ಬೆಂಗಳೂರು : ಅ.11ರಿಂದ ಆರಂಭಗೊಳ್ಳಲಿರುವ 2024-25ರ ರಣಜಿ ಟ್ರೋಫಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಸಂಭವನೀಯ ಆಟಗಾರರ ಪಟ್ಟಿಯನ್ನು ಪ್ರಕಟ ಮಾಡಿದೆ. 36 ಆಟಗಾರರ ಪಟ್ಟಿಯಲ್ಲಿ ಭಾರತ ತಂಡದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಪುತ್ರ ಸಮಿತ್ ದ್ರಾವಿಡ್ ಸ್ಥಾನ ಪಡೆದಿದ್ದಾರೆ. ಕಿರಿಯರ ಕ್ರಿಕೆಟ್ನಲ್ಲಿ ಉತ್ತಮ ಪ್ರದರ್ಶನ ತೋರಿ, ಇತ್ತೀಚೆಗೆ ಮುಕ್ತಾಯಗೊಂಡ 3ನೇ ಆವೃತ್ತಿಯ ಮಹಾ ರಾಜ ಟ್ರೋಫಿಯಲ್ಲಿ ಆಡಿದ್ದ ಸಮಿತ್, ಇದೀಗ ರಾಜ್ಯ ಹಿರಿಯರ ತಂಡವನ್ನೂ ಪ್ರತಿನಿಧಿಸುವ ನಿರೀಕ್ಷೆಯಲ್ಲಿದ್ದಾರೆ. 'ಸಿ' ಗುಂಪಿನಲ್ಲಿರುವ ಕರ್ನಾಟಕ, ಮೊದಲ ಪಂದ್ಯದಲ್ಲಿ ಮಧ್ಯಪ್ರದೇಶ ವಿರುದ್ದ ಸೆಣಸಲಿದೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.