Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ ಡಾ.ಸಿದ್ದು ಹುಲ್ಲೋಳಿ

ಉಗರಗೋಳ : ಯಲ್ಲಮ್ಮನಗುಡ್ಡದಲ್ಲಿ ಶುಕ್ರವಾರ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಬೆಳಗಾವಿಯ ಬಿಮ್ಸ್ ಮುಖ್ಯ ಆಡಳಿತಾಧಿಕಾರಿ ಡಾ.ಸಿದ್ದು ಹುಲ್ಲೋಳಿ ಅಧಿಕಾರ ಸ್ವೀಕರಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಯಲ್ಲಮ್ಮನಗುಡ್ಡದಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿರುವುದು ನನ್ನ ಪುಣ್ಯ. ಇಲ್ಲಿ ಕೆಲಸ ಮಾಡುವ ಎಲ್ಲ ಸಿಬ್ಬಂದಿಯೊಂದಿಗೆ ಸಮನ್ವಯ ಸಾಧಿಸಿ, ಸ್ಥಳೀಯ ಶಾಸಕರ ಸಹಕಾರದೊಂದಿಗೆ ಪ್ರಾಧಿಕಾರವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯುತ್ತೇನೆ ಎಂದರು.

ದಕ್ಷಿಣ ಭಾರತದಲ್ಲೇ ಹೆಚ್ಚಿನ ಭಕ್ತರು ಭೇಟಿ ನೀಡುವ ಧಾರ್ಮಿಕ ಕ್ಷೇತ್ರ ಇದಾಗಿದೆ. ಇಲ್ಲಿ ತನು, ಮನ, ಧನದಿಂದ ದೇವಿಗೆ ಭಕ್ತಿ ಸಮರ್ಪಿಸುವ ಭಕ್ತರಿದ್ದಾರೆ. ಅವರನ್ನು ಒಳಗೊಂಡು ಗುಡ್ಡದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುವುದು. ಭಕ್ತರಿಗೂ ‘ಭಾರ’ವಾಗದಂತೆ ನಡೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಗುಡ್ಡಕ್ಕೆ ಬರುವ ಭಕ್ತರ ಹಿತ ಕಾಯುವುದೇ ನಮ್ಮ ಮುಖ್ಯ ಗುರಿ. ಅವರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಪ್ರಾಧಿಕಾರದ ಉಪ ಕಾರ್ಯದರ್ಶಿ ನಾಗರತ್ನಾ ಚೋಳಿನ, ಅಧೀಕ್ಷಕ ಶೀತಲ್ ಕಡಟ್ಟಿ, ಡಿ.ಆರ್.ಚವ್ಹಾಣ, ಭರಮು ಹುಲ್ಲೋಳಿ ಇತರರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಂಗ್ಲಾದೇಶದ ಹೆಸರಲ್ಲಿ ವಿದೇಶಿ ಅಡಕೆ ಅಕ್ರಮ ಆಮದು ಪತ್ತೆ ; ₹2500 ಕೋಟಿ ನಷ್ಟದ ಶಂಕೆ : ನಮ್ಮ ಬೆಳೆಗಾರರ ಮೇಲೆ ಪರಿಣಾಮ ಏನು..?ಅಮೆರಿಕ ಸೈನಿಕನನ್ನು ಕೊಂದ್ರೆ ಅಥವಾ ಸೆರೆ ಹಿಡಿದ್ರೆ 30 ಸಾವಿರ ಡಾಲರ್ ಬಹುಮಾನ : ಮಹಿಳೆಯರಿಗೆ ದುಪ್ಪಟ್ಟು ಹಣ; ಇರಾನ್‌ ಘೋಷಣೆನಾಲ್ಸಾರ್‌ ನಂತರ ಬೆಂಗಳೂರಿನ ಪ್ರತಿಷ್ಠಿತ ಕಾನೂನು ಕಾಲೇಜಿನಿಂದಲೂ ಘಟಿಕೋತ್ಸವಕ್ಕೆ ಸಿಜೆಐ ಆಹ್ವಾನಕ್ಕೆ ವಿರೋಧದೇವಸ್ಥಾನದಲ್ಲಿ ಕಾಲ್ತುಳಿತ : 7 ಮಂದಿ ಸಾವು, ಹಲವರಿಗೆ ಗಾಯವಂದೇ ಮಾತರಂಗೆ ಅಪಮಾನ ಆರೋಪ ; ಸೋನಿಯಾ ಗಾಂಧಿ ವಿರುದ್ಧ ದೂರುಒಳಚರಂಡಿ ಕಾಮಗಾರಿ ವೇಳೆ 18 ವರ್ಷದ ಕಾರ್ಮಿಕನಿಗೆ ಸಿಕ್ಕಿತು 98 ಕೋಟಿ ರೂ. ಮೌಲ್ಯದ ನಿಧಿ….!ಕರ್ನಾಟಕದ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನಕನ್ನಡ ಸಾಹಿತ್ಯ ಕಣಜವನ್ನು ಶ್ರೀಮಂತಗೊಳಿಸಿದವರು ಡಾ. ಸರಜೂ ಕಾಟ್ಕರ್ : ಡಾ. ಬಸವರಾಜ ಜಗಜಂಪಿಮೇಕೆ ಬೇಟೆಗೆ ಮಾಂಸದ ಅಂಗಡಿಗೆ ನುಗ್ಗಿದ ಹೆಬ್ಬಾವು; ಕುತ್ತಿಗೆಗೆ ಸುತ್ತಿಕೊಂಡು ಆಟವಾಡಿದ ಕುಡುಕ!