Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಇರಾನ್ ಸಂಹಾರ ಮಾಡುವೆ: ಡೊನಾಲ್ಡ್ ಟ್ರಂಪ್ ಗುಡುಗು

ದುಬೈ/ವಾಷಿಂಗ್ಟನ್: ಒಪ್ಪಂದ ಮಾಡಿಕೊಳ್ಳಲು ಇರಾನ್‌ಗೆ ನೀಡಿದ್ದ ಗಡುವು ಸಮೀಪಿಸುತ್ತಿದ್ದಂತೆಯೇ 'ಇರಾನ್ ನಾಗರಿಕತೆಯನ್ನೇ ವಿನಾಶ ಮಾಡುತ್ತೇವೆ' ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುಡುಗಿದ್ದಾರೆ.

ತೈಲ ಘಟಕಗಳಿರುವ ಇರಾನ್‌ ಖಾರ್ಗ್ ದ್ವೀಪದ ಮೇಲೆ ಅಮೆರಿಕ-ಇಸ್ರೇಲ್ ಪಡೆಗಳು ದಾಳಿ ನಡೆಸಿವೆ.

ಟೆಹರಾನ್ ಹೊರವಲಯದ ವಸತಿಪ್ರದೇಶಗಳನ್ನು ಗುರಿಯಾಗಿಸಿ ಅಮೆರಿಕ-ಇಸ್ರೇಲ್ ಪಡೆಗಳು ನಡೆಸಿದ ದಾಳಿಗಳಲ್ಲಿ 18 ಮಂದಿ ಮೃತಪಟ್ಟಿರುವುದಾಗಿ ಇರಾನ್ ಮಾಧ್ಯಮಗಳು ಮಂಗಳವಾರ ವರದಿ ಮಾಡಿವೆ. ಇರಾನ್‌ನ ರೆವಲ್ಯೂಷನರಿ ಗಾರ್ಡ್ ಕೋ‌ರ್(ಐಆರ್‌ಜಿಸಿ) ಬಳಸುತ್ತಿದ್ದ ರೈಲು ಮಾರ್ಗ ಹಾಗೂ ಸೇತುವೆಗಳ ಮೇಲೂ ಬಾಂಬ್ ಸ್ಫೋಟಿಸಲಾಗಿದೆ.

ಈ ನಡುವೆ, ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಉದ್ದೇಶದಿಂದ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಕೈಗೊಂಡಿದ್ದ ನಿರ್ಣಯಕ್ಕೆ ಸೋಲಾಗಿದೆ. ಮಂಡಳಿಯ ಸದಸ್ಯ ರಾಷ್ಟ್ರಗಳಾದ ರಷ್ಯಾ ಹಾಗೂ ಚೀನಾ ತಮ್ಮ ವಿಟೊ ಅಧಿಕಾರ ಬಳಸಿ, ಈ ನಿರ್ಣಯ ಅಂಗೀಕಾರವಾಗದಂತೆ ನೋಡಿಕೊಂಡವು.

ಒಪ್ಪಂದಕ್ಕೆ ಇರಾನ್ ಸಹಿ ಹಾಕಿ ಹೊರ್ಮುಜ್ ಜಲಸಂಧಿಯನ್ನು ಹಡಗುಗಳ ಸಂಚಾರಕ್ಕೆ ಮುಕ್ತಗೊಳಿಸಬೇಕು. ಇಲ್ಲದೇ ಹೋದಲ್ಲಿ ಮತ್ತೆ ಸುಧಾರಿಸಿಕೊಳ್ಳಲು ಸಾಧ್ಯವಾಗದ ರೀತಿಯಲ್ಲಿ ಇರಾನ್ ಅನ್ನು ನಾಶ ಮಾಡಲಾಗುವುದು. ಈ ರೀತಿ ಸಂಭವಿಸುವುದನ್ನು ನಾನು ಬಯಸುವುದಿಲ್ಲ. ಆದರೆ, ಬಹುಶಃ ಇದು ಘಟಿಸಲಿದೆ' ಎಂದು ಅವರು ತಮ್ಮ ಒಡೆತನದ ಸಾಮಾಜಿಕ ಮಾಧ್ಯಮ 'ಟೂಥ್ ಸೋಷಿಯಲ್‌'ನಲ್ಲಿ ಬರೆದುಕೊಂಡಿದ್ದಾರೆ.

'ಅಮೆರಿಕ ಹಾಗೂ ಇಸ್ರೇಲ್ ಪಡೆಗಳು ಖಾರ್ಗ್ ದ್ವೀಪದ ಮೇಲೆ ನಡೆಸಿದ ದಾಳಿಯಲ್ಲಿ, ಅಲ್ಲಿನ ಮೂಲಸೌಕರ್ಯಗಳಿಗೆ ಯಾವುದೇ ಹಾನಿಯಾಗಿಲ್ಲ' ಎಂದು ಇರಾನ್ ಹೇಳಿಕೊಂಡಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ