Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬದುಕಿನಲ್ಲಿ ಅಜ್ಞಾನ, ದಾರಿದ್ರ‍್ಯ, ಬಡತನ ದೂರವಾಗಲು ಗುರು ಅತ್ಯವಶ್ಯಕ : ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು

ಬೆಳಗಾವಿ; ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಅತ್ಯಂತ ಉನ್ನತ ಸ್ಥಾನ ನೀಡಲಾಗಿದೆ. ಗುರು ಎಂದರೆ ದೇವರಿಗಿಂತಲೂ ಶ್ರೇಷ್ಠ ಎಂದು ನಮ್ಮ ಪೂರ್ವಜರು ತಿಳಿಸಿದ್ದಾರೆ. ನಮ್ಮ ಲೌಕಿಕ ಬದುಕು ಹಸನಾಗಲು ಅಥವಾ ಆಧ್ಯಾತ್ಮಿಕ ಸಾಧನೆಯಲ್ಲಿ ನಾವು ಮುಂದುವರೆಯಲೂ ಗುರು ಅತ್ಯವಶ್ಯಕ. ಗುರುವಿನ ಮಾರ್ಗದರ್ಶನವಿಲ್ಲದೆ ಯಾರೂ ತಮ್ಮ ವ್ಯಕ್ತಿತ್ವ ಪರಿಪೂಋಣಗೊಳಿಸಿಕೊಳ್ಳಲು ಸಾಧ್ಯವಿಲ್ಲ. ನಮ್ಮಲ್ಲಿನ ಅಜ್ಞಾನ, ದಾರಿದ್ರ‍್ಯ, ಬಡತನ ದೂರವಾಗಲು ಲೌಕಿಕ ಬದುಕಿನಲ್ಲಿ ಗುರು ಅತ್ಯವಶ್ಯಕ ಎಂದು ಗದುಗಿನ ತೋಂಟದಾರ್ಯ ಸಂಸ್ಥಾನ ಮಠದ ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು. ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ಶ್ರೇಷ್ಠ ಶಿಕ್ಷಕ ಚಂದ್ರಶೇಖರ ಹೊಸೂರ ಅವರ 30 ನೇ ಪುಣ್ಯ ಸ್ಮರಣೆ ಹಾಗೂ ನಾಗನೂರು ರುದ್ರಾಕ್ಷಿ ಮಠದ ವತಿಯಿಂದ ಬೀಡಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಗುರುಭವನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ. ನಮ್ಮೆಲ್ಲರ ಬದುಕಿನಲ್ಲಿ ವಿದ್ಯೆ ಕಲಿಸಿದ ಗುರು ಹಾಗೂ ಜನ್ಮ ನೀಡಿದ ತಂದೆ ತಾಯಿ ಇವರು ಎಂದೆಂದಿಗೂ ದೈವ ಸ್ವರೂಪ. ಇವರನ್ನು ಸದಾ ಗೌರವದಿಂದ ಕಾಣಬೇಕು. ದೇವರನ್ನು ಕಾಣಬೇಕೆಂಬ ಹಂಬಲ ಎಲ್ಲರಿಗೂ ಇರುತ್ತದೆ. ಅದಕ್ಕಾಗಿ ಇಡೀ ದೇಶವನ್ನೇ ಸುತ್ತುತ್ತೇವೆ. ಆದರೆ ದೇವರನ್ನು ಪ್ರತ್ಯಕ್ಷವಾಗಿ ನೋಡಿದ ಅವನೊಂದಿಗೆ ಮಾತನಾಡಿದ ನಿರ್ಮಾಣಗಳು ಎಲ್ಲೂ ಇಲ್ಲ. ನಿರ್ಗುಣ, ನಿರಾಕಾರ ಸ್ವರೂಪನಾದ ಕಾಣದ ದೇವರನ್ನು ಹುಡುಕಿ ನಾವೆಲ್ಲಾ ಬಳಲುತ್ತೇವೆ. ಇದರಿಂದ ದೇಹಕ್ಕೆ ದಣಿವಾಗುತ್ತದಯೆ ಹೊರತು ಅವನ ದರ್ಶನವಾಗುವುದಿಲ್ಲ. ಕಾರಣ ಕಾಣದ ದೇವರ ಸ್ವರೂಪವನ್ನು ಅರಿಯಲು ನಾವೆಲ್ಲರೂ ಗುರುವಿನ ಮೊರೆ ಹೋಗಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು, ಬೀಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿನ ಜನತೆಗೆ ಆಧ್ಯಾತ್ಮಿಕ ಜ್ಞಾನ ಉಣಬಡಿಸಬೇಕೆಂಬ ಸದಾಶಯದಿಂದ ಇಲ್ಲಿ ಗುರುಭವನ ನಿರ್ಮಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಇದರ ಮೂಲಕ ಆಧ್ಯಾತ್ಮಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಚಟುವಟಿಕೆಗಳನ್ನು ಸಾಗರೋಪಾದಿಯಲ್ಲಿ ಹಮ್ಮಿಕೊಳ್ಳಲಾಗುವುದು ಎಂದರು.

ಶೇಗುಣಸಿ ವಿರಕ್ತಮಠದ ಡಾ. ಮಹಾಂತಪ್ರಭು ಮಹಾಸ್ವಾಮಿಗಳು, ಅವರೊಳ್ಳಿ ಬೆಳಕಿ ರುದ್ರಸ್ವಾಮಿ ಮಠದ ಚನ್ನಬಸವ ದೇವರು ಹಾಗೂ ಕಮತೇನಟ್ಟಿಯ ಗುರುದೇವ ದೇವರು ನೇತೃತ್ವ ವಹಿಸಿದ್ದರು.

ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ, ಮಾಜಿ ವಿಧಾನ ಪರಿಷತ್ ಸದಸ್ಯ ಮೋಹನ ಲಿಂಬಿಕಾಯಿ ಸೇರಿದಂತೆ ಅನೇಕ ಜನಪ್ರತಿನಿಧಿಗಳು, ಗ್ರಾಮದ ಹಿರಿಯರು ಉಪಸ್ಥಿತರಿದ್ದರು.

ದಿ. ಚಂದ್ರಶೇಖರ ಹೊಸೂರು ಅವರ ಸಹೋದ್ಯೋಗಿಗಳು ಹಾಗೂ ಐಎಫ್ಎಸ್ ಅಧಿಕಾರಿ ಗಿರೀಶ ಹೊಸೂರ ಅವರ ವಿದ್ಯಾ ಗುರುಗಳಿಗೆ ಗುರುವಂದನೆ ಸಲ್ಲಿಸಲಾಯಿತು. ಇದಕ್ಕೂ ಮುನ್ನ ಅಯ್ಯಪ್ಪ ಮಂದಿರದಿಂದ ಗುರುಭವನದ ವರೆಗೆ ಜರುಗಿದ ಭವ್ಯ ಮೆರವಣಿಗೆ ಆಕರ್ಷಣೀಯವಾಗಿತ್ತು.

ಹಿರಿಯ ಐಎಫ್ಎಸ್ ಅಧಿಕಾರಿ ಗಿರೀಶ ಹೊಸುರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು ರಾಜಶೇಖರ ಪಾಟೀಲ ನಿರೂಪಿಸಿ ವಂದಿಸಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದಲ್ಲಿ ಜೂನ್ 1ಕ್ಕೆ ಶಾಲೆ ಪ್ರಾರಂಭೋತ್ಸವ : ಅಂದೇ ಪೋಷಕರ ಮಹಾಸಭೆಪೋಕ್ಸೋ ಪ್ರಕರಣ : ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ ಪುತ್ರ3 ನೇ ಮಗು ಜನಿಸಿದರೆ ₹30 ಸಾವಿರ, 4ನೇ ಮಗು ಜನಿಸಿದರೆ ₹40 ಸಾವಿರ ಧನಸಹಾಯ ! ವಿಶಿಷ್ಟ ಯೋಜನೆ ಘೋಷಿಸಿದ ಆಂಧ್ರ ಸಿಎಂ…!SSLC ಮರುಮೌಲ್ಯಮಾಪನ : ಜಿಲ್ಲೆಯ ವಿದ್ಯಾರ್ಥಿ ಈಗ ಇಡೀ ರಾಜ್ಯಕ್ಕೆ ಪ್ರಥಮ..!ಕಕ್ಷಿದಾರರ ಸಮಾಲೋಚನಾ ಸ್ಪರ್ಧೆ: ರಾಷ್ಟ್ರೀಯ ಕಾನೂನು ಉತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಗದಗ ಮಾನ್ವಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳುಸಾವಿರಾರು ಕೋಟಿ ಹೂಡಿಕೆ ಮಾಡಿದವರಿಗೆ ಆತಂಕ :  ICE CREAM ಮಾರುತ್ತಿದ್ದವ ಈ ಪರಿ ಬೆಳೆದದ್ದು ಹೇಗೆ ?ಕೊನೆಗೂ ಶಿವಾನಂದ ನೀಲಣ್ಣವರ ಬಂಧನ..!ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆ