಪಿಟಲ್‌ಗೆ ನಡೆದ ಸಮಾರಂಭಕ್ಕೆ ಪ್ರಯಾಣಿಸಿದ್ದರು.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಅವರಿಂದ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ಮಾತನಾಡಿದ ಟ್ರಂಪ್ “ಅಮೆರಿಕದ ಸುವರ್ಣಯುಗ” ಈಗ ಪ್ರಾರಂಭವಾಗುತ್ತದೆ” ಎಂದು ಘೋಷಿಸಿದರು.

ಟ್ರಂಪ್ ಪ್ರಮಾಣವಚನ ಸ್ವೀಕರಿಸಿದ ನಂತರ ಅವರ ಮೊದಲ ಭಾಷಣದಲ್ಲಿ ಜುಲೈನಲ್ಲಿ ಪೆನ್ಸಿಲ್ವೇನಿಯಾದಲ್ಲಿ ನಡೆದ ಹತ್ಯೆಯ ಪ್ರಯತ್ನವನ್ನು ಉಲ್ಲೇಖಿಸಿ “ಅಮೆರಿಕವನ್ನು ಮತ್ತೊಮ್ಮೆ ಶ್ರೇಷ್ಠಗೊಳಿಸಲು ದೇವರು ರಕ್ಷಿಸಿದ್ದಾನೆ” ಎಂದು ಹೇಳಿದರು.
“ಅಮೆರಿಕದ ಸುವರ್ಣಯುಗ’ ಇದೀಗ ಆರಂಭವಾಗಿದೆ. ನಾವು ಮತ್ತೊಮ್ಮೆ ಮಹಾನ್ ರಾಷ್ಟ್ರವಾಗುತ್ತೇವೆ. ಪ್ರಪಂಚದ ಉಳಿದ ಭಾಗಗಳು ನಮ್ಮನ್ನು ನೋಡಿ ಅಸೂಯೆಪಡುತ್ತವೆ” ಎಂದು ಅವರು ಬೆಂಬಲಿಗರ ಹರ್ಷೋದ್ಗಾರಗಳ ಮಧ್ಯೆ ಹೇಳಿದರು.
ಅಕ್ರಮ ವಲಸಿಗರ ಸಾಮೂಹಿಕ ಗಡೀಪಾರು, ಮಹಿಳಾ ಕ್ರೀಡೆಗಳಿಂದ ಟ್ರಾನ್ಸ್ಜೆಂಡರ್ ಕ್ರೀಡಾಪಟುಗಳನ್ನು ನಿಷೇಧಿಸುವುದು ಮತ್ತು ವೈವಿಧ್ಯತೆ ಮತ್ತು ತೈಲ ಕೊರೆಯುವಿಕೆಯ ಬಗ್ಗೆ ಅವರ ಹಿಂದಿನ ಅಧ್ಯಕ್ಷರ ನಿರ್ದೇಶನಗಳನ್ನು ರದ್ದುಗೊಳಿಸುವುದು ಸೇರಿದಂತೆ ಕಾರ್ಯನಿರ್ವಾಹಕ ಆದೇಶಗಳಿಗೆ ಸಹಿ ಹಾಕುವುದಾಗಿ ಟ್ರಂಪ್ ಪ್ರತಿಜ್ಞೆ ಮಾಡಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ