ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶನಿವಾರ ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಮಹತ್ವದ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ, ಮುಂದಿನ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ. ಶಿವಕುಮಾರ್ ಅವಿರೋಧವಾಗಿ ಆಯ್ಕೆಯಾಗುವುದು ನಿಚ್ಚಳವಾಗಿದೆ.
ಸಭಯಲ್ಲಿ ಸಿದ್ದರಾಮಯ್ಯ ಅವರೇ ಮುಂದಿನ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಅವರ ಹೆಸರು ಸೂಚಿಸಲಿದ್ದಾರೆ. ಶಾಸಕಾಂಗ ಪಕ್ಷದ ಸದಸ್ಯರು ಅವಿರೋಧವಾಗಿ ನೂತನ ನಾಯಕರನ್ನಾಗಿ ಶಿವಕುಮಾರ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಿರ್ಣ ಯ ಆಧರಿಸಿ ಎಐಸಿಸಿಯು ನೂತನ ಮುಖ್ಯಮಂತ್ರಿ ಹೆಸರನ್ನು ಅಧಿಕೃತವಾಗಿ ಘೋಷಿಸಲಿದೆ.
ಸಿಎಲ್‌ಪಿ ಸಭೆಯಲ್ಲಿ ನೂತನ ಮುಖ್ಯಮಂತ್ರಿ ಪ್ರಮಾಣವಚನ ದಿನಾಂಕದ ಬಗ್ಗೆಯೂ ನಿರ್ಧಾರವಾಗಲಿದೆ. ವಿಧಾನಸೌಧ ಭವ್ಯಮೆಟ್ಟಿಲಿನ ಎದುರು ನಡೆಯುತ್ತಿರುವ ಸಿದ್ಧತೆ ನಡೆದಿದೆ.
ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬಳಿಕ ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಸೇರಿದಂತೆ ಹಿರಿಯ ನಾಯಕರ ಜತೆ ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಲಿದ್ದಾರೆ. ಶಾಸಕಾಂಗ ಪಕ್ಷದ ನಾಯಕನಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ.
