Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸೋಲಾರ್ ಬೇಲಿಯ ವಿದ್ಯುತ್ ತಗುಲಿ ದಸರೆ ಆನೆ ಅಶ್ವತ್ಥಾಮ ಸಾವು

 

ಮೈಸೂರು: ಎರಡು ಬಾರಿ ದಸರಾ ಮಹೋತ್ಸವದಲ್ಲಿ
ಪಾಲ್ಗೊಂಡಿದ್ದ 38 ವರ್ಷದ 'ಅಶ್ವತ್ಥಾಮ' ಆನೆಯು ಸೋಲಾರ್ ಬೇಲಿಯ ವಿದ್ಯುತ್ ಪ್ರವಹಿಸಿ ಮಂಗಳವಾರ ಮೃತಪಟ್ಟಿದೆ.

ಹುಣಸೂರು- ಪಿರಿಯಾಪಟ್ಟಣ ತಾಲ್ಲೂಕಿನ ಗಡಿ ಭಾಗದ ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದ ಆನೆಯು ಆಹಾರ ಅರಸಿ ಕಾಡಿಗೆ ತೆರಳಿತ್ತು.

ಸೋಲಾ‌ರ್ ಬೇಲಿ ಮೇಲೆ ವಿದ್ಯುತ್ ತಂತಿಯು ಬಿದ್ದಿದ್ದರಿಂದ ವಿದ್ಯುತ್ ಆಘಾತದಿಂದ ಅಶ್ವತ್ಥಾಮ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

2022ರ ದಸರೆಯಲ್ಲಿ ಪಾಲ್ಗೊಂಡು ಗಮನ ಸೆಳೆದಿತ್ತು. ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಿರಲಿಲ್ಲ.

2017ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಅಶ್ವತ್ಥಾಮನನ್ನು ಸೆರೆ ಹಿಡಿಯಲಾಗಿತ್ತು. ಶಾಂತ ಹಾಗೂ ಗಾಂಭೀರ್ಯ ಸ್ವಭಾವಕ್ಕೆ ಹೆಸರಾಗಿದ್ದ ಅದನ್ನು ನಾಲ್ಕು ವರ್ಷದಲ್ಲಿಯೇ 2021ರ ದಸರೆಗೆ ಕರೆತರಲಾಗಿತ್ತು. ಅದಕ್ಕೆ ನಡಿಗೆ ತಾಲೀಮು ಸೇರಿದಂತೆ ವಿವಿಧ ತಾಲೀಮನ್ನು ನೀಡಲಾಗಿತ್ತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ