Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಾಳೆ ಶಾಲಾ ಪ್ರಾರಂಭೋತ್ಸವ: ಮೊದಲ ದಿನ ಮೊಟ್ಟೆ ವಿತರಣೆ

ಬೆಂಗಳೂರು: ಬೇಸಿಗೆ ರಜೆ ಮುಗಿದು ಮೇ 29 ರಿಂದ

ಶಾಲೆಗಳು ಪುನರಾರಂಭವಾಗುತ್ತಿದ್ದು, ಬೆಂಗಳೂರಿನ ಹೊಸೂರು ರಸ್ತೆಯ ಆಡುಗೋಡಿಯ ಪಟೇಲ್ ಮುನಿಚಿನ್ನಪ್ಪ ಪ್ರೌಢಶಾಲೆ- ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಿಗ್ಗೆ 9ಕ್ಕೆ ಪ್ರಾರಂಭೋತ್ಸವ ಉದ್ಘಾಟಿಸಲಿದ್ದಾರೆ.

ಈ ಬಾರಿಯ ಎಸ್‌ಎಸ್‌ಎಲ್‌ಸಿಯಲ್ಲಿ 625ಕ್ಕೆ 625 ಅಂಕ ಪಡೆದ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಯ 40 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುತ್ತಿದೆ.

ಶಿಕ್ಷಕರು, ಮುಖ್ಯಶಿಕ್ಷಕರು ಮತ್ತು ಇತರೆ ಸಿಬ್ಬಂದಿ ಮೇ 29ರಂದು ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಜರಾಗಬೇಕು. ಶಾಲಾ ಆವರಣ, ಕೊಠಡಿಗಳು, ಶೌಚಾಲಯ, ಮೇಲ್ಟಾವಣಿ ಹಾಗೂ ಬಿಸಿಯೂಟದ ಪರಿಕರಗಳನ್ನು ಸ್ವಚ್ಛಗೊಳಿಸಬೇಕು. ತಳಿರು ತೋರಣ, ರಂಗೋಲಿ ಬಿಡಿಸಿ ಶಾಲೆಗಳನ್ನು ಅಲಂಕರಿಸಬೇಕು. ಮೇ 30ರಂದು ಮಕ್ಕಳನ್ನು ಸ್ವಾಗತಿಸಲು ಎಲ್ಲ ಶಾಲೆಗಳು ಸಜ್ಜುಗೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ.

ಬಿಸಿಯೂಟಕ್ಕೆ ಅಗತ್ಯವಾದ ಪಡಿತರ, ಬೇಳೆ, ತರಕಾರಿ, ಮೊಟ್ಟೆ ತಂದಿಟ್ಟುಕೊಳ್ಳಬೇಕು. ಶುದ್ಧ ಕುಡಿಯುವ ನೀರು ಸಂಗ್ರಹಿಸಬೇಕು. ಅಡುಗೆ ಸಿಬ್ಬಂದಿ, ಸಹಾಯಕ ಆರೋಗ್ಯ ತಪಾಸಣೆ ನಡೆಸಬೇಕು. ಸಿಹಿಯೂಟದ ಜತೆಗೆ ಮೊದಲ ದಿನವೇ ಬೇಯಿಸಿದ ಮೊಟ್ಟೆ ವಿತರಣೆ ಮಾಡಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು, ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ಇತರೆ ಸಿಬ್ಬಂದಿ ಮೇ 30ರಂದು ಕಡ್ಡಾಯವಾಗಿ ಹಾಜರಿದ್ದು ಮಕ್ಕಳನ್ನು ಸ್ವಾಗತಿಸಬೇಕು. ಶಾಲಾ ಆವರಣದಲ್ಲಿ ಹಬ್ಬದ ವಾತಾವರಣ ಇರುವಂತೆ ನೋಡಿಕೊಳ್ಳಬೇಕು. ನಂತರ ಮಕ್ಕಳ ದಾಖಲಾತಿ ಕಡೆ ಗಮನಹರಿಸಬೇಕು. ಶಿಕ್ಷಕರು ಮನೆಮನೆಗೆ ತೆರಳಿ ಮಕ್ಕಳನ್ನು ಕರೆತರಬೇಕು ಎಂದು ಸೂಚಿಸಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ