Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಕ್ರಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ.ಶಿವಾನಂದ ಕುಡ್ತಲಕರ್

Advertisement
ಕಾರವಾರ: ಗುತ್ತಿಗೆದಾರರೊಬ್ಬರಿಂದ ಲಂಚ ಪಡೆಯುತ್ತಿದ್ದ ಇಲ್ಲಿಯ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಕ್ರಿಮ್ಸ್) ವೈದ್ಯಕೀಯ ಅಧೀಕ್ಷಕ ಡಾ.ಶಿವಾನಂದ ಕುಡ್ತಲಕ‌ರ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದರು.

ಆಸ್ಪತ್ರೆಯ ಹಾಸಿಗೆಗೆ ಬೆಡ್ ಶೀಟ್ ಪೂರೈಸಿದ್ದಕ್ಕೆ ಬಿಲ್‌ ಮೊತ್ತ ಪಾವತಿಗೆ ಲಂಚ ಕೇಳಿದ್ದಾಗಿ ಅಧೀಕ್ಷಕರ ವಿರುದ್ಧ ಅಂಕೋಲಾದ ಗುತ್ತಿಗೆದಾರ ಮೊಹಸೀನ್ ಖಾನ್ ದೂರು ನೀಡಿದ್ದರು. ಗುರುವಾರ ರೂ.30 ಸಾವಿರ ನೀಡುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದರು.

ಬೆಡ್ ಶೀಟ್ ಪೂರೈಸಿದ್ದಕ್ಕೆ ಕ್ರಿಮ್ಸ್ ನಿಂದ ರೂ.3,34,200 ಬಿಲ್‌ ಪಾವತಿ ಬಾಕಿ ಇತ್ತು. ಅದನ್ನು ಬಿಡುಗಡೆ ಮಾಡಲು ರೂ.50 ಸಾವಿರಕ್ಕೆ ಡಾ.ಶಿವಾನಂದ ಬೇಡಿಕೆ ಇಟ್ಟಿದ್ದರು. ಎರಡು ದಿನದ ಹಿಂದೆ ರೂ.20 ಸಾವಿರ ನೀಡಿದ್ದೆ ಎಂದು ಗುತ್ತಿಗೆದಾರರು ದೂರು ನೀಡಿದ್ದರು. ಲಂಚ ನೀಡುವಾಗಲೇ ಅಧೀಕ್ಷಕರನ್ನು ವಶಕ್ಕೆ ಪಡೆಯಲಾಯಿತು ಎಂದು ಲೋಕಾಯುಕ್ತ ಎಸ್.ಪಿ ಕುಮಾರಚಂದ್ರ ತಿಳಿಸಿದರು.

ಆರೋಪಿಯು ಗ್ರೇಡ್-1 ಅಧಿಕಾರಿಯಾಗಿರುವ ಹಿನ್ನೆಲೆಯಲ್ಲಿ ಅವರ ಮನೆ, ಖಾಸಗಿ ಕಚೇರಿಗಳಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

ಲೋಕಾಯುಕ್ತ ಉಡುಪಿ ಜಿಲ್ಲೆಯ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ