ಬೆಳಗಾವಿಯಲ್ಲಿ ಮಾದಕ ವಸ್ತು, ಮಾರಾಟ ಮಾಡುತ್ತಿದ್ದವರ ಬಂಧನ
ಬೆಳಗಾವಿ: ಬೆಳಗಾವಿಯಲ್ಲಿ ಗಾಂಜಾ, ಫೆನ್ನಿ ಸೇರಿದಂತೆ ವಿವಿಧ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆ ಅವ್ಯಾಹತವಾಗಿ ನಡೆಯುತ್ತಿದೆ.
ಬೆಳಗಾವಿ ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಬೆಳಗಾವಿಯಲ್ಲಿ ವಿಶೇಷ ಅಭಿಯಾನ ನಡೆಸಿ ನಗರದಲ್ಲಿ ಗಾಂಜಾ ಹಾಗೂ ಇತರೆ ಮಾದಕ ವಸ್ತುಗಳ ಮಾರಾಟವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.
ಈ ನಿಟ್ಟಿನಲ್ಲಿ ಇದೀಗ ಬೆಳಗಾವಿ ಪೊಲೀಸರು ಹೆರಾಯಿನ್ ಮತ್ತು ಮಾದಕ ವಸ್ತು ಮಾರಾಟ ಜಾಲವನ್ನು ಪತ್ತೆ ಹಚ್ಚಿದ್ದಾರೆ.
ಬೆಳಗಾವಿಯ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 50 ಗ್ರಾಂ ತೂಕದ ಹೆರಾಯಿನ್ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಫುಲ್ ಗಜಾನನ ಪಾಟೀಲ್, ಸುಶಾಂತ್ ಗೋವಿಂದ್ ಕಂಗ್ರಾಳ್ಕರ್, ನಾರಾಯಣ ಬಾಬುರಾವ್ ಪಾಟೀಲ, ಸುನೀಲ್ ಭೈರು ಅಸ್ಲಾಕರ್, ಸಲ್ಮಾನ್ ಬಬ್ಬರ್ ಮೊಕಾಶಿ ಮತ್ತು ಎಲ್ಲರೂ ಅನಗೋಳ ಪ್ರದೇಶದವರು.
ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.