Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಗೃಹಲಕ್ಷ್ಮಿ ಯೋಜನೆಗೆ ಇ-ಕೆವೈಸಿ ಕಡ್ಡಾಯವಲ್ಲ: ವದಂತಿಗಳಿಗೆ ಕಿವಿಗೊಡದಂತೆ ಮನವಿ

ಬೆಂಗಳೂರು/ಶಿವಮೊಗ್ಗ :

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಅಪ್ಡೇಟ್ ಮಾಡಿಸಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳು ಸುಳ್ಳಾಗಿದ್ದು, ಸಾರ್ವಜನಿಕರು ಇವುಗಳಿಗೆ ಕಿವಿಗೊಡಬಾರದು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್. ಚಂದ್ರಭೂಪಾಲ ಅವರು ಸ್ಪಷ್ಟಪಡಿಸಿದ್ದಾರೆ.
ಯೂಟ್ಯೂಬ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿಯನ್ನು ನಂಬಿ, ಯೋಜನೆಯ ಲಾಭವನ್ನು ಮುಂದುವರೆಸಲು ಫಲಾನುಭವಿಗಳು ಖಾಸಗಿ ಸೈಬರ್ ಕೇಂದ್ರಗಳು, ಗ್ರಾಮ್ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಿಗೆ ಮುಗಿಬೀಳುತ್ತಿರುವುದು ಪ್ರಾಧಿಕಾರದ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ವಿನಾಕಾರಣ ಸೈಬರ್ ಕೇಂದ್ರಗಳಿಗೆ ಅಲೆದಾಡಿ ತೊಂದರೆಗೆ ಒಳಗಾಗಬಾರದು ಎಂದು ಅವರು ಮನವಿ ಮಾಡಿದ್ದಾರೆ.
ಅಧಿಕೃತ ಆದೇಶ ಬಂದಿಲ್ಲ:
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪರಿಷ್ಕರಣೆ ಮಾಡುವುದು ರಾಜ್ಯ ಸರ್ಕಾರದ ಉದ್ದೇಶವಾಗಿದ್ದರೂ ಸಹ, ಈ ಪರಿಷ್ಕರಣೆ ಯಾವ ಮಟ್ಟದಲ್ಲಿ ನಡೆಯಬೇಕು ಮತ್ತು ಯಾವ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂಬ ಬಗ್ಗೆ ಯಾವುದೇ ರೀತಿಯ ಅಧಿಕೃತ ಮಾರ್ಗದರ್ಶನ ಅಥವಾ ಸೂಚನೆಗಳು ಸರ್ಕಾರದಿಂದ ಇನ್ನು ಹೊರಬಿದ್ದಿಲ್ಲ.
ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಎ.ಪಿ.ಎಲ್, ಬಿ.ಪಿ.ಎಲ್ ಮತ್ತು ಅಂತ್ಯೋದಯ ಕಾರ್ಡ್ ಹೊಂದಿರುವ ಕುಟುಂಬದ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂಪಾಯಿಗಳನ್ನು ನೀಡಲಾಗುತ್ತಿದೆ. ಯೋಜನೆ ಆರಂಭವಾದಾಗಿನಿಂದ ಇದುವರೆಗೆ ಒಟ್ಟು 30 ಕಂತುಗಳಲ್ಲಿ ಹಣವನ್ನು ಫಲಾನುಭವಿಗಳ ಖಾತೆಗೆ ಡಿ.ಬಿ.ಟಿ ಮೂಲಕ ಯಶಸ್ವಿಯಾಗಿ ಜಮೆ ಮಾಡಲಾಗಿದೆ. ಪ್ರಸ್ತುತ ಯಾವುದೇ ಅಡಚಣೆಯಿಲ್ಲದೆ ಹಣ ಪಾವತಿಯಾಗುತ್ತಿದ್ದು, ಇ-ಕೆವೈಸಿ ನೆಪದಲ್ಲಿ ಸಾರ್ವಜನಿಕರು ಗೊಂದಲಕ್ಕೀಡಾಗಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ