Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಪೂರ್ಣಾವಧಿ ಅಧಿವೇಶನ ಜರುಗಲಿ ಡಾ. ಪ್ರಭಾಕರ ಕೋರೆ

ಡಿಸೆಂಬರದಲ್ಲಿ ಬೆಳಗಾವಿಯಲ್ಲಿ ಜರುಗಲಿರುವ ಚಳಿಗಾಲದ ಅಧಿವೇಶನವು ಪೂರ್ಣಾವಧಿಯ ಅಧಿವೇಶನವಾದರೆ ಅದಕ್ಕೆ ಅರ್ಥ ಬರುತ್ತದೆ ಎಂದು ಕೆಎಲ್ಇ ಸಂಸ್ಥೆಯ ಕಾರ್ಯಧ್ಯಕ್ಷರಾದ ಡಾ. ಪ್ರಭಾಕರ್ ಕೋರೆ ಅವರು ಅಭಿಮತ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನಕ್ಕೆ ಅಡಿಪಾಯ ಹಾಕಿದ ಕೆಎಲ್ ಇ ಸಂಸ್ಥೆಯ ಮೂಲ ಉದ್ದೇಶ ಈ ಭಾಗದ ಸಮಸ್ಯೆಗಳನ್ನು ಪರಿಹರಿಸುವುದಾಗಿತ್ತು. ಆದರೆ ಒಂದು ದಶಕಕ್ಕೂ ಅಧಿಕ ಕಾಲದಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಸಲಾಗುತ್ತಿದೆ. ಸಮಸ್ಯೆಗಳ ಪರಿಹಾರ ಮಾತ್ರ ಶೂನ್ಯ. ಆದ್ದರಿಂದ ಒಂದು ತಿಂಗಳ ಕಾಲ ಪೂರ್ಣ ಪ್ರಮಾಣದ ಅಧಿವೇಶನ ನಡೆಸುವದರೊಂದಿಗೆ ಈ ಭಾಗದ ಸಮಸ್ಯೆಗಳ ಸಂಪೂರ್ಣ ಚರ್ಚೆಯಾಗಬೇಕು. ಕೇವಲ ಪ್ರತಿಭಟನೆ ಹೋರಾಟಕ್ಕೆ ಸೀಮಿತಗೊಳಿಸದೆ ಅಭಿವೃದ್ಧಿಗೆ ಆದ್ಯತೆ ನೀಡಬೇಕಾಗಿದೆ ಎಂದು ಹೇಳಿದರು.

ಉತ್ತರ ಕರ್ನಾಟಕದ ಅಭಿವೃದ್ಧಿಯ ಕನಸು ಇಟ್ಟುಕೊಂಡು ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧವನ್ನು 2012ರಲ್ಲಿ 400 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಿಸಲಾಯಿತು. ಆತ್ಮವಲೋಕನವನ್ನು ಮಾಡಿಕೊಂಡರೆ ನಮ್ಮ ಸಾಧನೆ ಶೂನ್ಯವೆನಿಸುತ್ತಿದೆ. ಪ್ರತಿ ವರ್ಷ ಕೇವಲ 10 ದಿನಗಳ ಕಾಟಾಚಾರದ ಅಧಿವೇಶನವನ್ನು ಜರುಗಿಸುವ ಮೂಲಕ ಜನರ ಭಾವನೆಗಳಿಗೆ ತಣ್ಣೀರ್ ಎರಚಲಾಗಿದೆ. ಮಾತ್ರವಲ್ಲದೆ ಬೆಳಗಾವಿ ಅಧಿವೇಶನ ತನ್ನ ಉದ್ದೇಶವನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಈ ಅಧಿವೇಶನವು ವ್ಯಾಖ್ಯಾನವಾಗಬೇಕಾಗಿತ್ತು. ಆದರೆ ದಶಕಗಳಾದರೂ ಯಾವೊಂದು ಅಧಿವೇಶನವೂ ಕೂಡ ಯಶಸ್ಸನ್ನು ಪಡೆದುಕೊಳ್ಳದೆ ಇರುವುದು ದುರ್ದೈವದ ಸಂಗತಿ. ಬೆಳಗಾವಿಯ ಸುವರ್ಣ ವಿಧಾನಸೌಧದ ನಿರ್ಮಾಣದ ಹಿಂದೆ ಶಾಸಕರ ಭವನಗಳನ್ನು ನಿರ್ಮಿಸಬೇಕೆಂಬುದು ಈ ಭಾಗದ ಜನತೆಯ ಒತ್ತಾಸೆಯಾಗಿತ್ತು. ಆದರೆ ಅದು ಇಂದಿಗೂ ಸಾಧ್ಯವಾಗಿಲ್ಲ. ಶಾಸಕರು 10 ದಿನಗಳ ಕಾಲಹರಣವನ್ನ ಮಾಡುವುದರ ಮೂಲಕ ಜನರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಪೂರ್ಣಾವಧಿಯ ಅಧಿವೇಶನ ಜರುಗಬೇಕೆಂಬುವುದು ಈ ಭಾಗದ ಜನತೆಯ ಧ್ವನಿಯಾಗಿದೆ .

ಶಾಸಕರ ಭವನಗಳನ್ನು ನಿರ್ಮಿಸಿ ಸಿಬ್ಬಂದಿ ವರ್ಗದವರಿಗೆ ಸೂಕ್ತವಾದ ವಸತಿ ಸೌಕರ್ಯಗಳನ್ನು ಮಾಡಿ ದೀರ್ಘಾವಧಿಯ ಅಧಿವೇಶನಗಳನ್ನು ಜರಗಿಸಿದರೆ ಬೆಳಗಾವಿ ಅಧಿವೇಶನ ಸಫಲಗೊಳ್ಳಲು ಸಾಧ್ಯ. ಪಕ್ಷಭೇದಗಳನ್ನು ತೊಡೆದು ಹಾಕಿ ಪೂರ್ಣಾವಧಿಯ ಅಧಿವೇಶನಗಳನ್ನು ಸಂಘಟಿಸಿ ಈ ಭಾಗದ ರೈತರ ಕಾರ್ಮಿಕರ ಮೂಲಭೂತ ಸಮಸ್ಯೆಗಳ ಕುರಿತು ಬೆಳಕು ಚೆಲ್ಲುವ ಕೆಲಸ ಈಗಲಾದರೂ ನಡೆಯಬೇಕಾಗಿದೆ. ಇಲ್ಲದಿದ್ದರೆ ಅಧಿವೇಶನ ದುಂದು ವೆಚ್ಚದ, ಕಾಟಾಚಾರದ , ಮೋಜು ಮಸ್ತಿಯ ಕ್ರೀಡೆಯಾಗುವುದರಲ್ಲಿ ಯಾವ ಅರ್ಥವೂ ಇಲ್ಲ. ಬಹಳಷ್ಟು ಹೋರಾಟಗಳ ಪ್ರತಿಫಲವಾಗಿ ರೂಪಗೊಂಡಿರುವ ಬೆಳಗಾವಿ ಸುವರ್ಣ ವಿಧಾನ ಸೌಧ ಉತ್ತರ ಕರ್ನಾಟಕದ ಧ್ವನಿಯಾಗಿ ಇಲ್ಲಿಯ ಸಮಸ್ಯೆಗಳನ್ನ ಬಗೆಹರಿಸುವ ಕಾರ್ಯವನ್ನು ಕೈಗೊಳ್ಳಲಿ ಎಂದು ಡಾ. ಪ್ರಭಾಕರ ಕೋರೆ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ