Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ದಸರಾ ಹಬ್ಬ - ಬೆಂಗಳೂರು, ಬೆಳಗಾವಿ, ಮೈಸೂರು ಮಧ್ಯೆ ವಿಶೇಷ ರೈಲು ಸಂಚಾರ

ಬೆಳಗಾವಿ : ಮುಂಬರುವ ದಸರಾ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು ನೈಋತ್ಯ ರೈಲ್ವೆ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು, ಬೆಳಗಾವಿ ಮತ್ತು ಮೈಸೂರಿನ ನಡುವೆ ವಿಶೇಷ ರೈಲುಗಳನ್ನು ಓಡಿಸಲಿದೆ.

ರೈಲುಗಳ ವಿವರ ಹೀಗಿದೆ:

ರೈಲು ಸಂಖ್ಯೆ 06271/06272 ಎಸ್ಎಂವಿಟಿ ಬೆಂಗಳೂರು–ಬೆಳಗಾವಿ–ಮೈಸೂರು ಎಕ್ಸ್​ಪ್ರೆಸ್ ವಿಶೇಷ ರೈಲು (1 ಟ್ರಿಪ್)

ಇದು ಸೆಪ್ಟೆಂಬರ್ 30ರಂದು ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್​ನಿಂದ ಸಂಜೆ 7 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 7.30ಕ್ಕೆ ಬೆಳಗಾವಿ ತಲುಪಲಿದೆ. ಈ ರೈಲು ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.
ರೈಲು ಸಂಖ್ಯೆ 06272 ಅಕ್ಟೋಬರ್ 1ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಿಗ್ಗೆ 7.45ಕ್ಕೆ ಮೈಸೂರಿಗೆ ತಲುಪಲಿದೆ. ಈ ರೈಲು ಮಾರ್ಗದಲ್ಲಿ ಖಾನಾಪುರ, ಲೋಂಡಾ, ಅಳ್ನಾವರ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಎಸ್ಎಂಎಂ ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಚಿಕ್ಕಬಾಣಾವರ, ಯಶವಂತಪುರ, ಕೆಎಸ್ಆರ್ ಬೆಂಗಳೂರು ಮತ್ತು ಮಂಡ್ಯ ನಿಲ್ದಾಣಗಳಲ್ಲಿ ನಿಲ್ಲಲಿದೆ.
ರೈಲು ಸಂಖ್ಯೆ 06273/06274 ಮೈಸೂರು–ಬೆಳಗಾವಿ–ಎಸ್ಎಂವಿಟಿ ಬೆಂಗಳೂರು ಎಕ್ಸ್​ಪ್ರೆಸ್ ವಿಶೇಷ ರೈಲು (1 ಟ್ರಿಪ್)

ಈ ರೈಲು ಅಕ್ಟೋಬರ್ 2ರಂದು ಮೈಸೂರಿನಿಂದ ರಾತ್ರಿ 11.45ಕ್ಕೆ ಹೊರಟು, ಅಕ್ಟೋಬರ್ 3ರಂದು ಮಧ್ಯಾಹ್ನ 12.30ಕ್ಕೆ ಬೆಳಗಾವಿಯನ್ನು ತಲುಪಲಿದೆ. ಈ ರೈಲು ಮಂಡ್ಯ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.
ರೈಲು ಸಂಖ್ಯೆ 06274 ಅಕ್ಟೋಬರ್ 3ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಿಗ್ಗೆ 5.00ಕ್ಕೆ ಬೆಂಗಳೂರಿನ ಎಸ್ಎಂವಿಟಿ ಟರ್ಮಿನಲ್ ತಲುಪಲಿದೆ. ಇದು ಖಾನಾಪುರ, ಲೋಂಡಾ, ಅಳ್ನಾವರ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಎಸ್ಎಂಎಂ ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಚಿಕ್ಕಬಾಣಾವರ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.
ರೈಲು ಸಂಖ್ಯೆ 06275/06276 ಎಸ್ಎಂವಿಟಿ ಬೆಂಗಳೂರು–ಬೆಳಗಾವಿ–ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್​ಪ್ರೆಸ್ (1 ಟ್ರಿಪ್)

ಈ ರೈಲು ಸಂಖ್ಯೆ 06275 ಅಕ್ಟೋಬರ್ 4ರಂದು ಬೆಂಗಳೂರಿನ ಎಸ್ಎಂವಿಟಿ ಟರ್ಮಿನಲ್​ನಿಂದ ಸಂಜೆ 7 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 8.25ಕ್ಕೆ ಬೆಳಗಾವಿ ತಲುಪಲಿದೆ.
ರೈಲು ಸಂಖ್ಯೆ 06276 ಅಕ್ಟೋಬರ್ 5ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು, ಮರುದಿನ ಬೆಳಿಗ್ಗೆ 5 ಗಂಟೆಗೆ ಬೆಂಗಳೂರಿನ ಎಸ್ಎಂವಿಟಿ ಟರ್ಮಿನಲ್ ತಲುಪಲಿದೆ. ಈ ರೈಲು ಎರಡೂ ದಿಕ್ಕಿನಲ್ಲಿಯೂ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.
ಮೇಲಿನ ಎಲ್ಲಾ ರೈಲುಗಳು ಒಟ್ಟು 19 ಬೋಗಿಗಳನ್ನು ಹೊಂದಿದ್ದು, ಅವುಗಳಲ್ಲಿ 1 ಎಸಿ 2-ಟೈರ್, 3 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 3 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್ಎಲ್ಆರ್/ಡಿ ಬೋಗಿಗಳು ಇರಲಿವೆ.

ಹಬ್ಬದ ಸಮಯದಲ್ಲಿ ಪ್ರಯಾಣಿಕರು ಈ ವಿಶೇಷ ಸೇವೆಗಳ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ವಿವರಗಳಿಗಾಗಿ ಭಾರತೀಯ ರೈಲ್ವೆಯ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಬಹುದು. ಸಹಾಯವಾಣಿ ಸಂಖ್ಯೆ 139 ಕ್ಕೆ ಕರೆ ಮಾಡಬಹುದು ಅಥವಾ ಹತ್ತಿರದ ರೈಲು ನಿಲ್ದಾಣವನ್ನು ಸಂಪರ್ಕಿಸಬಹುದು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಕಲಗಿ ಪಟ್ಟಣದಲ್ಲಿ ವಿಜಯ ದಶಮಿ ನಿಮಿತ್ತ ಶ್ರೀ ಮಹಾಲಕ್ಷ್ಮೀ ದೇವಿ ಅಗ್ನಿ ಹಾಯುವ ಕಾರ್ಯಕ್ರಮ.ಮಾರ್ಕಂಡೇಯ ನದಿಯಲ್ಲಿ  ಮರ್ಡರ್..?ಬೆಳಗಾವಿಯಲ್ಲಿ ಹೊಸ ಶೋರೂಮ್ ಮೂಲಕ ಕರ್ನಾಟಕದಲ್ಲಿ ತನ್ನ ಅಸ್ತಿತ್ವ ವಿಸ್ತರಿಸಿದ PuREPowerನೀಲಿ ಡ್ರಮ್ ಕೊಲೆ ಪ್ರಕರಣ : ಪತ್ನಿ ಮುಸ್ಕಾನ್‌, ಪ್ರಿಯಕರ ಸಾಹಿಲ್‌ಗೆ ಮರಣದಂಡನೆ ಶಿಕ್ಷೆRCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರು