Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕೆಎಲ್ ಇ ಸಂಸ್ಥೆಯ ಚುನಾವಣೆ ರದ್ದು : ಆಡಳಿತ ಮಂಡಳಿಗೆ ನೂತನ ಸದಸ್ಯರ ಆಯ್ಕೆ

ಬೆಳಗಾವಿ: ಕರ್ನಾಟಕ ಲಿಂಗಾಯತ ಎಜ್ಯುಕೇಶನ್ ಸೊಸೈಟಿಯ (ಕೆಎಲ್‌ಇ) ಮುಂದಿನ ಅವಧಿಗೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೊಸೈಟಿಯ ಚುನಾವಣಾಧಿಕಾರಿಗಳು ಬುಧವಾರ ಅಧಿಕೃತ ಪ್ರಕಟಣೆ ಮೂಲಕ ಈ ಮಾಹಿತಿಯನ್ನು ತಿಳಿಸಿದ್ದಾರೆ.

ಪ್ರಕಟಣೆಯ ಪ್ರಕಾರ, ಕೌಜಲಗಿ ಮಹಾಂತೇಶ ಶಿವಾನಂದ ಅವರು ಅಧ್ಯಕ್ಷರಾಗಿ, ತಟವಟಿ ಬಸವರಾಜ ಶಿವಲಿಂಗಪ್ಪ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ಬೆಳಗಾವಿ ಆಡಳಿತ ಮಂಡಳಿಯ ಸದಸ್ಯರಾಗಿ ಕೋರೆ ಅಮಿತ ಪ್ರಭಾಕರ, ಬಾಗೇವಾಡಿ ಪ್ರವೀಣ ಅಶೋಕ, ದೊಡವಾಡ ಪ್ರೀತಿ ಕರಣ, ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ, ಕೊಳ್ಳಿ ಮಲ್ಲಿಕಾರ್ಜುನ ಚನಬಸಪ್ಪ, ಮೆಟಗುಡ್ ವಿಜಯ ಶ್ರೀಶೈಲಪ್ಪ, ಮುನವಳ್ಳಿ ಜಯಾನಂದ (ರಾಜು) ಮಹಾದೇವಪ್ಪ, ಮುನವಳ್ಳಿ ಮಂಜುನಾಥ ಶಂಕರಪ್ಪ, ಪಾಟೀಲ ಬಸವರಾಜ ರುದ್ರಗೌಡ, ಪಾಟೀಲ ವಿಶ್ವನಾಥ ಈರನಗೌಡ, ಪಾಟೀಲ ಯಲ್ಲನಗೌಡ ಶಿವಮೊಗ್ಗೆಪ್ಪ ಹಾಗೂ ಪಟ್ಟೇದ ಅನೀಲ ವಿಜಯಬಸಪ್ಪ ಆಯ್ಕೆಯಾಗಿದ್ದಾರೆ.

ಈ ಹಿನ್ನೆಲೆಯಲ್ಲಿ, ಶನಿವಾರ ಫೆಬ್ರುವರಿ 7, 2026ರಂದು ಹುಬ್ಬಳ್ಳಿಯ ಬಿ.ವಿ. ಭೂಮರಡ್ಡಿ ಅಭಿಯಾಂತ್ರಿಕ ಹಾಗೂ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಮತ್ತು ರವಿವಾರ ಫೆಬ್ರುವರಿ 8, 2026ರಂದು ಬೆಳಗಾವಿಯ ಲಿಂಗರಾಜ ಮಹಾವಿದ್ಯಾಲಯದ ಆವರಣದಲ್ಲಿ ನಡೆಯಬೇಕಾಗಿದ್ದ ಸೊಸೈಟಿಯ ಪದಾಧಿಕಾರಿಗಳ ಆಯ್ಕೆಗಾಗಿ ನಿಗದಿಪಡಿಸಿದ್ದ ಮತದಾನವನ್ನು ರದ್ದುಪಡಿಸಲಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೀಲಿ ಡ್ರಮ್ ಕೊಲೆ ಪ್ರಕರಣ : ಪತ್ನಿ ಮುಸ್ಕಾನ್‌, ಪ್ರಿಯಕರ ಸಾಹಿಲ್‌ಗೆ ಮರಣದಂಡನೆ ಶಿಕ್ಷೆRCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ