Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪರಿಣಾಮಕಾರಿ ಮಿಷನ್ ಇಂದ್ರಧನುಷ ಅಭಿಯಾನ

 

ಬೆಳಗಾವಿ :
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ, ಬೆಳಗಾವಿ ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯ ಬೆಳಗಾವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರೋಟರಿ ದರ್ಶನ ಹಾಗೂ ತಾಲೂಕಾ ಆರೋಗ್ಯಾಧಿಕಾರಿಗಳ ಕಚೇರಿ ಬೆಳಗಾವಿ ಇವರ ಸಹಯೋಗದಲ್ಲಿ ಆ.೭ ೨೦೨೩ ರಂದು “ಪರಿಣಾಮಕಾರಿ ಮಿಷನ್ ಇಂದ್ರಧನುಷ ೫.೦ ಅಭಿಯಾನ ಕಾರ್ಯಕ್ರಮ ಉದ್ಘಾಟನಾ ಸಮಾರಂಭವು ಜರುಗಿತು.
ಬೆಳಗಾವಿ ಮಹಾನಗರ ಪಾಲಿಕೆ ಮಹಾಪೌರ ಶೋಭಾ ಸೋಮನ್ನಾಚೆ ಅವರು ಜ್ಯೋತಿ ಬೆಳಗಿಸುವದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬೆಳಗಾವಿ ಉತ್ತರ ಶಾಸಕ ಆಸೀಫ್ (ರಾಜು) ಶೇಠ್ ಅವರು ಪರಿಣಾಮಕಾರಿ ಮಿಷನ್ ಇಂದ್ರಧನುಷ ೫.೦ ಅಭಿಯಾನದ ಲಸಿಕಾ ಸಸ್ತ್ರದಲ್ಲಿ (ಶೇಶನ್) ಅರ್ಹ ಮಕ್ಕಳಿಗೆ ಲಸಿಕಾ ಹನಿ ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ ಆರೋಗ್ಯ ಇಲಾಖೆ ಲಸಿಕೆಗಳಿಂದ ಅನೇಕ ಖಾಯಿಲೆಗಳನ್ನು ನಿರ್ಮೂಲನೆ ಮತ್ತು ಹತೋಟಿಯಲ್ಲಿ ಇಟ್ಟಿದ್ದು, ನಮ್ಮ ಜಿಲ್ಲೆಯಲ್ಲಿ ಯಾರೂ ಲಸಿಕೆಯಿಂದ ವಂಚಿತರಾಗದೇ ಸರ್ಕಾರ ಮಾರ್ಗಸೂಚಿಗಳ ಪ್ರಕಾರ ಲಸಿಕೆಗಳನ್ನು ಪಡೆದುಕೊಂಡು ಸದೃಡ ರಾಷ್ಟ್ರ ನಿರ್ಮಾಣಕ್ಕೆ ಕೈಜೊಡಿಸಬೇಕೆಂದು ತಿಳಿಸಿ ಮಿಷನ್ ಇಂದ್ರಧನುಷ ೫.೦ ಅಭಿಯಾನದ ಹಾಗೂ ವಿಶ್ವ ಸ್ತನ್ಯಪಾನ ಸಪ್ತಾಹದ ಆರೋಗ್ಯ ಶಿಕ್ಷಣ ಪರಿಕರಗಳನ್ನು ಬಿಡುಗಡೆ ಮಾಡಿದರು.
ಬೆಳಗಾವಿ ಜಿಲ್ಲೆಯಲ್ಲಿ ಅಗಷ್ಟ ೭ ರಿಂದ ೧೨ ರವರೆಗೆ ಮೊದಲನೆ ಸುತ್ತು, ಸಪ್ಟೆಂಬರ ೧೧ ರಿಂದ ೧೬ ರವರೆಗೆ ೨ನೇ ಸುತ್ತು. ಹಾಗೂ ಅಕ್ಟೋಬರ ೯ ರಿಂದ ೧೪ ರವರೆಗೆ ೩ನೇ ಸುತ್ತು ಈ ಮೂರು ಸುತ್ತುಗಳಲ್ಲಿ ತೀವ್ರ ಇಂದ್ರದನುಷ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಸ್ತಾವಿಕವಾಗಿ ಜಿಲ್ಲಾ ಸಂತಾನೋತ್ಪತಿ ಮತ್ತು ಮಕ್ಕಳ ಆರೋಗ್ಯ ಹಾಗೂ ಲಸಿಕಾಧಿಕಾರಿ ಡಾ.ಚೇತನ ಕಂಕಣವಾಡಿ ಅವರು ತಿಳಿಸಿದರು.
ಜಿಲ್ಲೆಯಲ್ಲಿ “ಪರಿಣಾಮಕಾರಿ ಮಿಷನ್ ಇಂದ್ರಧನುಷ ೫.೦ ಅಭಿಯಾನದಡಿ ಸೂಕ್ತ ತಯಾರಿಗಳನ್ನು ಮಾಡಿಕೊಂಡಿದ್ದು, ಸಮೀಕ್ಷೆ ಮೂಲಕ ಲಸಿಕೆ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ನೀಡಲಾಗುವ ಲಸಿಕೆಯನ್ನು ಪಡೆಯದೇ ಅಥವಾ ಅರ್ಧಕ್ಕೆ ಬಿಟ್ಟುಹೋದ ಒಟ್ಟು ೧೧೫೩೬ ಎರಡು ವರ್ಷದೊಳಗಿನ ಮಕ್ಕಳು’ ೨೯೪೩ ಎರಡ ರಿಂದ ಐದು ವರ್ಷದ ಮಕ್ಕಳು ಹಾಗೂ ೨೫೯೬ ಗರ್ಭಿಣಿಯರು, ತೀವ್ರತರ ಮಿಷನ್ ಇಂದ್ರಧನುಷ್‌ ೫.೦ ಅಭಿಯಾನದಲ್ಲಿ ಲಸಿಕೆಯನ್ನು ನೀಡಲಾಗುತ್ತಿದ್ದು ಇದಕ್ಕಾಗಿ ೩೨ ಮೊಬೈಲ್ ಲಸಿಕಾ ತಂಡಗಳನ್ನು ಜಿಲ್ಲೆಯಾದ್ಯಂತ ಆಯೋಜನೆ ಮಾಡಿಕೊಳ್ಳಲಾಗಿದೆ. ಲಸಿಕೆ ಪಡೆಯದ ಗರ್ಭಿಣಿ ಮತ್ತು ಮಕ್ಕಳ ಪಾಲಕರು ತಮ್ಮ ಸಮೀಪದ ಆಶಾ ಅಂಗನವಾಡಿ ಕಾರ್ಯಕರ್ತೆಯರನ್ನು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳನ್ನು ಬೇಟಿನೀಡಿ ಲಸಿಕೆ ಪಡೆದುಕೊಳ್ಳಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಶ ಕೋಣಿ ಅವರು ತಿಳಿಸಿದರು.
ರೋಟರಿಯನ್ ಕೋಮಲ್ ಕೋಳಿಮಠ ಅಧ್ಯಕ್ಷರು ರೋಟರಿ ದರ್ಶನ ಬೆಳಗಾವಿ ಅವರು ಮಾತನಾಡಿ ಮಾರಕ ರೋಗಗಳ ವಿರುದ್ದ ನೀಡುತ್ತಿರುವ ಲಸಿಕೆಗಳಿಂದ ಯಾರೂ ವಂಚಿತರಾಗಬಾರದು ಲಸಿಕೆಗಳು ಪರಿಣಾಮಕಾರಿಗಳಾಗಿವೆ ಎಂದು ತಿಳಿಸಿದರು.
ಡಾ.ಶಿವಾನಂದ ಮಾಸ್ತಿಹೋಳಿ ತಾಲೂಕಾ ಆರೋಗ್ಯಾಧಿಕಾರಿಗಳು ಬೆಳಗಾವಿ ಎಲ್ಲರಿಗೂ ಸ್ವಾಗತಿಸಿ ಸಾರ್ವತ್ರಿಕಾ ಲಸಿಕಾ ಕಾರ್ಯಕ್ರಮದಡಿಯಲ್ಲಿ ಬರುವ ಲಸಿಕೆಗಳ ಕುರಿತು ಮಾಹಿತಿಯನ್ನು ನೀಡಿದರು.
ಬೆಳಗಾವಿ ಮಹಾನಗರ ಪಾಲಿಕೆ ಉಪ ಮಹಾಪೌರ ರೇಷ್ಮಾ ಪಾಟೀಲ ಮಹಾನಗರ ಪಾಲಿಕೆಯ ಆಯುಕ್ತ ಅಶೋಕ ದುಡಗುಂಟಿ, ಬಿಮ್ಸ್ ನಿರ್ದೇಶಕ ಡಾ.ಅಶೊಕ ಶೇಟ್ಟಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸುಧಾಕರ ಆರ್.ಸಿ, ಬಿಮ್ಸ್ ಸ್ಥಳೀಯ ವೈದ್ಯಾಧಿಕಾರಿ ಡಾ.ಸರೋಜ ತಿಗಡಿ, ಬೆಳಗಾವಿ ವೃತ್ತದ ಸಮೀಕ್ಷಣಾ ವೈದ್ಯಾಧಿಕಾರಿ ಡಬ್ಲೂ ಎಚ್ ಓ ಡಾ.ಸಿದ್ದಲಿಂಗಯ್ಯಾ, ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿ ಡಾ.ಸಂಜಯ ಡುಮ್ಮಗೋಳ ಉಪಸ್ಥಿತರಿದ್ದರು. ಶಿವಾಜಿ ಮಾಳಗೆನ್ನವರ ವಂದಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ