Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿಶ್ವಕ್ಕೆ ಮಾದರಿಯಾದ ಭಾರತ ; ಡಾ.ಎಂ.ವಿ. ಜಾಲಿ

 

ಬೆಳಗಾವಿ :
ಬಳ್ಳಾರಿಯ ವಿಜಯ ನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಗೆ ಭಾಜನರಾದ ಕೆಎಲ್‌ಇ ಸಂಸ್ಥೆಯ ಕ್ಯಾನ್ಸರ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಎಂ.ವಿ. ಜಾಲಿ ಅವರಿಗೆ ಇತ್ತೀಚೆಗೆ ನಡೆದ ಕೊನಿಯಾಪ್ಸ್ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರದಾನ ಮಾಡಲಾಯಿತು.

ಪದವಿ ಸ್ವೀಕರಿಸಿ ಮಾತನಾಡಿದ ಡಾ. ಎಂ.ವಿ. ಜಾಲಿ ಅವರು, ಭಾರತದ ಪ್ರಾಚೀನ ಪಾಂಡಿತ್ಯದಿಂದ ಪ್ರೇರಿತರಾಗಿ ಅನೇಕ ವಿದೇಶಿ ವಿಜ್ಞಾನಿಗಳು ಸಂಶೋಧನೆಗೈದು ವಿಶ್ವಕ್ಕೆ ಮಾದರಿಯಾಗಿದ್ದಾರೆ. ಆರೋಗ್ಯ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ತಂತ್ರಜ್ಞಾನಧಾರಿತ ಸೇವೆಗಳಿಂದ ಭವಿಷ್ಯದಲ್ಲಿ ವಿಜ್ಞಾನ ಲೋಕದಲ್ಲಿ ಮತ್ತಷ್ಟು ಅಚ್ಚರಿಗಳನ್ನು ಕಾಣಬಹುದು ಎಂದು ಹೇಳಿದರು.
ಗುಂಟೂರು ವಿಜ್ಞಾನ ಅಕಾಡೆಮಿ ಆಫ್ ಸೈನ್ಸ್, ಟೆಕ್ನಾಲಜಿ ಮತ್ತು ರಿಸರ್ಚ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ. ನಾಗಭೂಷಣ್ ಅವರು ಸಮ್ಮೇಳನ ಉದ್ಘಾಟಿಸಿ ಮಾತಾನಾಡಿ, ದೇಶದ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವದ ಗಮನ ಸೆಳೆಯುತ್ತಿದೆ. ಆದರೆ 'ದೇಶದಲ್ಲಿ ಸುಸ್ಥಿರ ಕಲಿಕೆ ಮತ್ತು ಶಿಕ್ಷಣ ಕುರಿತು ಆಲೋಚಿಸುವುದು ಕುಂಠಿತಗೊಂಡಿದೆ ಎಂದು ಕಳವಳ ವ್ಯಕ್ತಪಡಿಸಿದ ಅವರು, ಶಾಲಾ ಹಂತದಿಂದ ಮೌಲ್ಯಾಧಾರಿತ ಶಿಕ್ಷಣವನ್ನು ಮಕ್ಕಳಿಗೆ ಕೊಟ್ಟರೆ ಮುಂದೆ ಉನ್ನತ ವ್ಯಾಸಂಗ ಮಾಡುವಾಗ ಹೊಸ ಆವಿಷ್ಕಾರಗಳ ಬಗ್ಗೆ ಯೋಚಿಸಲು ಅವರಿಗೆ ಸಾಧ್ಯವಾಗಲಿದೆ ಎಂದರು.
ಐಪಿಎಸ್ ಸಂಸ್ಥೆಯ ಕೊನಿಯಾಪ್ಸ್ ಸಮ್ಮೇಳನದ ರೂವಾರಿಯಾಗಿದ್ದ ಸಂಸ್ಥೆಯ ಸಂಸ್ಥಾಪಕರಾಗಿದ್ದ ದಿ. ಪ್ರೊ. ಪಾಂಡೆ ಅವರನ್ನು ಸ್ಮರಿಸಲಾಯಿತು.

ಐಎಪಿಎಸ್ ಸಂಸ್ಥೆ ಅಧ್ಯಕ್ಷ ಪ್ರೊ. ಎಚ್ ಎಸ್. ಧಾಮಿ ಮತ್ತು ಕಾರ್ಯದರ್ಶಿ ಪ್ರೊ. ಶುಕ್ಲಾ, ಪ್ರಾಸ್ತಾವಿಕವಾಗಿ ಮಾತನಾಡಿದರು. ಆಮರಿಕ ಫ್ಲೋರಿಡಾ ಕೇಂದ್ರ ವಿಶ್ವವಿದ್ಯಾಲಯದ ಪ್ರೊ. ರಾಮ್‌ಮೋಹಪಾತ್ರಾ, ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿಯ ಧಾರವಾಡದ ನಿರ್ದೇಶಕ ಪ್ರೊ. ಎಸ್ ಎಂ ಶಿವಪ್ರಸಾದ, ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಎಸ್ ಸಿ ಪಾಟೀಲ, ಪ್ರೊ. ರಮೇಶ್ ಓಲೇಕಾರ, ಕೆವಿ ಪ್ರಸಾದ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ