Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾಂಗ್ರೆಸ್ ಶಾಸಕನ ಮನೆ ಮೇಲೆ ಇಡಿ ದಾಳಿ

ಬಳ್ಳಾರಿ : ಆದಾಯ ಮೀರಿ ಆಸ್ತಿಗಳಿಕೆ ಆರೋಪ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಶಾಸಕ ನಾರಾ ಭರತ್ ರೆಡ್ಡಿ

ಮನೆ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಜಾರಿ ನಿರ್ದೇಶನಾಲಯದ 20 ಅಧಿಕಾರಿಗಳ ನಾಲ್ಕು ತಂಡ ಇಂದು (ಫೆ.10) ಬೆಳಗ್ಗೆ 6.30ಕ್ಕೆ ಏಕಕಾಲಕ್ಕೆ ಶಾಸಕ ನಾರಾಭರತ ರೆಡ್ಡಿ ಮನೆ, ತಂದೆಯ ಕಚೇರಿ, ಚಿಕ್ಕಪ್ಪ ಪ್ರತಾಪ ರೆಡ್ಡಿ ಮನೆ ಮತ್ತು ಕಚೇರಿಯ ಮೇಲೆ ದಾಳಿ ಮಾಡಿ, ಪರಿಶೀಲನೆ ನಡೆಸಿದ್ದಾವೆ. ಶಾಸಕ ನಾರಾಭರತ್ ರೆಡ್ಡಿ ಕುಟುಂಬ ಗ್ರಾನೈಟ್ ಬಿಸಿನೆಸ್ ಮಾಡುತ್ತಿದೆ.

ಭರತ್‌ ರೆಡ್ಡಿ ಅವರ ತಂದೆ, ಮಾಜಿ ಶಾಸಕ ಸೂರ್ಯನಾರಾಯಣ ರೆಡ್ಡಿ, ಚಿಕ್ಕಪ್ಪ ಪ್ರತಾಪ ರೆಡ್ಡಿ ಮತ್ತು ಸಂಬಂಧಿಗಳ ಮನೆಗಳು, ಕಚೇರಿಗಳಲ್ಲೂ ಶೋಧ ನಡೆಯುತ್ತಿದೆ. ಬೆಂಗಳೂರು, ಚೆನ್ನೈನಲ್ಲಿರುವ ಕಚೇರಿಗಳ ಮೇಲೂ ದಾಳಿ ನಡೆದಿದೆ ಎಂದು ಹೇಳಲಾಗಿದೆ.

ಕೊಪ್ಪಳ ಜಿಲ್ಲೆಯ ಕುಕನೂರು, ಆಂಧ್ರ ಪ್ರದೇಶದ ಒಂಗೋಲ್‌ಗಳಲ್ಲಿ ಕ್ವಾರಿಗಳನ್ನು ಹೊಂದಿದೆ.

ಇ.ಡಿ ಅಧಿಕಾರಿಗಳ ತಂಡ ಬೆಂಗಳೂರಿನಿಂದ ಆಗಮಿಸಿದ್ದು, ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡದೆ ದಾಳಿ ನಡೆಸಿದೆ ಎಂದು ಗೊತ್ತಾಗಿದೆ.

ಕೆಲ ವರ್ಷಗಳ ಹಿಂದೆ ಭರತ್‌ ರೆಡ್ಡಿ ಅವರ ಮನೆ, ಕಚೇರಿ ಮೇಲೆ ಐ.ಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇತ್ತೀಚೆಗೆ ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅವರು ಉಚಿತ ಕುಕ್ಕರ್‌ಗಳನ್ನು ಹಂಚಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆಇನ್ಫೋಸಿಸ್‌ಗೆ ನೂತನ ಸಾರಥಿ: ಸಲೀಲ್ ಪಾರೇಖ್ ಸ್ಥಾನಕ್ಕೆ ಆಶಿಶ್ ಕುಮಾರ ದಾಸ್ ಸಿಇಒ ಆಗಿ ನೇಮಕಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರ