Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

KLE ನೂತನ ಕಾರ್ಯದರ್ಶಿಯಾಗಿ ಡಾ. ಸುನೀಲ ಜಲಾಲಪುರೆ ಸರ್ವಾನುಮತದಿಂದ ಆಯ್ಕೆ: ಬೋಧನೆ, ಸಂಶೋಧನೆ, ಶೈಕ್ಷಣಿಕ ಆಡಳಿತ ಕ್ಷೇತ್ರಗಳಲ್ಲಿ 28 ವರ್ಷಗಳ ಅನುಭವಿ

ಬೆಳಗಾವಿ : ಕೆ.ಎಲ್.ಇ. ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (ಕಾಹೇರ್)ನ ಕೆ.ಎಲ್.ಇ. ಕಾಲೇಜ್ ಆಫ್ ಫಾರ್ಮಸಿಯ ಪ್ರಾಂಶುಪಾಲ ಹಾಗೂ ಸಂಸ್ಥೆಯ ಜಂಟಿ ಕಾರ್ಯದರ್ಶಿ ಪ್ರೊ. (ಡಾ.) ಸುನೀಲ ಎಸ್. ಜಲಾಲಪುರೆ ಅವರು ಕೆ.ಎಲ್.ಇ. ಸಂಸ್ಥೆಯ ನೂತನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

1998ರಿಂದ ಕೆ.ಎಲ್.ಇ. ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅವರು 2013ರಿಂದ ಆಜೀವ ಸದಸ್ಯರಾಗಿದ್ದಾರೆ. ಬೋಧನೆ, ಸಂಶೋಧನೆ ಹಾಗೂ ಶೈಕ್ಷಣಿಕ ಆಡಳಿತ ಕ್ಷೇತ್ರಗಳಲ್ಲಿ 28 ವರ್ಷಗಳ ಅನುಭವ ಹೊಂದಿರುವ ಡಾ. ಜಲಾಲಪುರೆ ಅವರು 2025ರ Global Scientist Indexನಲ್ಲಿ ವಿಶ್ವದ ಅಗ್ರ 5% ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

UGC, AICTE, DST, ICMR ಹಾಗೂ DBT ಸೇರಿದಂತೆ ವಿವಿಧ ಸಂಸ್ಥೆಗಳಿಂದ ₹4 ಕೋಟಿಗೂ ಅಧಿಕ ಸಂಶೋಧನಾ ಅನುದಾನ ಪಡೆದಿರುವ ಅವರು 195ಕ್ಕೂ ಹೆಚ್ಚು ಸಂಶೋಧನಾ ಲೇಖನಗಳು, 8 ಪೇಟೆಂಟ್‌ಗಳು, 9 ಪಠ್ಯಪುಸ್ತಕಗಳು ಹಾಗೂ 4 ಸಂಶೋಧನಾ ಗ್ರಂಥಗಳನ್ನು ಪ್ರಕಟಿಸಿದ್ದಾರೆ. 60 ಸ್ನಾತಕೋತ್ತರ ಹಾಗೂ 30 ಪಿ.ಎಚ್.ಡಿ. ಸಂಶೋಧಕರಿಗೆ ಮಾರ್ಗದರ್ಶನ ನೀಡಿರುವ ಅವರು AICTE ವಿಶ್ವೇಶ್ವರಯ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸೇರಿದಂತೆ 20ಕ್ಕೂ ಹೆಚ್ಚು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಅಧ್ಯಕ್ಷ ಮಹಾಂತೇಶ ಕೌಜಲಗಿ, ಉಪಾಧ್ಯಕ್ಷ ಬಸವರಾಜ ತಟವಟಿ, ಕಾರ್ಯಾಧ್ಯಕ್ಷ ಅಮಿತ್ ಕೋರೆ, ಕೆ.ಎಲ್.ಇ. ಆಡಳಿತ ಮಂಡಳಿಯ ಸರ್ವ ಸದಸ್ಯರು, ಕೆ.ಎಲ್.ಇ. ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಪ್ರಭಾಕರ ಕೋರೆ ಹಾಗೂ ಕುಲಪತಿ ಡಾ. ಸಂದೀಪ್ ಶ್ರೀವಾಸ್ತವ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ENGLISH VERSION:


Prof. (Dr.) Sunil S. Jalalpure has been appointed as Secretary

The Management of the KLE Society is pleased to announce the appointment of Prof. (Dr.) Sunil S. Jalalpure as the organization's new Secretary. Dr. Jalalpure, who previously served as the Joint Secretary, brings nearly three decades of administrative and academic expertise to his new leadership role at the society's head office.

Dr. Jalalpure has been dedicated to the KLE Society since 1998 and became a Life Member in 2013. With 28 years of experience in teaching, research, and educational administration, he was recently ranked among the top 5% of scientists worldwide in the Global Scientist Index 2025.


Over his distinguished career, Dr. Jalalpure has secured more than ₹4 crore in research grants from premier bodies like UGC, AICTE, DST, ICMR, and DBT. He has published over 195 research articles, holds 8 patents, authored 13 books, and mentored 90 postgraduate and Ph.D. researchers. He is also the recipient of over 20 national and international awards, including the AICTE Visvesvaraya Best Teacher Award.

President Shri Mahantesh Kojalgi, Vice-President Shri B.S.Tatawari, Chairman Shri Amit Kore, all members of the Board of Management, KLE Society, Chancellor of KLE University Dr. Prabhakar Kore and Vice Chancellor Dr. Sandeep Srivastava have extended their heartfelt congratulations.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಕರೆ: ಪ್ರವೀಣ ಗುಡಿಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಅಪಾರ: ಕುಲಪತಿ ಸಿ. ಎಂ. ತ್ಯಾಗರಾಜ ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮ