Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ತುಮಕೂರು ಸಿದ್ಧಗಂಗಾಮಠದಲ್ಲಿ ಡಾ.ಪ್ರಭಾಕರ ಕೋರೆ ದಂಪತಿಗಳಿಗೆ ಸತ್ಕಾರ

 

 

ತುಮಕೂರು :
ಅಖಂಡವಾಗಿ ಒಂದು ಪೀಠದ ಅಧಿಪತಿಯಾಗಿ ಒಂದಿನಿತೂ ಚ್ಯುತಿ ಬಾರದ ಹಾಗೆ ನಡೆದು ಜನಸಾಮಾನ್ಯರ ಹೃದಯ ಸಿಂಹಾಸನಗಳಲ್ಲಿ ಶಾಶ್ವತವಾಗಿ ನೆಲೆಸಿದವರು ಪೂಜ್ಯ ಡಾ.ಶಿವಕುಮಾರ ಮಹಾಸ್ವಾಮಿಗಳು. ಶ್ರೀಗಳು ಬದುಕಿರುವಾಗಲೇ ದಂತಕಥೆಯಾಗಿ ಜನಸೇವೆ ಮಾಡಿದರು ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಹೇಳಿದರು.

ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಜರುಗಿದ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 116 ನೇ ಜನ್ಮ ದಿನೋತ್ಸವ ಹಾಗೂ ಗುರುವಂದನಾ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದರು.
ಪೂಜ್ಯ ಶಿವಕುಮಾರ ಮಹಾಸ್ವಾಮೀಜಿಯವರು ದೀನದಲಿತರ, ಹಳ್ಳಿಗಾಡಿನ ಜನರ ಬದುಕನ್ನು ಸುಧಾರಿಸಿದ್ದಾರೆ. ಲಕ್ಷಾಂತರ ಮಕ್ಕಳಿಗೆ ವಿದ್ಯಾದಾನ ನೀಡಿದ್ದಾರೆ. ಸಿದ್ಧಗಂಗೆಯಲ್ಲಿ ಮೌನ ಸಾಮಾಜಿಕ ಕ್ರಾಂತಿಯೇ ನಡೆದು ಹೋಗಿದೆ. ನೂರೊಂದು ಸ್ವಾಮಿಗಳನ್ನು ಸಂತರನ್ನು, ಪೀಠಾಧಿಪತಿಗಳನ್ನು ಕಂಡಿದ್ದೇನೆ. ಅಥಣಿಯ ಶಿವಯೋಗಿಗಳು, ಧಾರವಾಡದ ಮೃತ್ಯುಂಜಯ ಅಪ್ಪಗಳು, ಮುರಗೋಡದ ಮಹಾಂತ ಅಪ್ಪಗಳು, ಬೆಳಗಾವಿಯ ನಾಗನೂರು ರುದ್ರಾಕ್ಷಿ ಮಠದ ಡಾ.ಶ್ರೀ ಶಿವಬಸವ ಮಹಾಸ್ವಾಮಿಗಳು ಹೀಗೆ ಈ ಪೂಜ್ಯರು ದಾಸೋಹಕ್ಕೆ ಸಾಕ್ಷಿಯಾಗಿದ್ದರು. ಇಂಥ ಸ್ವಾಮಿಗಳ ಕುಲಕ್ಕೆ ಆದರ್ಶಪ್ರಾಯರಾಗಿ ನೂರಕ್ಕೂ ಅಧಿಕ ವರ್ಷಗಳ ಕಾಲ ಕರ್ನಾಟಕವನ್ನು ಕನ್ನಡಿಗರನ್ನು ಹೆಮ್ಮೆಯಿಂದ ಬೀಗುವಂತೆ, ಗೌರವದಿಂದ ಬಾಗುವಂತೆ ಮಾಡಿದ ಪುಣ್ಯಪುರುಷ ಡಾ. ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿ.
ಇಂದು ನನ್ನನ್ನು ಶ್ರೀಮಠಕ್ಕೆ ಕರೆದು ಗೌರವ ಸತ್ಕಾರವನ್ನು ನೀಡಿರುವುದು, ಪೂಜ್ಯ ಡಾ.ಶಿವಕುಮಾರ ಮಹಾಸ್ವಾಮೀಜಿಯವರ ದಿವ್ಯ ಸನ್ನಿಧಿಯಲ್ಲಿ ನನ್ನನ್ನು ಆಶೀರ್ವದಿಸಿರುವುದು ಸೌಭಾಗ್ಯವೆಂದುಕೊಂಡಿದ್ದೇನೆ. ಇದೆಲ್ಲವೂ ನನ್ನ ಸುದೀರ್ಘ ಐವತ್ತು ವರ್ಷಗಳ ಸೇವೆಯಲ್ಲಿ ಅಲ್ಪವಾದ ಸಾಮಾಜಿಕ ಹಾಗೂ ಧಾರ್ಮಿಕ ಸೇವೆಯ ಫಲವೆಂದುಕೊಂಡಿದ್ದೇನೆ. ಭಗವಂತನು ಕೆಲವು ಕಾರ್ಯಗಳನ್ನು ನನ್ನಿಂದ ನೆರವೇರಿಸಲು ಆಶೀರ್ವದಿಸಿದ್ದಾನೆ. ಅದರ ಶ್ರೇಯಸ್ಸು ಭಗವಂತನಿಗೆ ಹಾಗೂ ಕೆಎಲ್‌ಇ ಸಂಸ್ಥೆಯ ಸಂಸ್ಥಾಪಕ ಚೇತನಕ್ಕೆ ಸಲ್ಲಬೇಕೆಂಬುದು ನನ್ನ ಬಯಕೆ ಎಂದು ಹೇಳಿದರು.

ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಸುತ್ತೂರು ಮಠದ ಪರಮಪೂಜ್ಯ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಸಿದ್ಧಗಂಗೆಯ ಪೂಜ್ಯ ಸಿದ್ಧಲಿಂಗ ಮಹಾಸ್ವಾಮೀಜಿ, ಪೂಜ್ಯ ಗುರುಪರದೇಶಿಕೇಂದ್ರ ಮಹಾಸ್ವಾಮೀಜಿ ವಹಿಸಿದ್ದರು. ಇದೇ ಸಂದರ್ಭದಲ್ಲಿ ಡಾ.ಪ್ರಭಾಕರ ಕೋರೆಯವರಿಗೆ ಹಾಗೂ ಆಶಾ ಕೋರೆಯವರಿಗೆ ಪೂಜ್ಯರು ಸತ್ಕರಿಸಿ ಆಶೀರ್ವದಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಗಡಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ