Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಜೆ ಸಿಗಲಿಲ್ಲವೆಂದು ಬಸ್ಸಿನಲ್ಲೇ ಆತ್ಮಹತ್ಯೆ ಮಾಡಿಕೊಂಡ ಚಾಲಕ

ಬೆಳಗಾವಿ : ರಜೆ ನೀಡಲಿಲ್ಲ ಎಂಬ ಕಾರಣಕ್ಕೆ ಬೆಳಗಾವಿ ನಗರ ಸಾರಿಗೆ ಬಸ್ ಚಾಲಕರೊಬ್ಬರು ಬಸ್ಸಿನಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಬೆಳಗಾವಿ ಎರಡನೇ ಬಸ್ ಘಟಕದಲ್ಲಿ ಬುಧುವಾರ ಮುಂಜಾನೆ 6.30ರ ಹೊತ್ತಿಗೆ ಸಂಭವಿಸಿದೆ.

47 ವರುಷದ ಬಾಲಚಂದ್ರ ಹೂಕೋಜಿ ಆತ್ಮಹತ್ಯೆ ಮಾಡಿಕೊಂಡವರ. ರಾಮದುರ್ಗ ತಾಲೂಕಿನ ಇವರು ಹಳೆ ಗಾಂಧಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ಕುಟುಂಬದೊಂದಿಗೆ ವಾಸ ಮಾಡುತ್ತಿದ್ದರು. ಇವರ ಅಕ್ಕನ ಮಗಳ ಮದುವೆ ದಿನ ನಿಶ್ಚಯವಾಗಿದರಿಂದ ತಮ್ಮ ಹಿರಿಯ ಅಧಿಕಾರಿಗಳಲ್ಲಿ ರಜೆಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಅದು ತಿರಸ್ಕಾರ ಗೊಂಡಿತ್ತು. ಅದಕ್ಕೇ ಪದೇ ಪದೇ ಅರ್ಜಿ ಸಲ್ಲಿಸಿದ್ದರೂ ಅವು ಪರಿಗಣಿಸಲ್ಪಟ್ಟಿರಲಿಲ್ಲ. "ಚಾಲಕ ಬಾಲಚಂದ್ರ ಹೂಕೋಜಿ ಹಲವು ದಿನಗಳಿಂದ ರಜೆ ಕೇಳುತ್ತಿದ್ದರಂತೆ ಆದರೆ ಹಿರಿಯ ಅಧಿಕಾರಿಗಳು ರಜೆ ನೀಡಿರಲಿಲ್ಲ. ಈಗ ತನ್ನ ಅಕ್ಕನ ಮಗಳ ಮದುವೆ ಇದೆ. ಅದಕ್ಕಾಗಿ ರಜೆ ಬೇಕು ಎಂದು ಕೇಳಿದ್ದರಂತೆ ಆದಾಗ್ಯೂ ರಜೆ ನೀಡಿಲ್ಲ. ಇದ್ರಿಂದ ಬೇಸರಗೊಂದ ಬಾಲಚಂದ್ರ ಬಸ್ ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ," ಎಂದು ಅವರ ಸಹೋದ್ಯೋಗಿಗಳು ತಿಳಿಸಿದ್ದಾರೆ.

ಬೆಳಗಾವಿ ನಗರದ 2ನೇ ಡಿಪೋಗೆ ಸೇರಿದ್ದ ಹುಕೋಜಿ ಬೆಳಗಾವಿಯ ಸಿಬಿಟಿಯಿಂದ ಶಹಾಪುರ, ವಡಗಾವಿಗೆ ಬಸ್ ಚಾಲನೆ ಮಾಡುತ್ತಿದ್ದರು. ಬುಧುವಾರ ಮುಂಜಾನೆ 6 ಗಂಟೆಗೆ ಡ್ಯೂಟಿಗೆ ರಿಪೋರ್ಟ್ ಮಾಡಿಕೊಂಡ ಅವರು ಬಸ್ಸಿಗೆ ತೆರಳಿ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾರೆ ಎಂದು ಬೆಳಗಾವಿ ಉಪ ಪೊಲೀಸ್ ಆಯುಕ್ತ ರೋಹನ್ ಜಗದೀಶ್ ಪತ್ರಕರ್ತರಿಗೆ ತಿಳಿಸಿದರು.

ಈ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ